Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ

ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಏ.19ರಿಂದ 7 ಹಂತಗಳಲ್ಲಿ ಲೋಕಸಭೆ ಚುನಾವಣೆ
(ರಾಜ್ಯ ) ಜಿಲ್ಲೆ

ಏ.19ರಿಂದ 7 ಹಂತಗಳಲ್ಲಿ ಲೋಕಸಭೆ ಚುನಾವಣೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕರ್ನಾಟಕದಲ್ಲಿ 2 ಹಂತಗಳಲ್ಲಿ ಮತದಾನ | ಜೂ.4ರಂದು ಫಲಿತಾಂಶ | ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಮಾಹಿತಿ

ನವದೆಹಲಿ: ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದ್ದು, ಏಪ್ರಿಲ್‌ 19ರಿಂದ 7 ಹಂತಗಳಲ್ಲಿ ದೇಶದಾದ್ಯಂತ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಜೂನ್‌4 ರಂದು ಫಲಿತಾಂಶ ಪ್ರಕಟವಾಗಲಿದೆ.
ಮಾ.16ರಿಂದ ದೇಶದಾದ್ಯಂತ ನೀತಿ ಸಂಹಿತೆ ಜಾರಿಯಾಗಲಿದ್ದು, ಏಪ್ರಿಲ್ 26ರಂದು ಮೊದಲ ಹಂತದ ಮತದಾನ ಮತ್ತು ಮೇ 7ರಂದು ಎರಡನೇ ಹಂತದ ಮತದಾನ ಪ್ರಕ್ರಿಯೆ ನಡೆಯಲಿದೆ. 14 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತ್ತು ಇನ್ನುಳಿದ 14 ಕ್ಷೇತ್ರಗಳಿಗೆ 2ನೇ ಹಂತದಲ್ಲಿ ಮತದಾನ ನಡೆಯಲಿದೆ.
ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್‌ ಕುಮಾರ್‌ ಅವರು ಪತ್ರಿಕಾಗೋಷ್ಟಿಯನ್ನು ನಡೆಸಿದ್ದು, ಪತ್ರಿಕಾಗೋಷ್ಟಿಯಲ್ಲಿ ಚುನಾವಣಾ ಆಯುಕ್ತರಾದ ಜ್ಞಾನೇಶ್‌ ಕುಮಾರ್‌ ಮತ್ತು ಸುಖಬೀರ್‌ ಸಂಧು ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.
ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ರಾಜೀವ್‌ ಕುಮಾರ್‌, ಪ್ರತಿಯೊಂದು ಚುನಾವಣೆ ನಮಗೆ ಪರೀಕ್ಷೆ ಇದ್ದಂತೆ, ನ್ಯಾಯ ಸಮ್ಮತ, ಮುಕ್ತ ಪಾರದರ್ಶಕ ಚುನಾವಣೆ ನಮ್ಮ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.
ನಾವು ರಾಷ್ಟ್ರಕ್ಕೆ ನಿಜವಾದ ಹಬ್ಬದ, ಪ್ರಜಾಸತ್ತಾತ್ಮಕ ವಾತಾವರಣವನ್ನು ನೀಡಲು ಬದ್ಧರಾಗಿದ್ದೇವೆ. 17ನೇ ಲೋಕಸಭೆಯ ಅವಧಿಯು 16 ಜೂನ್ 2024 ರಂದು ಮುಕ್ತಾಯಗೊಳ್ಳಲಿದೆ. ಆಂಧ್ರ ಪ್ರದೇಶ, ಒಡಿಶಾ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ವಿಧಾನಸಭೆಯ ಅವಧಿ ಕೂಡ ಜೂನ್ 2024 ರಲ್ಲಿ ಅವಧಿ ಮುಗಿಯಲಿದೆ. ಇದೇ ವೇಳೆ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಗಳು ನಡೆಯಲಿವೆ ಎಂದು ಹೇಳಿದ್ದಾರೆ.
10 ಲಕ್ಷದ 5 ಸಾವಿರ ಮತಗಟ್ಟೆಗಳ ರ್ಸತಾಪನೆ ಮಾಡಲಾಗಿದೆ. ದೇಶದಲ್ಲಿ 97 ಕೋಟಿ ಮತದಾರರಿದ್ದಾರೆ. ಮತದಾನಕ್ಕೆ 55 ಲಕ್ಷ ಇವಿಎಂಗಳ ವ್ಯವಸ್ಥೆ ಮಾಡಲಾಗಿದೆ. 1.5ಕೋಟಿ ಅಧಿಕಾರಿಗಳು ಭದ್ರತಾ ಸಿಬ್ಬಂದಿಗಳ ನಿಯೋಜನೆ ಮಾಡಲಾಗುವುದು. 49.7ಕೋಟಿ ಪುರುಷ ಮತದಾರರಿದ್ದಾರೆ. 1.8 ಕೋಟಿ ಮತದಾರರು ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ. 47.1ಕೋಟಿ ಮಹಿಳಾ ಮತದಾರರಿದ್ದಾರೆ. 85 ವರ್ಷಕ್ಕಿಂತ ಮೇಲ್ಪಟ್ಟ 82 ಲಕ್ಷ ಮತದಾರರಿದ್ದಾರೆ. 19.74 ಯುವ ಮತದಾರರಿದ್ದಾರೆ. 12 ರಾಜ್ಯಗಳಲ್ಲಿ ಮಹಿಳಾ ಮತದಾರರ ಸಂಖ್ಯೆ ಹೆಚ್ಚಳವಾಗಿದೆ. 2.18 ಲಕ್ಷ ಶತಾಯುಷಿಗಳು ಮತ ಚಲಾಯಿಸಲಿದ್ದಾರೆ. 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಪುರುಷ ಮತದಾರರಿಗಿಂತ ಹೆಚ್ಚಿನ ಮಹಿಳೆಯರನ್ನು ಹೊಂದಿವೆ ಎಂದು ಹೇಳಿದ್ದಾರೆ.
ಮತಗಟ್ಟೆಗಳಲ್ಲಿ ವ್ಜೀಲ್ ಚೇರ್‌, ಹೆಲ್ಪ್‌ ಡೆಸ್ಕ್‌ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಲಾಗುವುದು, 40%ಕ್ಕೂ ಅಧಿಕ ವಿಕಲಚೇತನ ಮತದಾರರು ಮನೆಯಿಂದಲೇ ಮತದಾನ ಮಾಡಲು ವ್ಯವಸ್ಥೆ ಮಾಡಲಾಗುವುದು. ಅಭ್ಯರ್ಥಿಗಳ ಕ್ರಿಮಿನಲ್ ಕೇಸ್‌ಗಳ ಬಗ್ಗೆ ಮಾಹಿತಿ ನೀಡುವುದು ಕಡ್ಡಾಯವಾಗಿದೆ. ಅಕ್ರಮವಾಗಿ ಹಣ ಸಾಗಿಸಿದರೆ, ಮತದಾರರಿಗೆ ಹಣ ಹಂಚಿಕೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು, ಪೊಲೀಸರಿಂದ ಚೆಕ್‌ ಪೋಸ್ಟ್‌ಗಳಲ್ಲಿ ಪರಿಶೀಲನೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಸಿ-ವಿಜಿಲ್ ಆ್ಯಪ್‌ನಲ್ಲಿ ನಾಗರಿಕರು ಯಾವುದೇ ಮತದಾನ ಸಂಬಂಧಿತ ದೂರುಗಳನ್ನು ನೋಂದಾಯಿಸಿಕೊಳ್ಳಬಹುದು. ಪರಿಸ್ಥಿತಿಯನ್ನು ಅವಲೋಕಿಸಲು 100 ನಿಮಿಷಗಳಲ್ಲಿ ಚುನಾವಣಾ ಆಯೋಗ ತಂಡವನ್ನು ಕಳುಹಿಸಲಿದೆ. ಚುನಾವಣಾ ಸಮಯದಲ್ಲಿ ಯಾವುದೇ ಹಿಂಸಾಚಾರ ಸಂಭವಿಸದಂತೆ ಚುನಾವಣಾ ಆಯೋಗವು ಕಾರ್ಯನಿರ್ವಹಿಸುತ್ತಿದೆ, ಪಕ್ಷಗಳು ನೀತಿ ಸಂಹಿತೆಯನ್ನು ಪಾಲಿಸಬೇಕು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.
ಸೂರ್ಯಾಸ್ತದ ಬಳಿಕ ಎಟಿಎಂ ವಾಹನ ಸಂಚಾರಕ್ಕೆ ಅನುಮತಿ ಇಲ್ಲ, ಸುಳ್ಳು ಮಾಹಿತಿಯನ್ನು ರವಾನೆ ಮಾಡುವಂತಿಲ್ಲ, 24 ಗಂಟೆ ಪೊಲೀಸ್‌ ಕಂಟ್ರೋಲ್‌ ರೂಂ ಕಾರ್ಯಾಚರಣೆ ಇರಲಿದೆ, ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಲಿದ್ದೇವೆ, ಜನರನ್ನು ಪ್ರಚೋದನೆ, ಇಬ್ಬಾಗ ಮಾಡುವಂತಿಲ್ಲ, ದ್ವೇಷ ಭಾಷಣ ಮಾಡುವಂತಿಲ್ಲ, ಸುಳ್ಳು ಜಾಹೀರಾತನ್ನು ಪ್ರಸಾರ ಮಾಡುವಂತಿಲ್ಲ, ವೈಯಕ್ತಿಕ ಟೀಕೆ ಮಾಡುವಂತಿಲ್ಲ ಎಂದು ಹೇಳಿದ್ದಾರೆ.

ಏ.೨೬ರಂದು ಮೊದಲ ಹಂತದಲ್ಲಿ ಚುನಾವಣೆ ನಡೆಯಲಿರುವ ಜಿಲ್ಲೆಗಳು

ಮೊದಲ ಹಂತದಲ್ಲಿ ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರ ಉತ್ತರ, ಬೆಂಗಳೂರು ದಕ್ಷಿಣ, ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರ, ಬೆಂಗಳೂರು ಕೇಂದ್ರ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಮೈಸೂರು-ಕೊಡಗು, ಕೋಲಾರ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ.

ಮೇ.೭ರಂದು ಎರಡನೇ ಹಂತದ ಚುನಾವಣೆ ನಡೆಯಲಿರುವ ಜಿಲ್ಲೆಗಳು
ಬೆಳಗಾವಿ, ಬಳ್ಳಾರಿ, ಚಿಕ್ಕೋಡಿ, ಹಾವೇರಿ-ಗದಗ, ಕಲಬುರ್ಗಿ, ಬೀದರ್‌, ಧಾರವಾಡ, ಕೊಪ್ಪಳ
ರಾಯಚೂರು, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ 2ನೇ ಹಂತದ ಮತದಾನ ನಡೆಯಲಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ

ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ
    In (ರಾಜ್ಯ ) ಜಿಲ್ಲೆ
  • ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ
    In (ರಾಜ್ಯ ) ಜಿಲ್ಲೆ
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಲಿಂ.ಚೆನ್ನಬಸವ ಶ್ರೀ, ದಿ.ಶಾಮನೂರ ಶಿವಶಂಕರಪ್ಪ ರಿಗೆ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ ಕಳ್ಳರ ಹಾವಳಿ: ಭಯಭೀತಿಯಲ್ಲಿ ನಾಗರಿಕರು
    In (ರಾಜ್ಯ ) ಜಿಲ್ಲೆ
  • ಅಂತರ್ಜಾಲದ ಬಳಕೆ ಅತ್ಯಂತ ಜಾಗರೂಕತೆಯಿಂದ ನಿರ್ವಹಣೆ ಮಾಡಿ
    In (ರಾಜ್ಯ ) ಜಿಲ್ಲೆ
  • ದ್ವೇಷ ಭಾಷಣ ವಿರೋಧಿ ಮಸೂದೆಗೆ ರಾಜ್ಯಪಾಲರು ಒಪ್ಪಬಾರದು
    In (ರಾಜ್ಯ ) ಜಿಲ್ಲೆ
  • ಪಿಪಿಪಿ ಮಾದರಿ ಬಿಜೆಪಿ ಹಾಗೂ ಮೋದಿ ಅವರ ಕೂಸು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.