ವಿಜಯಪುರ: ಲೋಕಸಭಾ ಸಾರ್ವತ್ರಿಕ ಚುನಾವಣೆ-೨೦೨೪ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಗುರುವಾರದಂದು ಇಂಡಿ ತಾಲೂಕಿನ ಅಗರಖೇಡ ಹತ್ತಿರದ ಚಿಕ್ಕಮಣೂರು ಕ್ರಾಸ್ ಹಾಗೂ ಹಿಂಗಾಣಿ ಬಳಿ ನಿರ್ಮಿಸಲಾಗಿರುವ ಚೆಕ್ ಪೋಸ್ಟ್ ಮತ್ತು ಇಂಡಿ ಪಟ್ಟಣದಲ್ಲಿ ಸ್ಥಾಪಿಸಿರುವ ಭದ್ರತಾ ಕೊಠಡಿಗೆ ಭೇಟಿ ನೀಡಿ ಕಾರ್ಯ ವೈಖರಿಯನ್ನು ಪರಿಶೀಲಿಸಿದರು.
ಈ ವೇಳೆ ಭದ್ರತಾ ಕೊಠಡಿಯಲ್ಲಿ ಇರಿಸಲಾಗಿರುವ ಇ ವಿ ಎಂ ಭದ್ರತೆಯನ್ನು ಕೂಲಂಕುಸವಾಗಿ ಪರಿಶೀಲಿಸಿದರು. ಚೆಕ್‌ಪೋಸ್ಟ್ಗಳಲ್ಲಿನ ಅಧಿಕಾರಿ ಮತ್ತು ಸಿಬ್ಬಂದಿಯ ಹಾಜರಾತಿ, ಶಾಮಿಯಾನ, ಕುಡಿಯುವ ನೀರು ಸೇರಿದಂತೆ ಚೆಕ್ ಪೋಸ್ಟ್ ಗಳ ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದರು.
ಚೆಕ್‌ಪೋಸ್ಟ್ಗಳು ಸರಿಯಾಗಿ ಕಾರ್ಯ ನಿರ್ವಹಿಸಬೇಕು. ಚೆಕ್‌ಪೋಸ್ಟ್ಗಳಿಗೆ ನಿಯೋಜನೆಗೊಂಡ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಸರಿಯಾದ ಸಮಯಕ್ಕೆ ಪಾಳಿ ಅನುಸಾರ ಹಾಜರಾಗಿ ಕಾರ್ಯ ನಿರ್ವಹಿಸಬೇಕು. ಪ್ರತಿಯೊಂದು ವಾಹನವನ್ನು ತಪಾಸಣೆಗೆ ಒಳಪಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಸ್ಥಳದಲ್ಲಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠ್ಠಾಧಿಕಾರಿ ಋಷಿಕೇಶ್ ಸೋನಾವಣೆ, ಇಂಡಿ ಉಪವಿಭಾಗಾಧಿಕಾರಿ ಅಭೀದ್ ಗದ್ಯಾಳ ತಹಶೀಲ್ದಾರ ಮಂಜುಳಾ ನಾಯಕ ಸೇರಿದಂತೆ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

