ಇಂಡಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಎಲ್ಲಾ ವಿದ್ಯಾರ್ಥಿಗಳ ಜೀವನದಲ್ಲಿ ಬಹಳ ಪ್ರಮುಖವಾದದ್ದು. ಎಲ್ಲಾ ಮಕ್ಕಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು. ಮುಂದೆ ಅವರ ಭವಿಷ್ಯವನ್ನು ಉತ್ತಮ ರೀತಿಯಲ್ಲಿ ರಚಿಸಿಕೊಳ್ಳಬೇಕು ಎನ್ನುವುದು ನಮ್ಮ ಆಸೆ ಎಂದು ಇಂಡಿ ತಾಲೂಕ ತಹಶೀಲ್ದಾರ್ ಮಂಜುಳಾ ನಾಯಕ ಅಭಿಪ್ರಾಯಪಟ್ಟರು.
ಸೋಮವಾರ ಪಟ್ಟಣದ ಆದರ್ಶ ಮಹಾವಿದ್ಯಾಲಯದಲ್ಲಿ ಇಂದು ಆರಂಭವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾದ ಎಲ್ಲ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿ, ಶುಭ ಹಾರೈಸಿ, ಪರೀಕ್ಷೆಗೆ ವಿನೂತನವಾಗಿ ಬರಮಾಡಿಕೊಂಡು ಅಭಿಪ್ರಾಯ ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್. ಆಲಗೂರ ಮಾತನಾಡಿ, ಶೈಕ್ಷಣಿಕ ಜೀವನದಲ್ಲಿ ೧೦ನೇ ತರಗತಿ ಪರೀಕ್ಷೆ ಅತ್ಯಂತ ಪ್ರಮುಖ ಘಟ್ಟ. ಪ್ರತಿಯೊಬ್ಬರೂ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು ಎಂದರು.
ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನೀಲಗಂಗಾ ಮಾತನಾಡಿ, ವಿದ್ಯಾರ್ಥಿಗಳೇ, ಇದೊಂದು ಕಲಿಕೆಯ ಪ್ರಮುಖ ಘಟ್ಟ. ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ. ಯಾವುದೇ ಗೊಂದಲಗಳಿಗೆ ತಲೆಕೆಡಿಸಿಕೊಳ್ಳದೇ ಪರೀಕ್ಷೆ ಎದುರಿಸಿ, ಶುಭವಾಗಲಿ ಎಂದರು.
ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಆರ್. ನಡಗಡ್ಡಿ, ಇಂಡಿ ತಾಲೂಕ ಎಸ್‌ಎಸ್‌ಎಲ್‌ಸಿ ಪರೀಕ್ಷಾ ನೋಡಲ್ ಅಧಿಕಾರಿ ಎಸ್.ಬಿ. ಪಾಟೀಲ, ಬಿಆರ್‌ಪಿ ಆಯ್.ಜಿ. ಆಳೂರ, ಪರೀಕ್ಷಾ ಕೇಂದ್ರದ ನೋಡಲ್ ಅಧಿಕಾರಿ ಎಸ್.ಎಂ. ಬಡಿಗೇರ ಸೇರಿದಂತೆ ಅನೇಕರು ಪರೀಕ್ಷೆಗೆ ಹಾಜರಾದ ಮಕ್ಕಳಿಗೆ ದ್ವಾರಬಾಗಿಲಲ್ಲಿಯೇ ಗುಲಾಬಿ ಹೂ ನೀಡಿ ಸ್ವಾಗತ ಮಾಡಿಕೊಂಡು, ಶುಭ ಹಾರೈಸಿದರು.
Subscribe to Updates
Get the latest creative news from FooBar about art, design and business.
ಎಸ್ಸೆಸ್ಸೆಲ್ಸಿ ಪರೀಕ್ಷೆ: ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತ
Related Posts
Add A Comment

