ವಿಜಯಪುರ: ವಿಜಯಪುರ ಕೃಷಿ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ಯಂಗ್ ಪ್ರೋಪೇಶಿಯನಲ್-೨ ತಾತ್ಕಾಲಿಕ ಹುದ್ದೆಗೆ ಮಾ.೨೮ರಂದು ಬೆಳಗ್ಗೆ ೧೦.೩೦ಕ್ಕೆ ಜೆನೆಟಿಕ್ ಮತ್ತು ಪ್ಲಾಂಟ್ ಬ್ರಿಡಿಂಗ್ ವಿಷಯದಲ್ಲಿ ಕೃಷಿ ಸ್ನಾತಕೋತ್ತರ ಪದವಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಕರೆಯಲಾಗಿದೆ.
ಸಂದರ್ಶನಕ್ಕೆ ಬರುವಾಗ ವಿದ್ಯಾರ್ಹತೆಗೆ ಸಂಬಂಧಪಟ್ಟ ಮೂಲ ದಾಖಲೆಗಳು ಹಾಗೂ ಎರಡು ಸೆಟ್ ಝೆರಾಕ್ಸ್ ಪ್ರತಿಗಳು, ಎರಡು ಭಾವಚಿತ್ರಗಳನ್ನು ಅರ್ಜಿ ನಮೂನೆಗೆ ಲಗತ್ತಿಸಿ ಸಂದರ್ಶನದ ಸಮಯದಲ್ಲಿ ದಾಖಲೆಗಳನ್ನು ಸಲ್ಲಿಸಬೇಕು ಎಂದು ಕೃಷಿ ಮಾಹಾವಿದ್ಯಾನಿಲಯದ ವಿದ್ಯಾಧಿಕಾರಿ ಡಾ. ಭೀಮಪ್ಪ ಎ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
