ಬಸವನಬಾಗೇವಾಡಿ: ಲೋಕಸಭಾ ಚುನಾವಣೆ ಅಂಗವಾಗಿ ಬಸವನಬಾಗೇವಾಡಿ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳ, ಮುಖಂಡರ ಹಾಗೂ ಕಾರ್ಯಕರ್ತರ ಸಭೆಯನ್ನು ಮಾ.27 ರಂದು ಸಂಜೆ 4 ಗಂಟೆಗೆ ತಾಲೂಕಿನ ಮನಗೂಳಿಯ ಶತಾಯುಷಿ ಸಂಗನಬಸವ ಕಲ್ಯಾಣ ಮಂಟಪದಲ್ಲಿ ಕರೆಯಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಕಾರ್ಯದರ್ಶಿ ಈರಣ್ಣ ಪಟ್ಟಣಶೆಟ್ಟಿ, ಬ್ಲಾಕ್ ಅಧ್ಯಕ್ಷ ಸುರೇಶ ಹಾರಿವಾಳ ಹೇಳಿದರು.
ಪಟ್ಟಣದ ಇಂಗಳೇಶ್ವರ ರಸ್ತೆಯಲ್ಲಿರುವ ಮುಖಂಡ ಶೇಖರ ಗೊಳಸಂಗಿ ಅವರ ತೋಟದ ಮನೆಯಲ್ಲಿ ಭಾನುವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಈ ಸಭೆಯಲ್ಲಿ ಜವಳಿ, ಸಕ್ಕರೆ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ವಿಜಯಪುರ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಜು ಆಲಗೂರ ಸೇರಿದಂತೆ ಅನೇಕ ಮುಖಂಡರು ಭಾಗವಹಿಸುವರು. ಈ ಸಭೆಗೆ ಮತಕ್ಷೇತ್ರದ ಎಲ್ಲ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಆಗಮಿಸಬೇಕೆಂದು ಮನವಿ ಮಾಡಿಕೊಂಡರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ನುಡಿದಂತೆ ನಡೆಯುತ್ತಿದೆ. ಇದರಿಂದ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷದ ಕಡೆಗೆ ಹೆಚ್ಚು ಒಲವು ತೋರಿಸುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಕಾಂಗ್ರೆಸ್ ಸ್ಥಾನ ಪಡೆದುಕೊಳ್ಳಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಶಿವನಗೌಡ ಗುಜಗೊಂಡ, ಕೆಪಿಸಿಸಿ ಸದಸ್ಯ ಶೇಖರ ಗೊಳಸಂಗಿ, ನಗರ ಘಟಕದ ಅಧ್ಯಕ್ಷ ಸುರೇಶಗೌಡ ಪಾಟೀಲ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ರವಿ ರಾಠೋಡ, ಕುಮಾರ ನಾಯಕ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

