ದೇವರಹಿಪ್ಪರಗಿ: ಕೋರವಾರ ಗ್ರಾಮದಲ್ಲಿ ದಿ.೧೭ ಭಾನುವಾರದಂದು ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತçಚಿಕಿತ್ಸಾ ಶಿಬಿರವನ್ನು ಏರ್ಪಡಿಸಲಾಗಿದೆ.
ತಾಲ್ಲೂಕಿನ ಕೋರವಾರ ಗ್ರಾಮದ ಸರಸ್ವತಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ವಿಜಯಪುರ ನಗರದ ಡಾ.ಪ್ರಭುಗೌಡ ಲಿಂಗದಳ್ಳಿ(ಚಬನೂರ)ರವರ ಅನುಗ್ರಹ ಕಣ್ಣಿನ ಆಸ್ಪತ್ರೆ, ಅನುಗ್ರಹ ವ್ಹಿಜನ್ ಫೌಂಡೇಷನ್ ಟ್ರಸ್ಟ್ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಯೋಗದಲ್ಲಿ ಬೆಳಿಗ್ಗೆ ೦೯ರಿಂದ ಮದ್ಯಾಹ್ನ ೦೩ ಗಂಟೆಯವರೆಗೆ ನಡೆಯುವ ಶಿಬಿರದಲ್ಲಿ ವಿಜಯಪುರದ ಅನುಗ್ರಹ ಕಣ್ಣಿನ ಆಸ್ಪತ್ರೆ ಮುಖ್ಯಸ್ಥ ಡಾ. ಪ್ರಭುಗೌಡ ಲಿಂಗದಳ್ಳಿ ಹಾಗೂ ಅವರ ತಂಡ ತಪಾಸಣೆ ನಡೆಸಲಿದೆ.
ಅರ್ಹ ರೋಗಿಗಳಿಗೆ ಉಚಿತವಾಗಿ ಕರೆದುಕೊಂಡು ಹೋಗಿ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ ಮಾಡಿ ಕಳಿಸಲಾಗುವುದು. ಕೋರವಾರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂಗಮೇಶ ಛಾಯಾಗೋಳ ಸಂಪರ್ಕ ಸಂಖ್ಯೆ:೯೭೪೨೩೦೪೫೬೫ ಹಾಗೂ ನಜೀರ್ ಚಾಂದಕವಟೆ ಸಂಪರ್ಕ ಸಂಖ್ಯೆ:೭೩೫೩೫೧೫೩೮೦ ಇವರನ್ನು ಸಂಪರ್ಕಿಸುವಂತೆ ಶಿಬಿರದ ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
