ವಿಜಯಪುರ: ಜಿಲ್ಲಾ ಕಾಂಗ್ರೆಸ ಪರಿಶಿಷ್ಠ ಜಾತಿಯ ಅಧ್ಯಕ್ಷ ರಮೇಶ ಗುಬ್ಬೆವಾಡ ಅವರು ಗುರುವಾರದಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಹಾದೇವ ಚಲವಾದಿ ಅವರಿಗೆ ಪರಿಶಿಷ್ಠ ಜಾತಿಯ ಜಿಲ್ಲಾ ಸಂಘಟನಾ ಕಾರ್ಯದಶಿಯಾಗಿ ಆದೇಶ ಪ್ರತಿ ನೀಡಿ ಪಕ್ಷದ ತತ್ವ ಹಾಗೂ ಸಿದ್ದಾಂತಗಳ ಕುರಿತು ಹೇಳಿದರು
ಈ ವೇಳೆ ಮಾತನಾಡಿದ ಅವರು ರಾಜ್ಯ ಹಾಗೂ ಕೇಂದ್ರ ಕಾಂಗ್ರೆಸ್ ಪಕ್ಷದ ಮುಖಂಡರ ಮಾರ್ಗದರ್ಶನದಲ್ಲಿ ಜಿಲ್ಲೆಯ ಮುಖಂಡರುಗಳ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಮಾಡಬೇಕು, ಪಕ್ಷದ ಎಲ್ಲಾ ಜನಪರ ಯೋಜನೆಗಳನ್ನು ಜಿಲ್ಲೆಯ ಮನೆ ಮನೆಗೂ ತಲುಪಿಸುವ ಮಹತ್ತರ ಜವಾಬ್ದಾರಿ ನಮ್ಮೆಲ್ಲರದಾಗಿದೆ, ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಹಗಲಿರುಳು ಪಕ್ಷದ ಅಭ್ಯರ್ಥಿಯ ಪರವಾಗಿ ಜಿಲ್ಲೆಯ ಮನೆ ಮನೆಗೂ ತೆರಳಿ ಮತಯಾಚನೆ ಮಾಡುವುದರ ಮೂಲಕ ರಾಜು ಆಲಗೂರ ಅವರನ್ನು ಬಹುಮತದಿಂದ ಆರಿಸಿ ತರಬೇಕಾದ ಶ್ರದ್ದೆ ಹಾಗೂ ನಿಷ್ಠೆಯ ಕೆಲಸ ಮಾಡಬೇಕಿದೆ ಎಂದರು
ಈ ಸಂದರ್ಬದಲ್ಲಿ ಜಿಲ್ಲಾಧ್ಯಕ್ಷರು ಹಾಗೂ ಲೋಕಸಭಾ ಅಭ್ಯರ್ಥಿಯಾದ ರಾಜು ಆಲಗೂರ, ಮುಖಂಡರಾದ ಅಬ್ದುಲ್ ಹಮ್ಮೀದ ಮುಶ್ರೀಫ, ವಸಂತ ಹೊನಮೊಡೆ ಸೇರಿದಂತೆ ಅನೇಕರ ಕಾಂಗ್ರೆಸ್ ಮುಖಂಡರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

