ನಿಡಗುಂದಿ: ಸರ್ಕಾರದ ಪಂಚ ಯೋಜನೆಗಳಾದ ಅನ್ನಭಾಗ್ಯ, ನಾರಿಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮೀ, ಯುವನಿಧಿ ಯೋಜನೆಗಳು ಜನರ ಮನೆಬಾಗಿಲಿಗೆ ತಲುಪಿಸುವಲ್ಲಿ ಜಿಲ್ಲಾ ಮಟ್ಟ ಹಾಗೂ ತಾಲೂಕು ಮಟ್ಟದಲ್ಲಿ ಸಮಿತಿಯನ್ನು ರಚಿಸಲಾಗಿದೆ. ಪಂಚ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳು ಮನೆ ಬಾಗಿಲಿಗೆ ಬರುತ್ತಾರೆ. ಸರ್ಕಾರದ ಯೋಜನೆಗಳಿಂದ ಯಾರೂ ವಂಚಿತರಾಗಬಾರದು. ಇದನ್ನು ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸುವ ಗುರಿ ಸರ್ಕಾರಕ್ಕೆ ಇದೆ ಎಂದು ಬಸವನ ಬಾಗೇವಾಡಿ ಮತಕ್ಷೇತ್ರದ ಶಾಸಕರು ಹಾಗೂ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹೇಳಿದರು.
ಬುಧವಾರ ನಿಡಗುಂದಿ ಗ್ರಾಮೀಣ ವಿದ್ಯಾವರ್ಧಕ ಸಂಘದ ಪ್ರೌಡಶಾಲೆಯ ಆವರಣದಲ್ಲಿ ನಡೆದ ಬಸವನ ಬಾಗೇವಾಡಿ, ಕೊಲ್ಹಾರ, ನಿಡಗುಂದಿ, ತಾಲೂಕುಗಳ ವ್ಯಾಪ್ತಿಯ ಬಸವನ ಬಾಗೇವಾಡಿ ವಿಧಾನಸಭಾ ಮತಕ್ಷೇತ್ರದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅನ್ನಭಾಗ್ಯ ಯೋಜನೆಯಡಿ 5 ಕೆಜೆ ಅಕ್ಕಿ ವಿತರಿಸಲಾಗುತ್ತಿದೆ. ಹಾಗೂ ಉಳಿದ ಅಕ್ಕಿಯ ಮೊತ್ತ 175 ರೂಪಾಯಿಗಳನ್ನು ಡಿಬಿಟಿ ಮೂಲಕ ಫಲಾನುಭವಿಯ ಖಾತೆಗೆ ಹಾಕಲಾಗುತ್ತಿದೆ. ಶಾಲಾ ಮಕ್ಕಳಿಗೆ ವಾರಕ್ಕೆ 5 ದಿವಸ ಹಾಲು ನೀಡಲಾಗುತ್ತಿದೆ. ಮಕ್ಕಳಿಗೆ ಶೂ ಭಾಗ್ಯ, ಕೃಷಿಭಾಗ್ಯ, ಶಾದಿಬಾಗ್ಯ, ಮನಸ್ವಿನಿ, ಯಶಶ್ವಿನಿ ಯೋಜನೆಗಳು ಜಾರಿಗೆ ಮಾಡಲಾಗಿದೆ.
ನಾರಿ ಶಕ್ತಿ ಯೋಜನೆಯಿಂದ ಮಹಿಳೆಯರು ರಾಜ್ಯದ ತುಂಬೆಲ್ಲಾ ಸಂಚಾರ ಮಾಡುತ್ತಿದ್ದಾರೆ. ಅವರು ದೇವಸ್ಥಾನ, ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುತ್ತಿರುವುದರಿಂದ ಸರಕಾರಕ್ಕೆ ಆದಾಯ ಬರುತ್ತಿದೆ. ಬಡ ಮನೆಯ ಮಕ್ಕಳು ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗು ಅಭ್ಯಾಸ ಮಾಡಲು ಗೃಹಜ್ಯೋತಿ ಯೋಜನೆ ಸಹಕಾರಿಯಾಗಿದೆ. ಗೃಹಲಕ್ಷ್ಮೀ ಯೋಜನೆಯಿಂದ ಹೆಣ್ಣು ಮಕ್ಕಳು ಸ್ವಾಲಂಬಿಯಿಂದ ಬದುಕು ನಡೆಸುತ್ತಿದ್ದಾರೆ. ಯುವನಿಧಿಯಿಂದ ಉದ್ಯೋಗ ಅರಸುತ್ತಿರುವ ಯುವಕ ಯುವತಿಯರಿಗೆ ಸಹಾಯ ಆಗುತ್ತದೆ ಎಂದು ಹೇಳಿದರು.
ಬಸವನ ಬಾಗೇವಾಡಿ ಕ್ಷೇತ್ರದಲ್ಲಿ 80 ಸಾವಿರ ಕುಟುಂಬಗಳಿಗೆ ಈ ಯೋಜನೆಗಳ ಲಾಭ ಸಿಗುತ್ತಿದ್ದು, ನೂರಕ್ಕೆ ನೂರರಷ್ಟು ಈ ಯೋಜನೆಗಳು ಜನರಿಗೆ ತಲುಪಿಸುವಲ್ಲಿ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದರು.
ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಸರಕಾರ ಘೋಷಣೆ ಮಾಡಿದೆ. ಅದರಂತೆ ಶರಣರ ಆಶಯದಂತೆ ಆಡಳಿತ ನಡೆಸುತ್ತಿದೆ. ಆಲಮಟ್ಟಿಯಲ್ಲಿ ಮೀನುಗಾರಿಕೆ ಸಂಶೋಧನ ಕೇಂದ್ರ ಸ್ಥಾಪಿಸಲು ಬಜೆಟ್ ನಲ್ಲಿ ಒಪ್ಪಿಗೆ ನೀಡಿದೆ. ಇದು ಸ್ಥಳಿಯವಾಗಿ ಉದ್ಯೋಗ ಸೃಷ್ಟಿಗೆ ಸಹಕಾರಿಯಾಗಿದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾಧಿಕಾರಿ ಟಿ,ಭೂಬಾಲನ್, ಸರಕಾರದ ಪಂಚ ಯೋಜನೆಗಳಾದ ಅನ್ನಭಾಗ್ಯ, ನಾರಿಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮೀ, ಯುವನಿಧಿ ಯೋಜನೆಗಳು ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಅನುಷ್ಠಾನಕ್ಕೆ ತರಲಾಗಿದೆ. ಈ ಯೋಜನೆಗಳು ಮುಂದಿನ ಭವಿಷ್ಯಕ್ಕೆ ಸಹಕಾರಿ ಆಗಿವೆ. ಬಹುತೇಕ ಕುಟುಂಬಗಳು ಆರ್ಥಿಕವಾಗಿ ಸಾಮಾಜಿಕವಾಗಿ ಮುನ್ನೆಡೆಗೆ ಬರಲು ಸಹಕಾರಿಯಾಗಿವೆ. ಈ ಯೋಜನೆಗಳನ್ನು ಸಮಪರ್ಕವಾಗಿ ಅನುಷಾನಕ್ಕೆ ತರಲು ಅಧಿಕಾರಿಗಳು ಉತ್ಸುಕರಾಗಿದ್ದಾರೆ. ಸಾರ್ವಜನಿಕರು ಈ ಯೋಜನೆಗಳ ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಸಮಾವೇಶದಲ್ಲಿ ಉಚಿತ ಆರೋಗ್ಯ ಶಿಬಿರ ಹಾಗೂ ಸ್ಥಳದಲ್ಲಿಯೇ ಗ್ಯಾರಂಟಿ ಯೋಜನೆಗಳ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ವಿವಿಧ ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಆದೇಶ ಪ್ರತಿಯನ್ನು ನೀಡಲಾಯಿತು. ಪೌರ ಕಾರ್ಮಿಕರಿಗೆ ಸನ್ಮಾನ ಮಾಡಲಾಯಿತು.
ವೇದಿಕೆ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷುಕೇಶ್ ಸೋನಾವಣೆ, ಜಿಲ್ಲಾ ಪಂಚಾಯತ್ ಸಿಇಓ ರಿಶಿ ಆನಂದ, ಮಾಜಿ ಶಾಸಕರಾದ ರಾಜು ಆಲಗೂರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದಿ ಇಲಾಖೆಯ ಉಪನಿರ್ದೇಶಕ ಕೆ.ಕೆ.ಚವ್ವಾಣ, ಉಪ ವಿಭಾಗಾಧಿಕಾರಿ ಶ್ವೇತಾ ಬಿಡಿಕರ್ , ಹೆಸ್ಕಾಂ ಅಧಿಕ್ಷಕ ಸಿದ್ದಪ್ಪ ಉಪಸ್ಥಿತರಿದ್ದರು. ಮಹೇಶ ಗಾಳಪ್ಪಗೋಳ ನಿರೂಪಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

