ಅಫಜಲಪುರ: ಭೀಮಾ ನದಿ ಬತ್ತಿರುವದರಿಂದ ನೆರೆ ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಅಥವಾ ತಾತ್ಕಾಲಿಕವಾಗಿ ಬಸವಸಾಗರ ಜಲಾಶಯದಿಂದ ಕಾಲುವೆ ಮೂಲಕ ನೀರು ಹರಿಸುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕಲಬುರಗಿ ನಗರಕ್ಕೆ ಆಗಮಿಸಿದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅವರಿಗೆ ರೈತರು ಮನವಿ ಸಲ್ಲಿಸಿದರು.
ಈ ವೇಳೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ರಮೇಶ್ ಹೂಗಾರ ಮಾತನಾಡಿ, ಈ ಬಾರಿ ರಾಜ್ಯದಲ್ಲಿ ಮಳೆ ಇಲ್ಲದೆ ಬೆಳೆಗಳು ಸಂಪೂರ್ಣ ಹಾಳಾಗಿ ಹೋಗಿದ್ದು ಜನ, ಜಾನುವಾರುಗಳು ಕುಡಿಯುವ ನೀರಿಗಾಗಿ ಪರಿತಪಿಸುವಂತಾಗಿದೆ. ಹೀಗಾಗಿ ಬರಗಾಲ ಹಿಡಿದ ಪ್ರದೇಶ ಎಂದು ಘೋಷಿಸಿ ಪ್ರತಿ ಎಕರೆಗೆ ರೂ.25,000 ಅಂತೆ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಧರ್ಮರಾಜ್ ಸಾವು, ಭಾಗಣ್ಣ ಕುಂಬಾರ, ಕಂಟೆಪ್ಪ ಹನೂರು,
ರೇವಣಸಿದ್ದಯ್ಯ, ಮಲ್ಲು ಸೋಲಾಪುರ ಸೇರಿದಂತೆ ಇತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

