ಮುದ್ದೇಬಿಹಾಳ: ಗ್ಯಾರಂಟಿ ಯೋಜನೆಗಳನ್ನು ಶೀಘ್ರವಾಗಿ ಜಾರಿಗೊಳಿಸುವ ಮೂಲಕ ಕಾಂಗ್ರೇಸ್ ಸರ್ಕಾರ ನುಡಿದಂತೆ ನಡೆದಿದೆ ಎಂದು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಗುರು ತಾರನಾಳ ಹೇಳಿದರು.
ಪಟ್ಟಣದ ತಾಲೂಕು ಪಂಚಾಯತ ಸಭಾ ಭವನದಲ್ಲಿ ಗ್ಯಾರಂಟಿ ಯೋಜನೆಗಳ ಸಲಹಾ ಸಮಿತಿಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಮೇಲ್ವಿಚಾರಣೆಗಾಗಿ ಅನುಷ್ಠಾನ ಸಮಿತಿ ರಚಿಸಿ ಎಲ್ಲ ಫಲಾನುಭವಿಗಳಿಗೆ ಯೋಜನೆಗಳು ತಲುಪುವಂತೆ ಕ್ರಮ ಕೈಗೊಂಡು ಕಾಂಗ್ರೇಸ್ ಪಕ್ಷ ಜನಸಾಮಾನ್ಯರ ಪಕ್ಷ ಎಂದು ಮತ್ತೊಮ್ಮೆ ಸಾಬೀತು ಮಾಡಿದೆ. ಇನ್ನು ಮುಂದೆ ಯೋಜನೆಗಳ ಫಲಾನುಭವಿಗಳಿಗೆ ಸಮಸ್ಯೆಯಾದಲ್ಲಿ ಕಚೇರಿಗೆ ತಿರುಗಾಡುವ ಅವಶ್ಯಕತೆ ಇಲ್ಲ. ಸಮಿತಿಯ ಪದಾಧಿಕಾರಿಗಳನ್ನು ಸಂಪರ್ಕಿಸಿ ತಮ್ಮ ಸಮಸ್ಯೆ ತಿಳಿಸಿ ಪರಿಹಾರ ಕಂಡುಕೊಳ್ಳಬಹುದು ಎಂದರು.
ಸಮಿತಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿದ ಶಿವಶಂಕರಗೌಡ ಹಿರೇಗೌಡರ ಮಾತನಾಡಿದರು.
ಈ ವೇಳೆ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಸದ್ದಾಂ ಕುಂಟೋಜಿ, ನಾಲತವಾಡ ಪಟ್ಟಣದ ಪಂಚಾಯತ ನ ಸದಸ್ಯ ಪೃಥ್ವಿರಾಜ ನಾಡಗೌಡ, ಪ.ಜಾ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಜಿ.ವಿಜಯಕರ, ಯುವ ಕಾಂಗ್ರೇಸ್ ಅಧ್ಯಕ್ಷ ರಫೀಕ ಶಿರೋಳ, ಪುರಸಭೆ ಸದಸ್ಯರುಗಳಾದ ಮಹೆಬೂಬ ಗೊಳಸಂಗಿ, ರಿಯಾಜ ಢವಳಗಿ, ಯಲ್ಲಪ್ಪ ನಾಯಕಮಕ್ಕಳ, ಮಾಜಿ ಸದಸ್ಯ ಗೋಪಿ ಮಡಿವಾಳರ, ತಿಪ್ಪಣ್ಣ ದೊಡಮನಿ, ಸಿಕಂದರ ಜಾನ್ವೇಕರ ಸೇರಿದಂತೆ ಮತ್ತಿತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

