ಬಸವನಬಾಗೇವಾಡಿ: ಪ್ರತಿಯೊಬ್ಬರೂ ಒಂದಿಲ್ಲೊಂದು ಸಂದರ್ಭದಲ್ಲಿ ಗ್ರಾಹಕರು ಆಗುತ್ತಾರೆ. ಕೆಲ ಸಂದರ್ಭದಲ್ಲಿ ಗ್ರಾಹಕರಿಗೆ ಅನ್ಯಾಯವಾಗುತ್ತಿರುವದು ಕಂಡುಬರುತ್ತಿದೆ. ಗ್ರಾಹಕರು ವ್ಯವಹರಿಸುವಾಗ ಜಾಗೃತಿ ವಹಿಸುವ ಜೊತೆಗೆ ಗ್ರಾಹಕರ ಹಕ್ಕುಗಳ ಬಗ್ಗೆ ಅರಿತುಕೊಳ್ಳುವುದು ತುಂಬಾ ಮುಖ್ಯವಾಗಿದೆ ಎಂದು ಹಿರಿಯ ಸಿವ್ಹಿಲ್ ನ್ಯಾಯಾಧೀಶ ಪ್ರಕಾಶ ಅರ್ಜುನ ಬನಸೋಡೆ ಹೇಳಿದರು.
ಪಟ್ಟಣದ ಅಸ್ಕಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ವಿಶ್ವಗ್ರಾಹಕರ ಹಕ್ಕುಗಳ ದಿನಾಚರಣೆಯಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಾವು ಯಾವುದೇ ಒಂದು ವಸ್ತು ಖರೀದಿಸಲು ಹೋದ ಸಂದರ್ಭದಲ್ಲಿ ದಲ್ಲಾಳಿಗಳಿಂದ ಮೋಸ ಹೋಗಬಾರದೆಂದರೆ ನಾವು ನಮ್ಮ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು. ತಾಲೂಕು ಕಾನೂನು ಸೇವಾ ಸಮಿತಿಯಿಂದ ಮಹಿಳೆಯರು, ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ, ವಿಕಲಚೇತನರು ಹಾಗೂ ರೂ. ೩ ಲಕ್ಷ ಆದಾಯವಿದ್ದವರು ಉಚಿತ ಕಾನೂನು ಸಲಹೆ ಪಡೆದುಕೊಳ್ಳಬಹುದು. ರಾಷ್ಟ್ರೀಯ ಲೋಕಅದಾಲತನಲ್ಲಿ ಅನೇಕ ಪ್ರಕರಣಗಳನ್ನು ರಾಜೀ ಸಂಧಾನ ಮೂಲಕ ಬಗೆಹರಿಸಿಕೊಳ್ಳಬಹುದು. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು.
Subscribe to Updates
Get the latest creative news from FooBar about art, design and business.
Related Posts
Add A Comment

