ಸಿಂದಗಿ: ಕಿಂಡರ್ ಗಾರ್ಟನ್ ಮಕ್ಕಳ ಭವಿತವ್ಯದ ಬುನಾದಿಗೆ ಅತ್ಯವಶ್ಯವಾಗಿದ್ದು ಹೊಸ ಶಿಕ್ಷಣ ನೀತಿಯಲ್ಲಿ ಸರ್ಕಾರ ಹೆಚ್ಚಿನ ಮಹತ್ವ ನೀಡಿದೆ ಎಂದು ಎಚ್.ಜಿ. ಕಾಲೇಜಿನ ಪ್ರಾಚಾರ್ಯ ಎ. ಆರ್.ಹೆಗ್ಗಣದೊಡ್ಡಿ ಹೇಳಿದರು.
ಅವರು ನಗರದ ಬಂದಾಳ ರಸ್ತೆಯಲ್ಲಿರುವ ವಿವೇಕ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲಿನ ಪೂರ್ವ ಪ್ರಾಥಮಿಕ ಶಾಲಾ ಮಕ್ಕಳ ಪದವಿ ಪ್ರಧಾನ ಸಮಾರಂಭದ ಹಾಗೂ ಕಿಂಡರ್ ಗಾರ್ಟನ್ ಡೇ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಪ್ರೊಬೆಲರ ಕಿಂಡರ್ ಗಾರ್ಟನ್ ಪದ್ಧತಿ ನಮ್ಮ ನರ್ಸರಿ ಶಾಲೆಯಲ್ಲಿ ಅಳವಡಿಸಿಕೊಳ್ಳಲಾಗಿದೆ. ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಶಾಲೆ ಶ್ರಮಿಸುತ್ತಿದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಾಚಾರ್ಯ ಶಾ ನಿಮೋಲ್ ರಾಬಿನ್ ರವರು, ನಮ್ಮ ಶಾಲೆಯಲ್ಲಿ ಬುನಾದಿ ಹಂತದಿಂದಲೇ ಗುಣಾತ್ಮಕ ಶಿಕ್ಷಣ ನೀಡುತ್ತಿದ್ದು, ಪಾಲಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು.
ಸಂಸ್ಥೆಯ ಅಧ್ಯಕ್ಷ ನೀಲಮ್ಮ ಹೆಗ್ಗಣದೊಡ್ಡಿ ವೇದಿಕೆ ಮೇಲೆ ಉಪಸ್ಥಿತರಿದ್ದರು.
ಪ್ರಿಯದರ್ಶಿನಿ ಕಾರ್ಯಕ್ರಮ ನಿರೂಪಿಸಿದರು. ಟೆನಿ ರಾಬಿನ್ ಸ್ವಾಗತಿಸಿದರು. ನೀತು ಮೇಡಂ ವಂದಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

