ಮುದ್ದೇಬಿಹಾಳ: ಬರಗಾಲವನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ನರೇಗಾ ಯೋಜನೆ ಸಹಕಾರಿಯಾಗಿದೆ. ಗ್ರಾಮ ಪಂಚಾಯತಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಯಕ ಬಂಧುಗಳು ಜನರಿಗೆ ಕೆಲಸ ಒದಗಿಸಲು ಮುಂದಾಗಬೇಕು. ಕೆಲಸದ ಬೇಡಿಕೆ ಅರ್ಜಿಗಳನ್ನು ಸಂಗ್ರಹಿಸಿ ಗ್ರಾಮ ಪಂಚಾಯತಿಗೆ ಸಲ್ಲಿಸಿದರೆ, ಏಪ್ರಿಲ್ ೧ ರಿಂದ ಬೇಡಿಕೆಗೆ ಅನುಗುಣವಾಗಿ ಕೆಲಸ ನೀಡಲಾಗುವುದು ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಸ್.ಕಲ್ಮನಿ ತಿಳಿಸಿದರು.
ತಾಲೂಕು ಪಂಚಾಯತಿ ಸಭಾ ಭವನದಲ್ಲಿ ವಲಸೆ ಯಾಕ್ರಿ ನಿಮ್ಮೂರಲ್ಲೆ ಉದ್ಯೋಗ ಖಾತ್ರಿ ಅಭಿಯಾನದ ಅಂಗವಾಗಿ ಆಯೋಜಿಸಲಾಗಿದ್ದ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಯಕ ಬಂಧುಗಳಿಗೆ ಕಾರ್ಯಾಗಾರಕ್ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಾಯಕ ಬಂಧುಗಳು ಮೊದಲು ಸಂಘಟಿತರಾಗಬೇಕು. ಸಕ್ರೀಯ ನರೇಗಾ ಕೂಲಿಕಾರರನ್ನು ಒಗ್ಗೂಡಿಸಿ ಕೆಲಸಕ್ಕೆ ಬರುವಂತೆ ಪ್ರೇರೆಪಿಸಬೇಕು. ಒಂದು ಗ್ರಾಮ ಪಂಚಾಯತಿಯಲ್ಲಿ ಕನಿಷ್ಟ ೬೦೦ ರಿಂದ ೮೦೦ ವರೆಗೆ ಕೂಲಿಕಾರರಿಗೆ ಕೆಲಸ ಒದಗಿಸಲು ಕಾಯಕ ಬಂಧುಗಳು ಸನ್ನದ್ಧರಾಗಬೇಕು. ನಿಮ್ಮ ಜವಾಬ್ದಾರಿಗಳನ್ನು ಅರಿತು ಕೆಲಸ ಮಾಡಿ ಎಂದು ಸಲಹೆ ನೀಡಿದರು.
ಸಹಾಯಕ ನಿರ್ದೆಶಕರು (ಪಂ.ರಾ.) ಖುಬಾಸಿಂಗ್ ಜಾಧವ್ ಮಾತನಾಡಿ, ಕಾಯಕಬಂಧುಗಳ ಕರ್ತವ್ಯ, ನಿರ್ವಹಿಸಬೇಕಾದ ಕೆಲಸಗಳು ಮತ್ತು ನರೇಗಾ ಕೂಲಿಕಾರರ ಹಕ್ಕುಗಳ ಬಗ್ಗೆ ತಿಳಿಸಿದರು.
ಈ ವೇಳೆ ತಾಲೂಕು ಪಂಚಾಯತ ತಾಂತ್ರಿಕ ಸಂಯೋಜಕ ಶಂಕರಗೌಡ ಯಾಳವಾರ, ತಾಲೂಕು ನರೇಗಾ ಐಇಸಿ ಸಂಯೋಜಕ ಪರಮೇಶ ಹೊಸಮನಿ, ಬಿಎಫ್‌ಟಿಗಳು, ಗ್ರಾಮ ಕಾಯಕ ಮಿತ್ರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

