ದೇವರಹಿಪ್ಪರಗಿ: ಆರು ವರ್ಷದ ಒಳಗಿನ ಮಕ್ಕಳಿಗೆ ಸಾಮಾನ್ಯಜ್ಞಾನ ನೀಡುವ ಮೂಲಕ ಶಾಲಾ ಪೂರ್ವ ಶಿಕ್ಷಣ ಬಲವರ್ಧನೆಗೊಳಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಪ್ರಮುಖವಾಗಿದೆ ಎಂದು ಎಸಿಡಿಪಿಓ ಎಸ್.ಎ.ಕೋರವಾರ ಹೇಳಿದರು.
ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಜರುಗಿದ ಅಂಗನವಾಡಿ ಕಾರ್ಯಕರ್ತೆಯರ ಮೂರು ದಿನದ ತರಬೇತಿಗೆ ಚಾಲನೆ ನೀಡಿ ಮಾತನಾಡಿದರು.
ಮಕ್ಕಳು ಹೆಚ್ಚಾಗಿ ನೋಡುವುದರ ಮೂಲಕ ಕಲಿಯುತ್ತಾರೆ. ಕಾರ್ಯಕರ್ತೆಯರ ಪರಿಶ್ರಮ ಮತ್ತು ಪ್ರಯತ್ನದಿಂದ ಶಾಲಾ ಪೂರ್ವ ಶಿಕ್ಷಣ ಸರಳವಾಗುತ್ತದೆ. ಇದಕ್ಕೆ ೩ ದಿನಗಳ ತರಬೇತಿ ಸಹಕಾರಿಯಾಗಿದೆ ಎಂದರು.
ಶಿಕ್ಷಣಯಾತ್ರೆಯ ಸಂಯೋಜಕ ಸಾಗರ್ ಘಾಟಗೆ ಮಾತನಾಡಿ, ಸ್ಥಳೀಯ ಸಂಪನ್ಮೂಲಗಳ ಬಳಕೆ ಹಾಗೂ ವಿವಿಧ ಚಟುವಟಿಕೆಗಳ ಮೂಲಕ ಮಕ್ಕಳ ದೈಹಿಕ, ಮಾನಸಿಕ ವಿಕಾಸ ಮಾಡುವುದು ನಮ್ಮ ಗುರಿಯಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ ಉಜ್ವಲ ಸಂಸ್ಥೆಯ ನಿರ್ದೇಶಕ ವಾಸುದೇವ ತೋಳಬಂದಿ ಮಾತನಾಡಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸಂದೀಪ ಕಡ್ಲೇವಾಡ, ಶಶಿಕಾಂತ ಸುಂಗಠಾಣ, ಗೌಡಪ್ಪ ಬಿರಾದಾರ, ಶ್ರೀಶೈಲ ಜೋಗುರ, ಭಾಗಣ್ಣ ಹಾಳಕಿ, ಭೀಮಾಬಾಯಿ ಹೇರೂರು, ಮಲ್ಲಮ್ಮ ಹೊನ್ನಳ್ಳಿ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಉಜ್ವಲ ಸಂಸ್ಥೆಯ ಶಿಕ್ಷಣ ಯಾತ್ರೆಯ ಸಿಬ್ಬಂದಿ ಇದ್ದರು.
Subscribe to Updates
Get the latest creative news from FooBar about art, design and business.
ಶಿಕ್ಷಣ ಬಲವರ್ಧನೆಗೆ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಪ್ರಮುಖ
Related Posts
Add A Comment

