ವಿಜಯಪುರ: ೨೦೨೩-೨೪ ನೆ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ಮತ್ಸ್ಯ ವಾಹಿನಿ ಯೋಜನೆ ಅಡಿಯಲ್ಲಿ ತ್ರಿಚಕ್ರ ವಾಹನಗಳನ್ನು ಪರವಾನಿಗೆ ಆಧಾರದಲ್ಲಿ ಪಡೆಯಲು ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಜಿಲ್ಲೆಗೆ ಒಟ್ಟು ೩ ಭೌತಿಕ ಗುರಿಗಳಿದ್ದು, ಆಯ್ಕೆಯಾಗುವ ಅರ್ಜಿದಾರರು ಇಲಾಖೆಗೆ ಭದ್ರತಾ ಠೇವಣಿ (ಸಾಮಾನ್ಯ ವರ್ಗದವರು ಒಂದು ಲಕ್ಷ ರೂಪಾಯಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರು ೫೦ ಸಾವಿರ ರೂಪಾಯಿ) ಮೊತ್ತವನ್ನು ನೀಡಬೇಕಿರುತ್ತದೆ. ಅರ್ಜಿ ಸಲ್ಲಿಸಲು ಮಾ.೧೯ ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ವಿಜಯಪುರ, ಮುದ್ದೇಬಿಹಾಳ (೯೮೮೬೮೨೦೭೬೧) ಇವರನ್ನು ಸಂಪರ್ಕಿಸಬಹುದು ಎಂದು ವಿಜಯಪುರ ಮೀನುಗಾರಿಕೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
