ವಿಜಯಪುರ: ಹಣವಂತರಿಗಿಂತ ಸಮಾಜಸೇವೆ ಮಾಡುವ ಗುಣವಂತರನ್ನು ಸಮಾಜ ಸ್ಮರಿಸುತ್ತದೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ. ಆರ್. ಬಿ. ಕೊಟ್ನಾಳ ಹೇಳಿದ್ದಾರೆ.
ಗುರುವಾರ ನಗರದ ಪರಮಹಂಸರ ಆಶ್ರಮದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಜೆ.ಎಸ್.ಎಸ್ ಶಿಕ್ಷಣ ಮಹಾವಿದ್ಯಾಲಯದಿಂದ ಆಯೋಜಿಸಲಾಗಿದ್ದ ಸಿಟಿಸಿ ಮತ್ತು ಎನ್.ಎಸ್.ಎಸ್. ಶಿಬಿರ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು.
ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನಾ ಕೇಂದ್ರ ಪ್ರಕಟಿಸಿರುವ ಡಾ. ಹಳಕಟ್ಟಿಯವರ ನೈಜ ಭಾಷಣದ ಎಂಟನೇ ಸಂಪುಟದ ಭಾಷಣವನ್ನು ಎಲ್ಲಾ ಪ್ರಶಿಕ್ಷಣಾರ್ಥಿಗಳು ಓದಬೇಕು. ವಿದ್ಯಾರ್ಥಿಗಳು ಯಾವಾಗಲೂ ಪುಸ್ತಕ ಪ್ರೇಮಿಯಾಗಬೇಕು. ಇದರಿಂದ ಹೆಚ್ಚಿನ ಜ್ಞಾನ ದೊರೆಯುತ್ತದೆ. ಯಾರೂ ದುಶ್ಚಟಗಳಿಗೆ ದಾಸರಾಗಬಾರದು. ಸಮಾಜದಲ್ಲಿರುವ ಅನಿಷ್ಠ ಪದ್ದತಿಗಳ ನಿರ್ಮೂಲನೆಗಾಗಿ ಶ್ರಮಿಸಬೇಕು ಎಂದು ಹೇಳಿದರು.
ರಾಷ್ಟ್ರೀಯ ಯುವ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಮತ್ತು ಎನ್.ಎಸ್.ಎಸ್. ರಾಜ್ಯ ಸಲಹಾ ಸಮಿತಿ ಸದಸ್ಯರ ಡಾ. ಜಾವೀದ ಜಮಾದಾರ ಮಾತನಾಡಿ, ಯುವ ಜನಾಂಗ ಆಸೆ, ಆಮಿಷಗಳಿಗೆ ಬಲಿಯಾಗಬಾರದು. ಆಧುನಿಕ ಜೀವನ ಶೈಲಿಗೆ ಮಾರುಹೋಗದೆ ಸ್ವಾರ್ಥ ಭಾವನೆ ಬಿಟ್ಟು ಸೇವಾ ಮನೋಭಾವ ರೂಢಿಸಿಕೊಳ್ಳಬೇಕು. ನಾಯಕತ್ವ ಶಿಸ್ತು, ಧೈರ್ಯವನ್ನು ಅಳವಡಿಸಿಕೊಂಡು ಜೀವನದಲ್ಲಿ ಸಮಾಜದ ಅಭ್ಯುದಯಕ್ಕೆ ಶ್ರಮಿಸಬೇಕು. ಬಿ.ಎಲ್.ಡಿ.ಇ ಸಂಸ್ಥೆಯು ರಾಜ್ಯಮಟ್ಟದ ಕಾರ್ಯಕ್ರಮವನ್ನು ಆಯೋಜಿಸಬೇಕು ಎಂದು ಹೇಳಿದರು.
ಬಿ.ಎಲ್.ಡಿ.ಇ ಸಂಸ್ಥೆಯ ಆಡಳಿತಾಧಿಕಾರಿ ಪ್ರೊ. ಐ. ಎಸ್. ಕಾಳಪ್ಪನವರ ಮಾತನಾಡಿ, ಶಿಕ್ಷಕರಿಗೆ ವಿದ್ಯಾರ್ಥಿಗಳ ಏಳಿಗೆಗಿಂತ ದೊಡ್ಡ ಉಡುಗೊರೆ ಬೇರೊಂದಿಲ್ಲ. ವಿದ್ಯಾರ್ಥಿಗಳ ಸಾಧನೆಯೇ ಶಿಕ್ಷಕರಿಗೆ ನೀಡುವ ದೊಡ್ಡ ಗೌರವವಾಗಿದೆ ಎಂದು ಹೇಳಿದರು.
ಎನ್.ಎಸ್.ಎಸ್ ಜಿಲ್ಲಾ ಸಂಯೋಜನಾಧಿಕಾರಿ ಡಾ.ಪ್ರಕಾಶ ರಾಠೋಡ, ಜೆ.ಎಸ್.ಎಸ್ ಮಹಾವಿದ್ಯಾಲಯದ ಪ್ರಾಚಾರ್ಯೆ ಬಿ. ವೈ. ಖಾಸನೀಸ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಸಹಪ್ರಾಧ್ಯಾಪಕ ಡಾ. ಎಂ. ಬಿ. ಕೋರಿ, ಡಾ. ಎಂ. ಎಸ್. ಹಿರೇಮಠ, ಪ್ರೊ. ಎಸ್. ಎಸ್. ಪಾಟೀಲ, ಜೆ. ಎಸ್. ಪಟ್ಟಣಶೆಟ್ಟಿ, ಪ್ರೊ. ಎ. ಎಸ್. ಮಸಳಿ, ಡಾ. ಎಸ್. ಪಿ. ಶೇಗುಣಸಿ, ಪಿ. ಡಿ. ಮುಲ್ತಾನಿ ಮುಂತಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಸಂಯೋಜಕ ಡಾ. ಬಿ. ಎಸ್. ಹಿರೇಮಠ ಪ್ರಾಸ್ತಾವಿಕಕವಾಗಿ ಮಾತನಾಡಿದರು. ಸಿಟಿಸಿ ಕಾರ್ಯದರ್ಶಿ ಪ್ರೇಮಾ ಬೀಳಗಿ ವಂದಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

