ವಿಜಯಪುರ: ನಗರದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರದಲ್ಲಿ ಪ್ರಸ್ತಿತ ೨೦೨೩-೨೪ನೇ(ಜನೆವರಿ ಆವೃತ್ತಿ) ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭಗೊಂಡಿದ್ದು, ಸ್ನಾತಕ, ಸ್ನಾತಕೋತ್ತರ ಕೋರ್ಸ್ಗಳಿಗೆ ಅರ್ಜಿಯನ್ನು ಸಲ್ಲಿಸಲು ಮಾರ್ಚ್ ೩೧ರ ವರೆಗೆ ಅವಕಾಶ ಕಲ್ಪಿಸಲಾಗಿದೆ.
ಬಿಎ, ಬಿಕಾಂ, ಬಿಬಿಎ, ಬಿಸಿಎ, ಬಿಎಸ್ಸಿ (ಐಟಿ), ಬಿಎಸ್ಸಿ (೧೪ ಕಾಂಬಿನೇಷನ್ಸ್), ಬಿಎಸ್‌ಡಬ್ಲೂ, ಬಿಎಲ್‌ಐಸಿ, ಎಂಎ(೧೪ ವಿಷಯಗಳು), ಎಂಕಾಂ, ಎಂಬಿಎ(೮ ಕಾಂಬಿನೇಷನ್ಸ್), ಎಂಎಲ್‌ಐಸಿ, ಎಂಎಸ್ಸಿ(೧೬ ವಿಷಯ), ಎಂಸಿಎ, ಎಂಎಸ್‌ಡಬ್ಲೂ, ಪಿಜಿ ಸರ್ಟಿಫಿಕೇಟ್ ಪ್ರೋಗ್ರಾಮ್ಸ್, ಡಿಪ್ಲೋಮಾ ಪ್ರೋಗ್ರಾಮ್ಸ್, ಮತ್ತು ಸರ್ಟಿಫಿಕೇಟ್ ಪ್ರೋಗ್ರಾಮ್ಸ್ಗಳಿಗೆ ಪ್ರವೇಶಾತಿಯನ್ನು ಮಾಡಿಕೊಳ್ಳಲಾಗುತ್ತಿದೆ.
ಯುಜಿಸಿ ನಿಯಮಾವಳಿ ಪ್ರಕಾರ (ಭೌತಿಕ ಹಾಗೂ ರೆಗ್ಯುಲರ್) ಹಾಗೂ (ಓಪನ್ ಯೂನಿವರ್ಸಿಟಿ)ದಲ್ಲಿ ಪಡೆಯುವ ಶಿಕ್ಷಣಗಳೆರಡು ಒಂದೇ ಸಮನಾದ ಅರ್ಹತೆಯನ್ನು ಹೊಂದಿರುತ್ತದೆ.
ಆಸಕ್ತ ವಿದ್ಯಾರ್ಥಿಗಳು ಕರಾಮುವಿ ಅಧಿಕೃತ ವೆಬ್‌ಸೈಟ್ ತಿತಿತಿ.ಞsoumಥಿsuಡಿe.ಚಿಛಿ.iಟಿ ನಲ್ಲಿ ಕೋರ್ಸ್ಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಭರ್ತಿ ಮಾಡಿ ನಂತರ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಪ್ರವೇಶಾತಿಯನ್ನು ಪಡೆಯಬಹುದಾಗಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್, ಹಾಗೂ ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ ಆಟೋ/ಕ್ಯಾಬ್ ಚಾಲಕರು, ಅವರ ಮಕ್ಕಳಿಗೆ, ಕೆಎಸ್ಸಾರ್ಟಿಸಿ ನೌಕರರಿಗೆ ಭೋಧನಾ ಶುಲ್ಕದಲ್ಲಿ ರಿಯಾಯತಿ ಇರುತ್ತದೆ. ಕೋವಿಡ್-೧೯ ಸಾಂಕ್ರಾಮಿಕ ರೋಗಕ್ಕೆ ತುತ್ತಾದ ಪೋಷಕರ ಮಕ್ಕಳಿಗೆ, ತೃತೀಯ ಲಿಂಗದ ವಿದ್ಯಾರ್ಥಿಗಳಿಗೆ, ದೃಷ್ಟಿಹೀನ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯತಿ ಇರುತ್ತದೆ. ಎಸ್ಸಿ, ಎಸ್ಟಿ ಮತ್ತು ಒಬಿಸಿ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿದಲ್ಲಿ ಸರ್ಕಾರದ ಎಸ್‌ಎಸ್‌ಎಸ್ಪಿ ಮುಖಾಂತರ ವಿದ್ಯಾರ್ಥಿ ವೇತನವನ್ನು ಪಡೆಯಬಹುದು.
ವಿಜಯಪುರ ಪ್ರಾದೇಶಿಕ ಕೇಂದ್ರದಲ್ಲಿ ಎರಡನೇ ಮತ್ತು ನಾಲ್ಕನೇ ಶನಿವಾರ ಹಾಗೂ ರವಿವಾರದಂದು ಕೂಡಾ ಕಚೇರಿ ಕಾರ್ಯನಿರ್ವಹಿಸಲಿದೆ. ಹೆಚ್ಚಿನ ಮಾಹಿತಿಗಾಗಿ ಕರಾಮುವಿ ವಿಜಯಪುರ ಪ್ರಾದೇಶಿಕ ಕೇಂದ್ರ, ವಿಎಸ್.ಜಿ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಆವರಣ, ಆಕಾಶವಾಣಿ ಕೇಂದ್ರದ ಎದುರುಗಡೆ ರಿಂಗ್‌ರಸ್ತೆ ವಿಜಯಪುರ ಹಾಗೂ ಮೊಬೈಲ್ ಸಂಖ್ಯೆ: ೯೪೮೩೬೨೮೨೬೭, ೯೪೮೩೯೮೦೦೬೫, ೭೮೯೨೫೫೦೦೫೩, ೯೧೧೦೨೫೬೭೩೮ನ್ನು ಸಂಪರ್ಕಿಸಬಹುದು ಎಂದು ಕರಾಮುವಿ ಪ್ರಾದೇಶಿಕ ನಿರ್ದೇಶಕರಾದ ಮೈತ್ರಿ ಡಿ.ಎಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
