ವಿಜಯಪುರ: ನಗರದ ದರಬಾರ ಪಿಯು ಕಾಲೇಜಿನ ನಿವೃತ್ತ ಪ್ರಾಚಾರ್ಯರು ಮತ್ತು ಹಿರಿಯ ಪತ್ರಕರ್ತರಾಗಿದ್ದ ಮೋಹನ ತಿಳಗೂಳ(81) ಅವರ ನಿಧನಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಸಂತಾಪ ಸೂಚಿಸಿದ್ದಾರೆ.
ಮೋಹನ ತಿಳಗೂಳ ಅವರ ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಕುಟುಂಬ ವರ್ಗಕ್ಕೆ ನೀಡಲಿ ಎಂದು ಕಂಬನಿ ಮಿಡಿದಿದ್ದಾರೆ.
ಶಿಕ್ಷಕರಾಗಿ ಮತ್ತು ಪ್ರಾಚಾರ್ಯರಾಗಿ ಉತ್ತಮ ಸೇವೆ ಸಲ್ಲಿಸಿದ್ದರು. ಅವರ ಕೈಯಲ್ಲಿ ಕಲಿತ ಸಾವಿರಾರು ವಿದ್ಯಾರ್ಥಿಗಳು ಈಗ ನಾನಾ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಅಷ್ಟೇ ಅಲ್ಲ, ಅವರು ಇಂಡಿಯನ್ ಎಕ್ಸಪ್ರೆಸ್ ವರದಿಗಾರಾಗಿಯೂ ಉತ್ತಮ ಸೇವೆ ಸಲ್ಲಿಸಿದ್ದಾರೆ. ಜನಪರ ವರದಿಗಳ ಮೂಲಕ ಗಮನ ಸೆಳೆದಿದ್ದರು. ಅವರ ಅಗಲಿಕೆಯಿಂದ ಹಿರಿಯ ಪತ್ರಕರ್ತರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಸಚಿವ ಎಂ. ಪಿ. ಪಾಟೀಲ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಆಶಾ ಎಂ. ಪಾಟೀಲ ಸಂತಾಪ: ಮೋಹನ ತಿಳಗೂಳ ಅವರ ನಿಧನಕ್ಕೆ ಸಚಿವ ಪತ್ನಿ ಆಶಾ ಎಂ. ಪಾಟೀಲ ಕೂಟ ಕಂಬನಿ ಮಿಡಿದಿದ್ದಾರೆ. ನಾನೂ ಕೂಡ ದರಬಾರ ಕಾಲೇಜಿನಲ್ಲಿ ಅವರ ಶಿಷ್ಯೆಯಾಗಿದ್ದೆ. ಅವರು ನನ್ನ ಅಚ್ಚುಮೆಚ್ಚಿನ ಗುರುಗಳಾಗಿದ್ದರು. ಅವರ ಅಗಲಿಕೆ ನನಗೆ ವೈಯಕ್ತಿಕವಾಗಿ ತೀವ್ರ ದುಃಖ ತಂದಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
