Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಲುವೆ ಒಡೆದು ನೀರು ಪಡೆಯುತ್ತಿರುವ ಕ್ರಶರ್‌ಗಳು!
(ರಾಜ್ಯ ) ಜಿಲ್ಲೆ

ಕಾಲುವೆ ಒಡೆದು ನೀರು ಪಡೆಯುತ್ತಿರುವ ಕ್ರಶರ್‌ಗಳು!

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಗಳಗಿ ಕೆರೆಗೆ ನೀರು ಪೂರೈಸುವ ಕಾಲುವೆ ಒಡೆದ ಪ್ರದೇಶಕ್ಕೆ
ರೈತರ ಭೇಟಿ | ಪ್ರತಿಭಟನೆ ಎಚ್ಚರಿಕೆ

ದೇವರಹಿಪ್ಪರಗಿ: ಗ್ರಾಮೀಣ ಕೆರೆಗಳಿಗೆ ನೀರು ಪೂರೈಸುವ ಕಾಲುವೆ ಒಡೆದು, ಪಡಗಾನೂರ ಗ್ರಾಮ ವ್ಯಾಪ್ತಿಯಲ್ಲಿನ ಕಲ್ಲು ಕ್ರಶರ್‌ಗಳ ಮಾಲೀಕರು ಅನಧಿಕೃತವಾಗಿ ನೀರು ಪಡೆಯುತ್ತಿರುವ ಪ್ರದೇಶಕ್ಕೆ ಇಂಗಳಗಿ ಗ್ರಾಮದ ರೈತರು ತೆರಳಿ ಆಕ್ರೋಶ ವ್ಯಕ್ತಪಡಿಸಿದರು.
ತಾಲ್ಲೂಕಿನ ಇಂಗಳಗಿ ಗ್ರಾಮದ ರೈತರು ತಮ್ಮ ಕೆರೆಗೆ ನೀರು ಪೂರೈಸುವ ಕಾಲುವೆಗೆ ಗುರುವಾರ ತೆರಳಿ ವಾಸ್ತವಿಕ ಸ್ಥಿತಿ ನೋಡಿ ಕೃಷ್ಣಾ ಭಾಗ್ಯ ಜಲನಿಗಮದ ಅಧಿಕಾರಿಗೆ ಮಾಹಿತಿ ನೀಡಿ ವಾಗ್ವಾದ ನಡೆಸಿದರು. ಹಾಗೂ ತಾಲ್ಲೂಕು ಆಡಳಿತ ಹಾಗೂ ಜನಪ್ರತಿನಿಧಿಗಳ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ರೈತರಾದ ಸಂತೋಷ ಬಿರಾದಾರ, ಮಂಜುನಾಥ ಕೊಕಟನೂರ ಮಾತನಾಡಿ, ಪಡಗಾನೂರ ಗ್ರಾಮದ ಪ್ರಭಾವಿ ನಾಯಕರು ಸೇರಿದಂತೆ ವಿವಿಧ ಕ್ರಶರ್‌ಗಳು ಅಕ್ರಮವಾಗಿ ನೀರು ಪಡೆಯುತ್ತಿವೆ. ಇದನ್ನು ಕೃಷ್ಣಾ ಭಾಗ್ಯ ಜಲ ನಿಗಮದ ಅಧಿಕಾರಿಗಳು ನೋಡಿದ್ದರು ಸಹ ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ. ಈ ಕುರಿತು ಪ್ರಶ್ನಿಸಿದರೆ ಅಧಿಕಾರಿ ರೈತರೊಂದಿಗೆ ಬೇಕಾಬಿಟ್ಟಿಯಾಗಿ ಮಾತನಾಡುತ್ತಾರೆ. ಜನ, ಜಾನುವಾರಗಳಿಗೆ ಕುಡಿಯುವ ನೀರು ಅಗತ್ಯವಾದ ಹಿನ್ನಲೆಯಲ್ಲಿ ಕೆರೆಗಳಿಗೆ ನೀರು ಪೂರೈಸಲಾಗುತ್ತಿದೆ. ಯಾವುದೇ ರೈತರು ಅನಗತ್ಯವಾಗಿ ನೀರು ಪಡೆದರೆ ಅವರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸ್ವತಃ ಜಿಲ್ಲಾ ಉಸ್ತುವಾರಿ ಸಚಿವರೇ ಎಚ್ಚರಿಕೆ ನೀಡಿದ್ದಾರೆ. ಈಗ ನೋಡಿದರೆ ಅವರದೇ ಪಕ್ಷದ ನಾಯಕರು ಹಾಗೂ ಕಲ್ಲು ಕ್ರಶರ್ ಮಾಲೀಕರು ತಮ್ಮ ಕಲ್ಲುಗಣಿಗಳನ್ನು ತುಂಬಿಸಿರುತ್ತಾರೆ. ಇವರ ಮೇಲೆ ಯಾವುದೇ ಕಾನೂನುಕ್ರಮ ಇಲ್ಲವೇ ಹೇಗೆ? ಸಾಮಾನ್ಯರಿಗೊಂದು ನ್ಯಾಯ, ಇವರಿಗೊಂದು ನ್ಯಾಯವೇ ಹೇಗೆ? ಈ ಕುರಿತು ಆಧುನಿಕ ಭಗೀರಥರಾದ ಸಚಿವರೇ ಕ್ರಮವಹಿಸಲು ಮುಂದಾಗಬೇಕು ಎಂದರು.
ಜಿಲ್ಲಾ ಆಡಳಿತ ಕಾಲುವೆ ಮೂಲಕ ಕ್ರಶರ್‌ಗಳು ನೀರು ಪಡೆಯುವದನ್ನು ತಡೆಯಬೇಕು. ಕ್ರಶನ್ ಮಾಲೀಕರಿಗೆ ಈ ಕುರಿತು ನೋಟಿಸ್ ನೀಡಬೇಕು. ಜನತೆ ಹಾಗೂ ರೈತರ ಹಿತ ಕಾಯದೇ ಬೇಕಾಬಿಟ್ಟಿಯಾಗಿ ಕಾಲುವೆ ಒಡೆದು ನೀರು ಪಡೆಯುವವರ ಮೇಲೆ ಕಾನೂನು ಕ್ರಮ ವಹಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆಗೆ ಮುಂದಾಗುವುದು ಅನಿವಾರ್ಯ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ರೈತರಾದ ಅರುಣ ಹುಗ್ಗಿ, ಸಿದ್ದಪ್ಪ ತಳವಾರ, ಸಂಗು ಪೂಜಾರಿ, ಸಂತೋಷ ಇಂಡಿ ಶಂಕರಗೌಡ ಬಿರಾದಾರ, ಶಿವು ಕೋಣ್ಣೂರ, ಸಂಜೀವ ಗೊಡ್ಯಾಳ, ಮಂಜುನಾಥ ಚೌಧರಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.