Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಣಬಿಸಿಲು: ತಂಪು ಪಾನೀಯ ಮೊರೆಹೋಗುತ್ತಿರುವ ಜನತೆ
(ರಾಜ್ಯ ) ಜಿಲ್ಲೆ

ರಣಬಿಸಿಲು: ತಂಪು ಪಾನೀಯ ಮೊರೆಹೋಗುತ್ತಿರುವ ಜನತೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಲ್ಲಂಗಡಿ ಹಣ್ಣಿನ ಬೆಲೆಯಲ್ಲಿ ಹೆಚ್ಚಳ | ಎಲ್ಲೆಡೆ ತಲೆಎತ್ತಿರುವ ಲಸ್ಸಿ, ಶರಬತ್ತು, ಜ್ಯೂಸ್ & ಎಳೆನೀರು ಅಂಗಡಿಗಳು

– ಬಸವರಾಜ ನಂದಿಹಾಳ
ಬಸವನಬಾಗೇವಾಡಿ: ದೇಶದಲ್ಲಿ ಲೋಕಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಕಾವು ಏರುತ್ತಿದ್ದರೆ ಇನ್ನೊಂದೆಡೆ ಬೇಸಿಗೆ ಬಿಸಿಲಿನ ಪ್ರಖರತೆಯಿಂದಾಗಿ ಜನರು ತಂಪು ಪಾನೀಯ ಕಡೆಗೆ ಹೋಗುತ್ತಿರುವುದು ಕಂಡುಬರುತ್ತಿದೆ. ಬಸವನಬಾಗೇವಾಡಿ ಪಟ್ಟಣದಲ್ಲಿ ಬುಧವಾರ ೩೩ ಡಿಗ್ರಿ ಸೆಲ್ಸಿಯಸ್ ಬಿಸಿಲು ಇತ್ತು.
ಶಿವರಾತ್ರಿ ಅಮವಾಸ್ಯೆ ಕಳೆದ ನಂತರ ಬಿಸಿಲು ಆರಂಭವಾಗುತ್ತದೆ. ಇನ್ನೂ ಏಪ್ರೀಲ್ ತಿಂಗಳು ಬಂದಿಲ್ಲ. ಈಗ ಬಿಸಿಲಿನ ಪ್ರಖರತೆ ಜೋರಾಗಿದೆ. ಏಪ್ರೀಲ್-ಮೇ ತಿಂಗಳಲ್ಲಿ ಬಿಸಿಲಿನ ಪ್ರಖರತೆ ಇನ್ನೂ ಹೆಚ್ಚಾಗುತ್ತದೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಈ ವರ್ಷ ಮುಂಗಾರು-ಹಿಂಗಾರು ಮಳೆ ಪ್ರಮಾಣ ಕಡಿಮೆಯಾಗಿದೆ. ಈಗಾಗಲೇ ಬಿರು ಬಿಸಿಲಿನಿಂದ ಕೆರೆ-ಕಟ್ಟೆಗಳು ಖಾಲಿಯಾಗಿ ಹೋಗಿರುತ್ತಿದ್ದವು. ಆದರೆ ಅಖಂಡ ತಾಲೂಕಿನಲ್ಲಿ ಕಾಲುವೆ ಮೂಲಕ ನೀರು ಬಿಟ್ಟಿದ್ದರಿಂದಾಗಿ ಕೆರೆಯಲ್ಲಿ ನೀರು ಕಾಣುತ್ತಿವೆ. ಇದೇ ರೀತಿಯಲ್ಲಿ ಬಿರು ಬಿಸಿಲು ಮುಂದುವರಿದರೆ ಮುಂಬರುವ ದಿನಗಳಲ್ಲಿ ಈ ನೀರು ಖಾಲಿಯಾಗುವ ಸಾಧ್ಯತೆ. ಈ ಸಲ ಸಾಮಾನ್ಯಕ್ಕಿಂತಲೂ ಹೆಚ್ಚು ತಾಪಮಾನ ಇರುತ್ತದೆ ಎಂದು ಈಗಾಗಲೇ ಹವಾಮಾನ ತಜ್ಞರು ಹೇಳಿದ್ದಾರೆ.
ಬಿಸಿಲಿನ ಅಬ್ಬರಕ್ಕೆ ಜನರು ತಂಪು ಪಾನೀಯ, ಐಸ್ಕ್ರೀಂ, ಎಳುನೀರು, ಲಸ್ಸಿ, ಶರಬತ್ತು, ಕಲ್ಲಂಗಡಿ ಸೇರಿದಂತೆ ತಂಪು ಪಾನೀಯಗಳಿಗೆ ಮೊರೆಹೋಗುತ್ತಿದ್ದಾರೆ. ಬೇಸಿಗೆ ಆರಂಭವಾಗುತ್ತಿದ್ದಂತೆ ಲಸ್ಸಿ, ಶರಬತ್ತು, ವಿವಿಧ ಹಣ್ಣಿನ ಜ್ಯೂಸ್ ಅಂಗಡಿ, ಎಳುನೀರು ಅಂಗಡಿಗಳು ಹೆಚ್ಚು ತಲೆಎತ್ತುತ್ತವೆ. ಜನರು ಮಧ್ಯಾನ್ಹ ವೇಳೆಯಲ್ಲಿ ಹೆಚ್ಚು ಹೊರಗಡೆ ಬರುವುದು ಕಡಿಮೆ. ಬಿರು ಬಿಸಿಲಿನ ದಾಹ ತೀರಿಸಿಕೊಳ್ಳಲು ಲಸ್ಸಿ, ಎಳುನೀರು, ಕಲ್ಲಂಗಡಿ ಸೇರಿದಂತೆ ವಿವಿಧ ತಂಪು ಪಾನೀಯಗಳನ್ನು ಸೇವಿಸುತ್ತಿದ್ದಾರೆ. ಆದಷ್ಟು ಹೆಚ್ಚು ನೆರಳಲ್ಲಿ ಇರಲು ಬಯಸುತ್ತಿದ್ದಾರೆ. ಬೇಸಿಗೆ ಕಾಲದಲ್ಲಿ ಜನರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹುಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಹೆಚ್ಚು ಮುಂಜಾಗ್ರತಾ ಕ್ರಮ ವಹಿಸಬೇಕಿದೆ.
ಈ ಸಲ ಕಲ್ಲಂಗಡಿ ಹಣ್ಣು ಸೇರಿದಂತೆ ಬಹುತೇಕ ಎಲ್ಲ ಹಣ್ಣುಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. ಕಲ್ಲಂಗಡಿ ರೂ. ೩೦ ರಿಂದ ೮೦ ರವರೆಗೆ ಮಾರಾಟವಾಗುತ್ತಿವೆ. ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಅಂಚೆ ಕಚೇರಿ ಮುಂಭಾಗ ಕಲ್ಲಂಗಡಿ ಹಣ್ಣಿನ ಮಾರಾಟ ಕಳೆದ ಒಂದು ವಾರದಿಂದ ನಿರಂತರವಾಗಿ ನಡೆಯುತ್ತಿದೆ. ತೆಲಗಿ ರಸ್ತೆಯಲ್ಲಿ ಮಾಂತು ಲಸ್ಸಿ ಎಂಬ ಅಂಗಡಿ ಮುಂಭಾಗ ಹೆಚ್ಚು ಜನರು ಲಸ್ಸಿ ಕುಡಿಯಲು ನಿಂತಿರುವುದು ಪ್ರತಿನಿತ್ಯ ಕಂಡುಬರುತ್ತದೆ. ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ತಂಪು ಪಾನೀಯ ಅಂಗಡಿಗಳಲ್ಲಿ ಜನರು ಕಂಡುಬರುತ್ತಿದ್ದಾರೆ.
ತೆಲಗಿ ರಸ್ತೆಯಲ್ಲಿ ಲಸ್ಸಿ ಮಾರಾಟ ಮಾಡುವ ವ್ಯಾಪಾರಿ ಮಹಾಂತೇಶ ಅವರನ್ನು ಮಾತನಾಡಿಸಿದಾಗ, ನಾನು ಪ್ರತಿ ವರ್ಷ ಬೇಸಿಗೆ ದಿನದಲ್ಲಿ ಲಸ್ಸಿ ವ್ಯಾಪಾರ ಮಾಡುತ್ತಾ ಬಂದಿದ್ದೇನೆ. ಪ್ರತಿ ವರ್ಷವೂ ನನ್ನ ವ್ಯಾಪಾರ ಚೆನ್ನಾಗಿ ನಡೆಯುತ್ತಿದೆ. ಹೆಚ್ಚು ಜನರು ನಾನು ತಯಾರು ಮಾಡುವ ಲಸ್ಸಿ ಇಷ್ಟಪಡುತ್ತಾರೆ. ದಿನಕ್ಕೆ ನಾನು ಅಂದಾಜು ರೂ.೬ ಸಾವಿರ ವ್ಯಾಪಾರ ಮಾಡುತ್ತೇನೆ ಎಂದು ಹೇಳಿದರು.
ವಿಜಯಪುರ ರಸ್ತೆಯಲ್ಲಿ ಕಲ್ಲಂಗಡಿ ವ್ಯಾಪಾರ ಮಾಡುತ್ತಿರುವ ಸಂಗಮೇಶ ಸಂಗಮದ ಅವರನ್ನು ಮಾತನಾಡಿಸಿದಾಗ, ನಾನು ಸ್ವಂತ ವಾಹನ ಹೊಂದಿದ್ದೇನೆ. ವಿಜಯಪುರದಿಂದ ನಾನು ತರಕಾರಿ ಸೇರಿದಂತೆ ವಿವಿಧ ಮಾಲುಗಳನ್ನು ಪಟ್ಟಣಕ್ಕೆ ತರುತ್ತೇನೆ. ಒಂದು ಸಲ ನನಗೆ ಯಾವುದೇ ಮಾಲು ತರಲು ಬಾಡಿಗೆ ಸಿಗದೇ ಇದ್ದಾಗ ಒಂದು ಟನ್ ಕಲ್ಲಂಗಡಿ ತಂದು ನನ್ನ ತಾಯಿ, ಮನೆಯವರ ನೆರವಿನೊಂದಿಗೆ ಕಲ್ಲಂಗಡಿ ವ್ಯಾಪಾರ ಆರಂಭಿಸಿದೆ. ಉತ್ತಮವಾಗಿ ವ್ಯಾಪಾರವಾಗುತ್ತಿದೆ. ಇದರಿಂದ ಒಂದು ವಾರದಲ್ಲಿ ಎರಡು ಟನ್ ಕಲ್ಲಂಗಡಿ ಹಣ್ಣ ಮಾರಾಟ ಮಾಡಿದೆ. ಇಂದು ಬುಧವಾರ ಮತ್ತೆ ಒಂದು ಟನ್ ಕಲ್ಲಂಗಡಿ ಹಣ್ಣು ತಂದಿದ್ದೇನೆ. ಇದರಲ್ಲಿ ಜವಾರಿ ಕಲ್ಲಂಗಡಿ ಹಣ್ಣು ಇರುವುದು ವಿಶೇಷ. ಪ್ರತಿಯೊಂದಕ್ಕೆ ರೂ. ೫೦ ರಂತೆ ಮಾರಾಟ ಮಾಡುತ್ತಿರುವುದಾಗಿ ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.