ಸಿಂದಗಿ: ಪಟ್ಟಣದ ಓಂ ಶಾಂತಿ ನಗರದ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಮಾ.೧೬ರಂದು ಸಾಯಂಕಾಲ ೪:೩೦ಗಂಟೆಗೆ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ೮೮ನೆಯ ತ್ರಿಮೂರ್ತಿ ಶೀವ ಜಯಂತಿ ಹಾಗೂ ಮಹಾಶಿವರಾತ್ರಿ ಪ್ರಯುಕ್ತ ಶಿವಸ್ಮೃತಿ ಕವಿಗೋಷ್ಠಿ ಹಾಗೂ ಕಾವ್ಯ-ಕುಂಚ ಕಾರ್ಯಕ್ರಮ ಹಾಗೂ ಮಾ.೧೭ರಂದು ಬೆಳಿಗ್ಗೆ ೦೯ಗಂಟೆಗೆ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಜರುಗಲಿವೆ ಎಂದು ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ರಾಜಯೋಗಿನಿ ಬ್ರಹ್ಮಾಕುಮಾರಿ ಪವಿತ್ರಾಜಿ ತಿಳಿಸಿದ್ದಾರೆ.
ಮಾ.೧೬ರಂದು ನಡೆಯುವ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಸಿಂದಗಿ ಸಿಪಿಐ ನಾನಾಗೌಡ ಪೊಲೀಸಪಾಟೀಲ ಆಗಮಿಸಲಿದ್ದಾರೆ. ಅಧ್ಯಕ್ಷತೆಯನ್ನು ಆದರ್ಶ ವಿದ್ಯಾಲಯದ ಪ್ರಾಚಾರ್ಯ ಶಿವಪ್ಪಗೌಡ ಬಿರಾದಾರ ವಹಿಸಿಕೊಳ್ಳಲಿದ್ದಾರೆ. ಎಚ್.ಜಿ.ಕಾಲೇಜು ಉಪನ್ಯಾಸಕ ಸಿದ್ದಲಿಂಗ ಕಿಣಗಿ ಅವರಿಗೆ ಸನ್ಮಾನಿಸಲಾಗುವುದು. ಹಲವಾರು ಕವಿಗಳು ಕವನ ವಾಚನ ಮಾಡಲಿದ್ದಾರೆ. ಕಾವ್ಯ-ಕುಂಚ ಕಾರ್ಯಕ್ರಮ ಜರುಗಲಿದೆ.
ಮಾ.೧೭ರಂದು ಜರುಗುವ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ತಾಲೂಕು ದಂಡಾಧಿಕಾರಿ ಪ್ರದೀಪಕುಮಾರ ಹಿರೇಮಠ ಆಗಮಿಸಲಿದ್ದಾರೆ. ಕಾರ್ಯಕ್ರಮದ ಸಾನಿದ್ಯವನ್ನು ಪವಿತ್ರಾಜಿ ವಹಿಸಿಲಿದ್ದಾರೆ. ಆಲಮೇಲ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ರೇಣುಕಾ ಅಕ್ಕನವರು ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಗ್ರೇಡ್-೨ ತಹಶೀಲ್ದಾರ್ ಇಂದಿರಬಾಯಿ ಬಳಗಾನೂರ, ಡಾ.ಬಿ.ಜಿ.ಪಾಟೀಲ, ಸಾಹಿತಿ ಪಾರ್ವತಿ ದೇಸಾಯಿ, ಕಲಕೇರಿ ಪಿಎಸ್‌ಐ ರೋಹಿಣಿ ಪಾಟೀಲ, ಕೃಷಿ ಮಹಿಳೆ ಸುಮಂಗಲಾ ಬಿರಾದಾರ ಕಾರ್ಯಕ್ರಮದಲ್ಲಿ ಇರಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
