ವಿಜಯಪುರ: ಇದೇ ಮಾ.೨೫ರಿಂದ ಏ.೬ ರವರೆಗೆ ಎಸ್‌ಎಸ್‌ಎಲ್ ಸಿ ಪರೀಕ್ಷೆಗಳು ನಡೆಯಲಿದ್ದು, ವ್ಯವಸ್ಥಿತ ಹಾಗೂ ಸೂಸೂತ್ರವಾಗಿ ಪರೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.
ಸೋಮವಾರ ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ನಡೆದ ಎಸ್‌ಎಸ್ ಎಲ್ ಸಿ ಪರೀಕ್ಷಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು
ಜಿಲ್ಲೆಯಲ್ಲಿ ೧೨೭ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಒಟ್ಟು ೪೧,೭೪೯ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.
ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾಗಳನ್ನು ಕಡ್ಡಾಯವಾಗಿ ಅಳವಡಿಸುವ ಕಾರ್ಯವಾಗಬೇಕು. ಪರೀಕ್ಷೆಯ ವೇಳೆ ಯಾವ ಲೋಪವಾಗದಂತೆ ಹಾಗೂ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾ ಹಂತದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನೊಳಗೊಂಡ ೮ ಜಿಲ್ಲಾ ಮಟ್ಟದ ಜಾಗೃತದಳ, ತಾಲೂಕು ಮಟ್ಟದಲ್ಲಿ ಪ್ರತಿ ತಾಲೂಕಿಗೂ ೩ ಜಾಗೃತದಳ ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದರು.
ಪರೀಕ್ಷಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಯಾವುದೇ ಅಧಿಕಾರಿ ಅಥವಾ. ಸಿಬ್ಬಂದಿ ಮೊಬೈಲ್ ಪೋನ್ ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ, ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳು ಪರೀಕ್ಷೆ ಅವಧಿಯಲ್ಲಿ ತೆಗೆಯಬಾರದು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ ಮಾತನಾಡಿ, ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕುಡಿಯುವ ನೀರು, ವಿದ್ಯುತ್ ಸೌಕರ್ಯ, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳ ಇರುವ ಕುರಿತು ಮುಂಚಿತವಾಗಿ ಪರಿಶೀಲನೆ ಮಾಡಬೇಕು. ಪರೀಕ್ಷಾ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಈ ವೇಳೆ ವೇದಿಕೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್ ಹೆಚ್ ನಾಗೂರ, ಇಂಡಿ ಉಪವಿಭಾಗಾಧಿಕಾರಿ ಅಬೀಧ್ ಗದ್ಯಾಳ, ವಿಜಯಪುರ ಡೈಯಟ್ ಸಂಸ್ಥೆಯ ಪ್ರಾಚಾರ್ಯರಾದ ಉಮಾದೇವಿ ಸೊನ್ನದ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ, ಪ್ರಾಚಾರ್ಯ ಜಗದೀಶ್ ಇದ್ದರು.
Subscribe to Updates
Get the latest creative news from FooBar about art, design and business.
ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆಸಿ :ಡಿಸಿ ಟಿ.ಭೂಬಾಲನ್
Related Posts
Add A Comment

