ಬಸವನಬಾಗೇವಾಡಿ: ಪಟ್ಟಣದ ಯುವಮುಖಂಡ, ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಯುವ ಘಟಕದ ಅಧ್ಯಕ್ಷ ಅಶೋಕ ಹಾರಿವಾಳ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯು ೨೦೨೪ರ ಕರ್ನಾಟಕ ಸಾಮಾಜಿಕ ಸೇವಾ ರತ್ನ ಪ್ರಶಸ್ತಿ ಘೋಷಿಸಿದೆ.
ಮಾ.೨೪ ರಂದು ಬೆಂಗಳೂರಿನ ನೆಲಮಂಗಲದ ಎಂವಿಎಂ ಕನ್ವೆನ್ಷನ್ ಹಾಲ್ನಲ್ಲಿ ಜರುಗುವ ರಾಜ್ಯಮಟ್ಟದ ೨ ನೇ ಪತ್ರಕರ್ತರ ಸಮ್ಮೇಳನದಲ್ಲಿ ಇವರಿಗೆ ಪ್ರಶಸ್ತಿ ಪತ್ರ ಮತ್ತು ಫಲಕವನ್ನು ನೀಡಿ ಗೌರವಿಸಲಾಗುವುದು ಎಂದು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಂಗ್ಲೆ ಅವರು ತಿಳಿಸಿದ್ದಾರೆ.
ಅಶೋಕ ಹಾರಿವಾಳ ಅವರು ಕರವೇ ಸಂಘಟನೆಯಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳುವ ಮೂಲಕ ಕನ್ನಡ ನೆಲ-ಜಲ-ನುಡಿ ಬಗ್ಗೆ ಅನೇಕ ಕಾರ್ಯಕ್ರಮಗಳನ್ನು ಸಂಘಟಿಸುವ ಜೊತೆಗೆ ಅನೇಕ ಸಾಮಾಜಿಕ ಹೋರಾಟದಲ್ಲಿ ಭಾಗವಹಿಸುವ ಮೂಲಕ ಗುರುತಿಸಿಕೊಂಡಿದ್ದಾರೆ. ಅನ್ಯಾಯವಾಗಿರುವುದನ್ನು ಖಂಡಿಸಿ ನ್ಯಾಯ ಸಿಗುವಂತೆ ಮಾಡುವಲ್ಲಿ ತಮ್ಮನ್ನು ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ. ಇವರ ಸಾಮಾಜಿಕ ಹೋರಾಟವನ್ನು ಗುರುತಿಸಿ ಈ ಪ್ರಶಸ್ತಿ ಘೋಷಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment

