ದೇವರಹಿಪ್ಪರಗಿ: ಕಣ್ಣು ಅತ್ಯಂತ ಮಹತ್ವದ ಅಂಗ. ಅದರ ಕುರಿತು ನಿರ್ಲಕ್ಷ್ಯ ಸಲ್ಲದು ಎಂದು ಅನುಗ್ರಹ ಕಣ್ಣಿನ ಆಸ್ಪತ್ರೆ ಮುಖ್ಯಸ್ಥ ಡಾ.ಪ್ರಭುಗೌಡ ಲಿಂಗದಳ್ಳಿ(ಚಬನೂರ) ಹೇಳಿದರು.
ತಾಲ್ಲೂಕಿನ ಕೋರವಾರ ಗ್ರಾಮದಲ್ಲಿ ಅನುಗ್ರಹ ಕಣ್ಣಿನ ಆಸ್ಪತ್ರೆ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಯೋಗದಲ್ಲಿ ಇತ್ತೀಚಿಗೆ ಜರುಗಿದ ಉಚಿತ ನೇತ್ರ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದರು, ಗ್ರಾಮೀಣ ಭಾಗದಲ್ಲಿ ಕಣ್ಣಿನ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಇಂತಹ ಉಚಿತ ನೇತ್ರ ತಪಾಸಣಾ ಶಿಬಿರಗಳನ್ನು ಏರ್ಪಡಿಸಲಾಗುತ್ತಿದೆ. ೪೦ ವರ್ಷ ಮೀರಿದ ಪ್ರತಿಯೊಬ್ಬರು ಕಣ್ಣು ಪರೀಕ್ಷೆ ಮಾಡಿಸಿಕೊಂಡು ತಮ್ಮ ಕಣ್ಣಿನ ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸುವಂತೆ ಕರೆ ನೀಡಿದರು.
ಸ್ಥಳೀಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂಗಮೇಶ ಛಾಯಾಗೋಳ ಮಾತನಾಡಿ, ಇಂದಿನ ಶಿಬಿರದಲ್ಲಿ ಗ್ರಾಮೀಣ ಪ್ರದೇಶದ ಸುಮಾರು ೪೫೦ ಜನ ತಪಾಸಣೆಗೆ ಒಳಗಾಗಿದ್ದಾರೆ. ಇದರಲ್ಲಿ ಸುಮಾರು ೧೭೫ ಜನರಿಗೆ ಶಸ್ತ್ರಚಿಕಿತ್ಸೆಗೆ ಆಯ್ಕೆಯಾಗಿದ್ದು, ಶಿಬಿರ ಯಶಸ್ವಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸಂಗನಗೌಡ ಪಾಟೀಲ, ಮಲ್ಲನಗೌಡ ಬಿರಾದಾರ, ಭೋಜಪ್ಪಗೌಡ ಬಿರಾದಾರ, ಅಪ್ಪಾಸಾಹೇಗೌಡ ಪಾಟೀಲ, ಸಂಗಮೇಶ ಮ್ಯಾಗೇರಿ, ಶ್ರೀನಾಥ ಪಾಟೀಲ, ಬಸನಗೌಡ ಬಿರಾದಾರ, ಸುಬ್ಬನಗೌಡ ಪಾಟೀಲ, ಶರಣಪ್ಪ ತಾಳಿಕೋಟಿ, ನಾನಾಗೌಡ ಬೋರಾವತ, ಶರಣಬಸು ಸುಂಬಡ, ಭೀಮರಾಯ ಯತ್ನಾಳ, ಡಿ.ಸಿ.ಹೊನಮಟ್ಟಿ, ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಅನುಗ್ರಹ ಕಣ್ಣಿನ ಆಸ್ಪತ್ರೆ ಸಿಬ್ಬಂದಿ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

