ಮುದ್ದೇಬಿಹಾಳ: ಶಾಲೆಗಳು ಕೇವಲ ವಿದ್ಯಾ ಕೇಂದ್ರಗಳಲ್ಲ. ವಿದ್ಯಾರ್ಥಿಗಳ ಭವಿಷ್ಯ ನಿರ್ಮಿಸುವಲ್ಲಿ ಮತ್ತು ದೇಶವನ್ನು ಪ್ರಗತಿಯತ್ತ ಕೊಂಡೊಯ್ಯುವಲ್ಲಿ ಶ್ರಮಿಸುವ ದೇವಾಲಯಗಳು ಎಂದು ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷರೂ ಆದ ಹಿರಿಯ ನ್ಯಾಯವಾದಿ ವ್ಹಿ.ಎಂ.ನಾಗಠಾಣ ಹೇಳಿದರು.
ಪಟ್ಟಣದ ವ್ಹಿಬಿಸಿ ಹೈಸ್ಕೂಲ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಬೀಳ್ಕೋಡುವ ಸಮಾರಂಭ ಹಾಗೂ ನ್ಯಾಯಾಧೀಶೆ ಐಶ್ವರ್ಯ ಗುಡದಿನ್ನಿ ಅವರಿಗೆ ಗೌರವ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಭವ್ಯ ಭಾರತದ ಭವಿಷ್ಯ ಶಾಲಾ ಕೊಠಡಿಗಳಲ್ಲಿ ಅಡಗಿದೆ ಅನ್ನೋ ಮಾತು ಯಾರೂ ಮರೆಯುವಂತಿಲ್ಲ. ವಿದ್ಯಾರ್ಥಿಯ ಸರ್ವಾಂಗೀಣ ಬೆಳವಣಿಗೆಯಲ್ಲಿ ಗುರುವಿನ ಪಾತ್ರದ ಜೊತೆಗೆ ಪಾಲಕರ ಪ್ರೋತ್ಸಾಹ ಹಾಗೂ ಮಾರ್ಗದರ್ಶನ ಕೂಡ ಅತೀ ಅವಶ್ಯ. ವಿದ್ಯಾರ್ಥಿಯೂ ಸಹ ತನ್ನ ವಿದ್ಯಾರ್ಥಿ ಜೀವನದಲ್ಲಿ ದುಶ್ಚಟಗಳಿಗೆ ಬಲಿಯಾಗದೇ, ನಿರಂತರ ಅಭ್ಯಾಸವನ್ನು ಮೈಗೂಡಿಸಿಕೊಂಡಲ್ಲಿ ಶ್ರೇಷ್ಠ ವ್ಯಕ್ತಿಯಾಗಿ ಹೊರಬರಲು ಸಾಧ್ಯ ಎಂದರು.
ಕಸಾಪ ನಿಕಟಪೂರ್ವ ಅಧ್ಯಕ್ಷ ಎಂ.ಬಿ.ನಾವದಗಿ ಮಾತನಾಡಿ, ಸಾಧಿಸಬೇಕೆಂಬ ಛಲ ಮತ್ತು ಸತತ ಪ್ರಯತ್ನವಿದ್ದರೆ ಸಾಧನೆ ಸುಲಭ ಎಂದರು.
ಉಪನ್ಯಾಸಕ ಪರಶುರಾಮ ಚೌಡಕೇರ, ಹಿರಿಯ ನ್ಯಾಯವಾದಿಗಳಾದ ಎಸ್.ಎಂ.ಗುಡದಿನ್ನಿ ಮತ್ತು ಎಂ.ಎಸ್.ನಾವದಗಿ ಸೇರಿದಂತೆ ಶಾಲಾ ಬೋಧಕ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು. ಶಿಕ್ಷಕ ವಾಗೇಶ್ ಹಿರೇಮಠ ನಿರೂಪಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

