ವಿಜಯಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮುಸ್ಲಿಂ ವಸತಿ (ಆಂಗ್ಲ ಮಾಧ್ಯಮ) ಶಾಲೆ ಹಾಗೂ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ ೨೦೨೪-೨೫ನೇ ಸಾಲಿನ ಶೈಕ್ಷಣಿಕ ವರ್ಷದ ೬ನೇ ತರಗತಿ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮಾ.೩೧ ರವರೆಗೆ ವಿಸ್ತರಿಸಲಾಗಿದೆ.
ಅರ್ಜಿಯನ್ನು ಸೇವಾ ಸಿಂಧು ಪೋರ್ಟಲ್ website:https://sevasindhuservices.Karnataka.gov.inಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.೭೫ರಷ್ಟ್ಟು ಹಾಗೂ ಇತರೆ ವರ್ಗದ ವಿದ್ಯಾರ್ಥಿಗಳಿಗೆ ಶೇ.೨೫ರಷ್ಟು ಮೆರಿಟ್ ಅಥವಾ ಪ್ರವೇಶ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು. ವಸತಿ ಶಾಲೆಗಳಲ್ಲಿ ಶೇ.೫೦ರಷ್ಟು ಹೆಣ್ಣು ಮಕ್ಕಳಿಗಾಗಿ ಮೀಸಲಿರಿಸಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಂಗ್ಲ ಮಾಧ್ಯಮ ಶಿಕ್ಷಣ, ಉಚಿತ ಸಮವಸ್ತ್ರ, ಪಠ್ಯಪುಸ್ತಕ, ನೋಟ್‌ಬುಕ್, ಲೇಖನಿ ಸಾಮಗ್ರಿಗಳು, ಸ್ಕೂಲ್ ಬ್ಯಾಗ್ ಹಾಗೂ ಊಟ ವಸತಿ ಸೌಲಭ್ಯ ಕಲ್ಪಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಚೇರಿ, ಮೌಲಾನಾ ಆಝಾಧ ಭವನ, ಜಿಲ್ಲಾ ಪಂಚಾಯತ್, ರಸ್ತೆ, ಕನಕದಾಸ ಬಡಾವಣೆ, ವಿಜಯಪುರ ದೂ: ೦೮೩೫೨-೨೯೫೫೨೩, ತಾಲೂಕಾ ವಿಸ್ತರಣಾಧಿಕಾರಿ ವಿಜಯಪುರ ಮೊ: ೯೪೪೮೯೮೬೨೩೬, ಇಂಡಿ ತಾಲೂಕಾ ವಿಸ್ತರಣಾಧಿಕಾರಿ ಮೊ: ೯೯೦೦೨೨೯೭೮೦, ಪ್ರಾಂಶುಪಾಲರು, ಡಾ.ಎಪಿಜೆ ಅಬ್ದುಲ್ ಕಲಾಂ ಬಾಲಕಿಯರ ವಸತಿ ಶಾಲೆ ಅರಕೇರಿ ಮೊ: ೮೯೭೧೪೫೯೬೮೩, ಸಿಂದಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮೊ: ೯೯೮೦೯೫೨೯೬೦ ಹಾಗೂ ಚಡಚಣ ಮೊರಾರ್ಜಿ ಶಾಲೆಯ ಪ್ರಾಂಶುಪಾಲ ಮೊ: ೯೬೨೦೮೨೮೧೮೫, ಸರ್ಕಾರಿ ಮುಸ್ಲಿಂ ವಸತಿ ಶಾಲೆ ಅಫಜಲಪುರ ಟಕ್ಕೆ ಪ್ರಾಂಶುಪಾಲ ಮೊ: ೮೩೧೦೮೩೦೪೦೭, ಮುದ್ದೇಬಿಹಾಳ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಮೊ: ೯೮೪೪೪೯೩೩೦೬, ಇಂಡಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಮೊ: ೯೬೩೨೪೫೪೬೭೦, ಮುದ್ದೇಬಿಹಾಳ ನಂ೨ರ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಮೊ: ೭೨೫೯೧೭೯೩೯೮ ಸಂಖ್ಯೆಗೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
ಅಲ್ಪಸಂಖ್ಯಾತ ವಸತಿ ನಿಲಯ ಪ್ರವೇಶ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Related Posts
Add A Comment
