ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ರವರು ನಿಡಗುಂದಿ ತಾಲೂಕು ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ೫೦ರ ಯಲಗೂರು ಕ್ರಾಸ್ ಬಳಿ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಲೋಕಸಭಾ ಚುನಾವಣೆ ೨೦೨೪ರ ಹಿನ್ನೆಲೆಯಲ್ಲಿ ನಿಡಗುಂದಿ ತಾಲೂಕು ವ್ಯಾಪ್ತಿಯ ಯಲಗೂರು ಕ್ರಾಸ್ ಬಳಿ ಚೆಕ್ ಪೋಸ್ಟ್ ಆರಂಭಿಸಲಾಗಿದೆ.
ವಿಜಯಪುರ ಜಿಲ್ಲೆಯಿಂದ ಬಾಗಲಕೋಟೆ ಜಿಲ್ಲೆಗೆ ಪ್ರವೇಶಿಸಲು ಜಿಲ್ಲಾ ಗಡಿ ಭಾಗ ಚೆಕ್ ಪೋಸ್ಟ್ ಆರಂಭಿಸಲಾಗಿದೆ. ಕಂದಾಯ, ಪೋಲಿಸ್, ಕೆಬಿಜೆಎನ್‌ಎಲ್ ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿಯವರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
ಈ ವೇಳೆ ಮಾತನಾಡಿದ ಜಿ.ಪಂ. ಸಿಇಓ ರಿಷಿ ಆನಂದ ರವರು ಲೋಕಸಭೆ ಚುನಾವಣಾ ನಿಮಿತ್ಯ ಮಾದರಿ ನೀತಿ ಸಂಹಿತೆ ಜಾರಿಗೆ ಯಾಗಿದ್ದು, ಜಿಲ್ಲೆಯಿಂದ ಹೊರಹೋಗುವ ಮತ್ತು ಆಗಮಿಸುವ ಎಲ್ಲ ವಾಹನಗಳನ್ನು ಕಟ್ಟುನಿಟ್ಟಾಗಿ ಪರಿಶೀಲನೆ ನಡೆಸಬೇಕು. ಹಣ, ಮದ್ಯ, ದಾಖಲೆ ಇಲ್ಲದ ವಸ್ತುಗಳು ಕಂಡು ಬಂದರೆ ತಕ್ಷಣ ಮೇಲಾಧಿಕಾರಿಗಳ ಗಮನಕ್ಕೆ ತಂದು ಕಾನೂನು ಕ್ರಮ ಕೈಗೊಳ್ಳಬೇಕು. ಪ್ರತಿ ವಾಹನ ತಪಾಸಣೆ ಮಾಡಿದ ವರದಿಯನ್ನು ವಹಿಯಲ್ಲಿ ದಾಖಲಿಸಬೇಕು ಎಂದು ಚೆಕ್ ಪೋಸ್ಟ್ ಸಿಬ್ಬಂದಿಯವರಿಗೆ ಸೂಚಿಸಿದರು.
ಇದೇ ವೇಳೆ ಚೆಕ್ ಪೋಸ್ಟ್ ನ ವಹಿಯಲ್ಲಿ ನೋಂದಣಿ ಮಾಡಿದ ವಾಹನಗಳ ವಿವರಗಳನ್ನು ಖುದ್ದಾಗಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಚೆಕ್ ಪೋಸ್ಟ್ ಸಿಬ್ಬಂದಿ ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

