Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 29, 2026

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಂಬಿ ಮಲ್ಲಯ್ಯ & ಪಾದಯಾತ್ರೆಗಳ ವಿಶೇಷ ಬೀಳ್ಕೊಡುಗೆ
(ರಾಜ್ಯ ) ಜಿಲ್ಲೆ

ಕಂಬಿ ಮಲ್ಲಯ್ಯ & ಪಾದಯಾತ್ರೆಗಳ ವಿಶೇಷ ಬೀಳ್ಕೊಡುಗೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ತಾಲೂಕಿನ ವಡವಡಗಿ ಗ್ರಾಮದಲ್ಲಿ
ಕಂಬಿ ಮಲ್ಲಯ್ಯನನ್ನು ಹೊತ್ತು ಪಾದಯಾತ್ರೆಯಲ್ಲಿ ತೆರಳುವ ಗ್ರಾಮದ ಭಕ್ತರನ್ನು ಜೋಡೆತ್ತಿನ ಬಂಡಿಗಳ ಮೆರವಣಿಗೆಯ ಮೂಲಕ ಮಂಗಳವಾರ ಬೀಳ್ಕೊಡಲಾಯಿತು.
ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಅಭೀ ಫೌಂಡೇಶನ್ ಸಂಸ್ಥಾಪಕ ಬಸವರಾಜ ಬಿರಾದಾರ ಅವರು ಮಾತನಾಡಿ, ಕಂಬಿ ಮಲ್ಲಯ್ಯನು ಗ್ರಾಮದ ಜೋಡೆತ್ತುಗಳ ಭಾವೈಕ್ಯದ ಸಂಕೇತವಾಗಿದ್ದಾನೆ . ಗ್ರಾಮದಲ್ಲಿ ಜೊಡೆತ್ತುಗಳು ಸದಾ ಉಳಿಯಬೇಕು ಎಂಬ ಸಂದೇಶ ನೀಡುವವನಾಗಿದ್ದಾನೆ ಎಂದು ಹೇಳಿದರು.
ಇಂದು ಜೋಡೆತ್ತು ಸಾಕಾಣಿಕೆದಾರರಿಗೆ ಪೂರಕವಾದ ಯೋಜನೆಗಳು ಇರದೇ ಇರುವ ಕಾರಣ ರೈತರು ಅನಿವಾರ್ಯವಾಗಿ ಎತ್ತುಗಳನ್ನು ಮಾರಾಟ ಮಾಡುವ ಪರಿಸ್ಥಿತಿಗೆ ಬಂದಿದ್ದಾರೆ. ಬರಗಾಲದ ಸಂದರ್ಭದಲ್ಲಿ ಅನೇಕ ರೈತರು ಎತ್ತುಗಳನ್ನು ಮಾರುವುದು ಸಾಮಾನ್ಯ. ಈ ಸಂದರ್ಭದಲ್ಲಿ ಅನೇಕ ಎತ್ತುಗಳು ಕಸಾಯಿಖಾನೆಯ ಪಾಲಾಗುತ್ತಿರುವುದು ವಿಷಾಧನೀಯ ಸಂಗತಿಯಾಗಿದೆ. ಕಂಬಿ ಮಲ್ಲಯ್ಯ ಹಾಗೂ ಶ್ರೀಶೈಲ ಮಲ್ಲಯ್ಯ ನಮಗೆಲ್ಲ ಒಲಿಯಬೇಕಾದರೆ ನಾವು ಮೊದಲು ನಮ್ಮ ಗ್ರಾಮದ ಎತ್ತುಗಳ ಸಂತತಿ ಹೆಚ್ಚಾಗಲಿ ಎಂದು ಸಂಕಲ್ಪ ಮಾಡಬೇಕು. ಎಲ್ಲರೂ ಒಂದಾಗಿ ಜೋಡೆತ್ತು ಸಾಕಾಣಿಕೆದಾರರಿಗೆ ಪೂರಕವಾದ ಯೋಜನೆ ಜಾರಿಗಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಬೇಕಾಗಿದೆ. ಅಂದಾಗ ಮಾತ್ರ ನಮ್ಮ ಗ್ರಾಮದ ಅನ್ನ ಸಂಪತ್ತು ಉಳಿದು ಮುಂದಿನ ಪೀಳಿಗೆ ಉಳಿಯಲು ಸಾಧ್ಯ. ಇಲ್ಲವಾದರೆ, ಮುಂದೆ ನಮ್ಮ ಮಕ್ಕಳು ತುತ್ತು ಅನ್ನಕ್ಕೂ ಕೂಡ ಪರದಾಡುವ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆಯಿದೆ. ಅದಕ್ಕಾಗಿ, ಕಂಬಿ ಮಲ್ಲಯ್ಯ ಎತ್ತುಗಳ ಸಂತತಿ ಉಳಿಸಿ ಸಕಲರನ್ನೂ ಕಾಪಾಡಲು ಗ್ರಾಮಗಳಲ್ಲಿ ಇರುವನು ಎಂಬ ಸಂದೇಶವನ್ನು ಬಹುಜನರಿಗೆ ತಲುಪಿಸಲು ನಂದಿ ಯಾತ್ರೆ ಅಭಿಯಾನ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.
ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಜನ್ಮ ಸ್ಥಳವಾದ ಬಿಜ್ಜರಗಿಯಿಂದ ಅಭಿಯಾನ ಪ್ರಾರಂಭವಾಗಿದೆ ಎಂದು ತಿಳಿಸಿದ ಅವರು ಈ ವರ್ಷ ಹಲವು ಗ್ರಾಮಗಳಲ್ಲಿ ಕಂಬಿ ಮಲ್ಲಯ್ಯ ಜೋಡೆತ್ತಿನ ಕೃಷಿ ಉಳಿಸಲು ಇರುವನು ಎಂಬುದನ್ನು ಹಲವು ಗ್ರಾಮಗಳ ಜನರು ಅರಿತು ಜೋಡೆತ್ತಿನ ಬಂಡಿಗಳ ಮೆರವಣಿಗೆ ಮೂಲಕ ಕಂಬಿ ಮಲ್ಲಯ್ಯನನ್ನು ಶ್ರೀಶೈಲಕ್ಕೆ ಬೀಳ್ಕೊಟ್ಟಿದ್ದಾರೆ. ಇದೇ ರೀತಿ ಕಂಬಿ ಮಲ್ಲಯ್ಯ ಗ್ರಾಮಕ್ಕೆ ಮರಳಿ ಬರುವಾಗ ಜೋಡೆತ್ತಿನ ಬಂಡಿಗಳ ಮೆರವಣಿಗೆ ಮೂಲಕ ಸ್ವಾಗತಿಸಿದರೆ ಶ್ರೀಶೈಲ ಮಲ್ಲಯ್ಯನ ಕೃಪೆಗೆ ಪಾತ್ರರಾಗಬಹುದು ಎಂದು ತಿಳಿಸಿದರು.
ಗ್ರಾಮದ ಚನ್ನಮಲ್ಲಯ್ಯ ಮಠಪತಿ, ಬಸವರಾಜ ಅಳ್ಳಗಿ, ಬಸವರಾಜ ಮನಹಳ್ಳಿ‌ ಹಾಗೂ ವಿಜು ಕೊಳೂರ ಇವರ ನೇತೃತ್ವದಲ್ಲಿ ವಡವಡಗಿಯಿಂದ ಶ್ರೀಶೈಲಕ್ಕೆ ಪಾದಯಾತ್ರೆ ಪ್ರಾರಂಭವಾಯಿತು. ಪಾದಯಾತ್ರಿಗಳ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಶಿವಕುಮಾರ ಮನಹಳ್ಳಿ, ಆನಂದ ಆಂದೇಲಿ, ಮಂಜು ಹಚರಡ್ಡಿ, ಬಸವರಾಜ ಹಚರಡ್ಡಿ, ಪ್ರಭು ಗಂಗಶೆಟ್ಟಿ, ಬಸವರಾಜ ಗಂಗಶೆಟ್ಟಿ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 29, 2026

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 29, 2026
    In ದಿನಪತ್ರಿಕೆ
  • ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ
    In (ರಾಜ್ಯ ) ಜಿಲ್ಲೆ
  • ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ-ನಾರಾಯಣಪುರದಿಂದ ಕಾಲುವೆಗಳಿಗೆ ನೀರು
    In (ರಾಜ್ಯ ) ಜಿಲ್ಲೆ
  • ಜು.೨೯ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನ, ಪುಸ್ತಕ ಅನುದಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.