ವಿಜಯಪುರ: ಕೆಪಿಟಿಸಿಎಲ್ ವತಿಯಿಂದ ೧೧೦/೧೧ಕೆವಿ ಭೂತನಾಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ೨೦ಎಂವಿ, ೧೧೦/೩೩ ಕೆವಿ ಶಕ್ತಿ ಪರಿವರ್ತಕ ಛೇಧಕ ದುರಸ್ತಿ ಕಾಮಗಾರಿ ಕೈಗೊಳ್ಳುವುದರಿಂದ ಮಾ.೨೯ ರಂದು ಬೆಳಗ್ಗೆ ೮ ಗಂಟೆಯಿಂದ ಮದ್ಯಾಹ್ನ ೧ರವರೆಗೆ ಭೂತನಾಳ ವಿದ್ಯುತ್ ವಿತರಣಾ ಕೇಂದ್ರದಿಂದ ಹೋರಹೋಗುವ ೩೩ಕೆವಿ ತಿಡಗುಂದಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ ೧೧ಕೆವಿ ವಿದ್ಯುತ್ ಮಾರ್ಗಗಳು ಹಾಗು ೩೩ಕೆವಿ ಅರಕೇರಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಆದ ಕಾರಣ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ವಿಜಯಪುರ ಹೆಸ್ಕಾಂ ಕಾರ್ಯ ಮತ್ತು ಪಾಲನ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
