ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಹಾಗೂ ಬೆಂಗಳೂರಿನ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ಇವರ ಸಹಯೋಗದಲ್ಲಿ ‘ರಾಜಮಾತಾ ಜೀಜಾವುಮಾಸಾಹೇಬ್ ಅವರ ಜೀವನ ಮತ್ತು ಆದರ್ಶಗಳು’ ಎಂಬ ವಿಷಯದ ಕುರಿತು ಇದೇ ದಿ.೧೫ ರಂದು ಬೆಳಗ್ಗೆ ೧೧:೦೦ ಗಂಟೆಗೆ ವಿವಿಯ ಜ್ಞಾನಶಕ್ತಿ ಆವರಣದಲ್ಲಿ ಒಂದು ದಿನದ ರಾಜ್ಯ ಮಟ್ಟದ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ ತುಳಸಿಮಾಲ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಕರ್ನಾಟಕ ರಾಜ್ಯ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ವ್ಯವಸ್ಥಾಪಕ ನಿರ್ದೇಶಕ ಡಾ. ಪ್ರಕಾಶ ಪಾಗೋಜಿ ಭಾಗವಹಿಸಲಿದ್ದಾರೆ. ವಿಶೇಷ ಆಮಂತ್ರಿತರಾಗಿ ನಗರದ ಹಿರಿಯ ನ್ಯಾಯವಾದಿ ತುಳಸಿರಾಮ ಸೂರ್ಯವಂಶಿ, ಉದ್ಯಮಿ ವಿಜಯಕುಮಾರ ಚವ್ಹಾಣ, ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ತು ಜಿಲ್ಲಾಧ್ಯಕ್ಷ ಬಿ.ಬಿ.ಶೇವಳಕರ ಹಾಗೂ ಮಹಾನಗರ ಪಾಲಿಕೆ ಸದಸ್ಯ ರಾಹುಲ ಜಾಧವ ಭಾಗವಹಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ವಹಿಸಲಿದ್ದಾರೆ.
ತಾಂತ್ರಿಕ ಗೋಷ್ಠಿಗಳು:
ಮೊದಲನೆಯ ತಾಂತ್ರಿಕ ಗೋಷ್ಠಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಹಂಪಿಯ ಕನ್ನಡ ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಹಾಗೂ ಸಂಸ್ಕೃತಿ ಚಿಂತಕ ಡಾ. ವಿಠ್ಠಲರಾವ ಗಾಯಕವಾಡ ‘ಮರಾಠ ಸಾಮ್ರಾಜ್ಯ, ಸಂಸ್ಕೃತಿ ಮತ್ತು ಚಾರಿತ್ರಿಕ ಅಂಶಗಳು’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದು, ಅಧ್ಯಕ್ಷತೆಯನ್ನು ವಿವಿಯ ಶಿಕ್ಷಣ ನಿಕಾಯ ಡೀನ ಡಾ. ರಾಜಕುಮಾರ ಮಾಲಿಪಾಟೀಲ ವಹಿಸಲಿದ್ದಾರೆ.
ಗೋಷ್ಠಿಯಲ್ಲಿ ನಗರದ ನಿವೃತ್ತ ಪ್ರಾಚಾರ್ಯ ಡಾ. ಎಸ್.ಜೆ.ಪವಾರ ಹಾಗೂ ವಿವಿಯ ಮಹಿಳಾ ಅಧ್ಯಯನ ಕೇಂದ್ರದ ಮುಖ್ಯಸ್ಥೆ ಡಾ. ಲಕ್ಷ್ಮೀದೇವಿ ವೈ ಉಪಸ್ಥಿತಲಿರಲಿದ್ದಾರೆ.
ಎರಡನೆಯ ಗೋಷ್ಠಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಬಾಗಲಕೋಟೆಯ ಸಾಹಿತಿ ಡಾ. ಪ್ರಕಾಶ ಗ. ಖಾಡೆ ‘ರಾಜಮಾತಾ ಜೀಜಾವುಮಾಸೇಬ ಅವರ ಆದರ್ಶ ವ್ಯಕ್ತಿತ್ವ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದು, ಅಧ್ಯಕ್ಷತೆಯನ್ನು ವಿವಿಯ ಸಮಾಜ ವಿಜ್ಞಾನ ನಿಕಾಯ ಡೀನ ಡಾ. ಶಾಂತಾದೇವಿ ಟಿ ವಹಿಸಲಿದ್ದಾರೆ. ಗೋಷ್ಠಿಯಲ್ಲಿ ವಿವಿಯ ಕನ್ನಡ ಅಧ್ಯಯನ ವಿಭಾಗದ ಮುಖ್ಯಸ್ಥ ಮಹೇಶ ಚಿಂತಾಮಣಿ ಹಾಗೂ ಕಾಲೇಜು ಅಭಿವೃದ್ಧಿ ಮಂಡಳಿಯ ನಿರ್ದೇಶಕ ಪ್ರೊ. ಯು.ಕೆ.ಕುಲಕರ್ಣಿ ಉಪಸ್ಥಿತಲಿರಲಿದ್ದಾರೆ.
ಸಮಾರೋಪ ಸಮಾರಂಭ:
ಸAಜೆ ೪:೦೦ ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲ್ಲಿ ಬೆಂಗಳೂರಿನ ಕರ್ನಾಟಕ ರಾಜ್ಯ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ವ್ಯವಸ್ಥಾಪಕ ನಿರ್ದೇಶಕ ಡಾ. ಪ್ರಕಾಶ ಪಾಗೋಜಿ ಸಮಾರೋಪ ಭಾಷಣ ಮಾಡಲಿದ್ದು, ಅಧ್ಯಕ್ಷತೆಯನ್ನು ಮಹಿಳಾ ವಿವಿಯ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ವಿಭಾಗ ಪ್ರಾಧ್ಯಪಕ ಜ್ಯೋತಿ ಧಮ್ಮ ಪ್ರಕಾಶ ವಹಿಸಲಿದ್ದಾರೆ. ಸಮಾರಂಭದಲ್ಲಿ ವಿವಿಯ ಸಮಾಜಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥ ಎಮ್.ಪಿ.ಬಳಿಗಾರ, ಬೆಂಗಳೂರಿನ ಕರ್ನಾಟಕ ಲಲಿತಕಲಾ ಅಕಾಡೆಮಿ ಮಾಜಿ ಸದಸ್ಯ ರಮೇಶ ಚವ್ಹಾಣ, ವಿವಿಯ ಅಲ್ಪಸಂಖ್ಯಾತರ ಕೋಶ ಸಂಯೋಜಕ ರಾಜು ಬಾಗಲಕೋಟ ಭಾಗವಹಿಸಲಿದ್ದಾರೆ ಎಂದು ಹಿಂದೂಳಿದ ವರ್ಗಗಳ ಕೋಶದ ಸಂಯೋಜಕ ಪ್ರೊ. ವಿಷ್ಣು ಎಂ. ಶಿಂದೆ ವಿವಿಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
