ನವದೆಹಲಿ: ಚುನಾವಣೆಗೆ ತಯಾರಾಗಿರುವ ದೇಶದಲ್ಲಿ ಯಾವಾಗ ಚುನಾವಣೆ ಎಂದು ಜನ ಕಾಯುತ್ತಿದ್ದರು. ಜನರ ನಿರೀಕ್ಷೆಗೆ ಉತ್ತರಿಸಿರುವ ಚುನಾವಣಾ ಆಯೋಗ ಕೊನೆಗೆ ಒಂದು ದಿನವನ್ನು ತಿಳಿಸಿದೆ. 2024ರ ಲೋಕಸಭೆ ಚುನಾವಣೆಯ ದಿನಾಂಕವನ್ನು ಶನಿವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು ಎಂದು ಭಾರತೀಯ ಚುನಾವಣಾ ಆಯೋಗ ಮಾರ್ಚ್ 15ರ ಮಧ್ಯಾಹ್ನ ತಿಳಿಸಿದೆ.
ಭಾರತೀಯ ಚುನಾವಣಾ ಆಯೋಗ ತನ್ನ ಅಧಿಕೃತ ಟ್ವಿಟ್ಟರ್‌ನಲ್ಲಿ ಲೋಕಸಭಾ ಚುನಾವಣೆ ಕುರಿತು ಸಂಕ್ಷಿಪ್ತ ಹೇಳಿಕೆಯನ್ನು ಪೋಸ್ಟ್ ಮಾಡಿದೆ. ಜೊತೆಗೆ ನಾಲ್ಕು ವಿಧಾನಸಭಾ ಚುನಾವಣೆಗಳ ದಿನಾಂಕಗಳನ್ನು ಅದೇ ಸಮಯದಲ್ಲಿ ಘೋಷಿಸುವುದಾಗಿ ತಿಳಿಸಿದೆ.
ಸಾರ್ವತ್ರಿಕ ಚುನಾವಣೆಗಳು 2024 ಮತ್ತು ಕೆಲವು ರಾಜ್ಯಗಳ ಅಸೆಂಬ್ಲಿಗಳ ವೇಳಾಪಟ್ಟಿಯನ್ನು ಪ್ರಕಟಿಸಲು ಚುನಾವಣಾ ಆಯೋಗದ ಪತ್ರಿಕಾಗೋಷ್ಠಿ ಮಾರ್ಚ್ 16 ರ ಶನಿವಾರ ನಡೆಯಲಿದೆ. ಇದು ಚುನಾವಣಾ ಆಯೋಗದ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಲೈವ್‌ಸ್ಟ್ರೀಮ್ ಆಗುತ್ತದೆ” ಎಂದು ಟ್ವೀಟ್ ಮಾಡಲಾಗಿದೆ.
Subscribe to Updates
Get the latest creative news from FooBar about art, design and business.
Related Posts
Add A Comment

