ವಿಜಯಪುರ: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ, ಜಿಲ್ಲಾ ಸ್ವೀಪ್ ಸಮಿತಿ, ವಿಜಯಪುರ ಇವರ ಸಹಯೋಗದಲ್ಲಿ ಗುರುವಾರ ಜಿಲ್ಲಾ ಪಂಚಾಯತಿ, ಸಭಾ ಭವನದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ-೨೦೨೪ರ ಹಿನ್ನೆಲೆಯಲ್ಲಿ ಭವಿಷ್ಯದ ಮತ್ತು ಯುವ ಮತದಾರರಿಗೆ ಮತದಾನ ಶಿಕ್ಷಣದ ಪ್ರಾಮುಖ್ಯತೆ ಜಾಗೃತಿ ಮತ್ತು ಅರಿವು ಮೂಡಿಸುವ ಸಂಬಂಧ ಶಾಲಾ, ಕಾಲೇಜು, ಕಾರ್ಯಾಲಯದ ಮುಖ್ಯಸ್ಥರುಗಳಿಗೆ ತಾಲೂಕ ಮಟ್ಟದ ಸಂಪನ್ಮೂಲ ತರಬೇತುದಾರರಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು.
ಈ ತರಬೇತಿಯ ಅತಿಥಿಗಳಾಗಿ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳಾದ ಬಿ.ಎಸ್.ಮೂಗನೂರಮಠ್, ಯೋಜನಾ ನಿರ್ದೇಶಕರಾದ ಸಿ.ಆರ್.ಮುಂಡರಗಿ, ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಸಚಿವರು ಶಂಕರಗೌಡ ಸೋಮನಾಳ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಯ ಉಪನಿರ್ದೇಶಕರು ಎನ್.ಎಚ್.ನಾಗೂರ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕರು ಡಾ.ಸಿ.ಕೆ.ಹೊಸಮನಿ, ಹಾಗೂ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಮಹಾದೇವಿ ಸೊನ್ನದ, ಇವರು ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ತರಬೇತಿಯಲ್ಲಿ ಭಾಗವಹಿಸಿದ ಶಾಲಾ, ಕಾಲೇಜು, ಕಾರ್ಯಾಲಯದ ಮುಖ್ಯಸ್ಥರುಗಳಿಗೆ ಲೋಕಸಭಾ ಸಾರ್ವತ್ರಿಕ ಚುನಾವಣೆ-೨೦೨೪ರ ಹಿನ್ನೆಲೆಯಲ್ಲಿ ಭವಿಷ್ಯದ ಮತ್ತು ಯುವ ಮತದಾರರಿಗೆ ಮತದಾನ ಶಿಕ್ಷಣ ಪ್ರಾಮುಖ್ಯತೆ ಜಾಗೃತಿ ಮತ್ತು ಅರಿವು ಮೂಡಿಸುವ ಸಂಬAಧ ಶಿಕ್ಷಾಣಾಧಿಕಾರಿಗಳು (ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ, ವಿಜಯಪುರ) ಡಾ. ಅಶೋಕ ಮಲಿಮ್ಕರ್ ಇವರು ಜಿಲ್ಲಾ ಮಟ್ಟದ ಸಮಗ್ರ ತರಬೇತಿ ಉಸ್ತುವಾರಿ ತಂಡದವರು ತರಬೇತಿಯನ್ನು ನೀಡಿದರು.
ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ, ಜಿಲ್ಲಾ ಸ್ವೀಪ್ ಸಮಿತಿ, ವಿಜಯಪುರ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು, ತಾಲೂಕು ಪಂಚಾಯತ ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಎಲ್ಲ ಶಾಲಾ ಕಾಲೇಜುಗಳ ಶಿಕ್ಷಕರು, ಪ್ರಾಂಶುಪಾಲರು ಮತ್ತು ಉಪನ್ಯಾಸಕರು ತರಬೇತಿಯಲ್ಲಿ ಭಾಗವಹಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

