ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲವಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ತೀವ್ರ ನೀರಿನ ಸಮಸ್ಯೆ ಎದುರಾಗಿದೆ. ಈ ನಿಟ್ಟಿನಲ್ಲಿ ಉಜನಿ ಜಲಾಶಯದಿಂದ ಭೀಮಾ ನದಿಗೆ ಹಾಗೂ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ತೀವ್ರ ಬರ ಎದುರಿಸುತ್ತಿರುವ ಕಲಬುರಗಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಇದರ ಭಾಗವಾಗಿಯೇ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರಿಗೆ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯ ಅಭಾವದಿಂದಾಗಿ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದ್ದು ಈಗಿರುವ ಪ್ರಮಾಣದಿಂದ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಲು ಆಗುವುದಿಲ್ಲ. ಹಾಗಾಗಿ, ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 TMC ಹಾಗೂ ಉಜನಿ ಜಲಾಶಯದಿಂದ ಭೀಮಾ ನದಿಗೆ 1 TMC ನೀರು ಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರದಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಭೀಮೆ-ಕೃಷ್ಣೆಗೆ ನೀರು ಬೀಡುವಂತೆ ಮಹಾರಾಷ್ಟ್ರ ಸಿಎಂಗೆ ಸಿದ್ದರಾಮಯ್ಯ ಪತ್ರ
Related Posts
Add A Comment

