ಆಲಮೇಲ: ಪಟ್ಟಣದಲ್ಲಿನ ಮನೆಗಳ ಹಂಚಿಕೆಯಲ್ಲಿ ಅಕ್ರಮ ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರವಾದ) ಪಧಾದಿಕಾರಿಗಳು ಮಂಗಳವಾರ ಪಟ್ಟಣ ಪಂಚಾಯತಿ ಎದುರು ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡು ಬುಧವಾರ ಎರಡು ದಿನ ಪೂರ್ಣಗೊಂಡರೂ ಇಲ್ಲಿವರೆಗೂ ಯಾವುದೆ ಅಧಿಕಾರಿಗಳು ಸಮಸ್ಯೆ ಆಲಿಸಲು ಬಾರದ್ದರಿಂದ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಡಾ| ಬಿ.ಆರ್. ಅಂಬೇಡ್ಕರ್ ಯುವಕ ಸಂಘದ ತಾಲೂಕ ಸಂಚಾಲಕ ಶಿವು ಮೇಲಿನಮನಿ, ಹರಿಷ ಎಂಟಮಾನ ಮಾತನಾಡಿ, ಪಟ್ಟಣಲ್ಲಿನ ಅನೇಕ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಅದರಿಂದ ಬೆಸತ್ತು ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದೇವೆ. ಧರಣಿ ಸತ್ಯಾಗ್ರಹ ಸ್ಥಳಕ್ಕೆ ಜಿಲ್ಲಾ ಅಧಿಕಾರಿಗಳು ಆಗಮಿಸಿ ಇಲ್ಲಿನ ಸಮಸ್ಯೆಗಳು ಆಲಿಸಿ ನಮ್ಮೆಲ್ಲ ಬೇಡಿಕೆಗಳಿಗೆ ಲಿಖಿತ ಭರವಸೆ ನೀಡುವವರೆಗೂ ಧರಣಿ ಸತ್ಯಾಗ್ರಹ ಮುಂದುವರೆಯಲಿದೆ ಎಂದರು.
Subscribe to Updates
Get the latest creative news from FooBar about art, design and business.
Related Posts
Add A Comment

