Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 29, 2026

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮನರೇಗಾ ಕೂಲಿ ಮೊತ್ತ ಏ.೧ರಿಂದ ರೂ.೩೪೯ ಹೆಚ್ಚಳ :ಸಾಲಿ
(ರಾಜ್ಯ ) ಜಿಲ್ಲೆ

ಮನರೇಗಾ ಕೂಲಿ ಮೊತ್ತ ಏ.೧ರಿಂದ ರೂ.೩೪೯ ಹೆಚ್ಚಳ :ಸಾಲಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಿಕೋಟಾ: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುವ ಕೂಲಿಕಾರರ ಕೂಲಿಮೊತ್ತವನ್ನು ರೂ.೩೧೬ರಿಂದ ರೂ.೩೪೯ಕ್ಕೆ ಹೆಚ್ಚಳ ಮಾಡಲಾಗಿದೆ, ಇದರ ಲಾಭವನ್ನು ಎಲ್ಲ ಗ್ರಾಮೀಣ ಭಾಗದ ಜನರು ಪಡೆಯಬೇಕೆಂದು ತಿಕೋಟಾ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪ್ರವೀಣಕುಮಾರ ಸಾಲಿ ಹೇಳಿದರು.
ಈಗಾಗಲೇ ಗ್ರಾಮೀಣ ಭಾಗದ ಜನರಿಗೆ ೧೦೦ ದಿನಗಳ ಅಕುಶಲ ಕೆಲಸ ನೀಡಲಾಗುತ್ತಿದೆ. ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಯಾವದೇ ಉದ್ಯೋಗ ದೊರೆಯದೇ ಇರುವ ಪ್ರಯುಕ್ತ ಈ ಅವಧಿಯಲ್ಲಿ ಅವರಿಗೆ ನಿರಂತರವಾಗಿ ಕೆಲಸ ನೀಡುವ ಉದ್ದೇಶದಿಂದ ಗ್ರಾಮೀಣ ಪ್ರದೇಶದಲ್ಲಿ ಮನೆ-ಮನೆಗೆ ಭೇಟಿ ನೀಡಿ ನರೇಗಾ ಮಾಹಿತಿ ನೀಡುವದರ ಜೊತೆಗೆ ನಮೂನೆ-೦೬ರಲ್ಲಿ ಕೆಲಸಕ್ಕೆ ಬೇಡಿಕೆ ಪಡೆಯಲಾಗುತ್ತಿದೆ. ಹಾಗೂ ಏಪ್ರೀಲ್ ಒಂದರಿಂದ ಎಲ್ಲ ಗ್ರಾಮಗಳಲ್ಲಿ ಬೇಡಿಕೆ ಸಲ್ಲಿಸುವ ಪ್ರತಿಯೊಬ್ಬರಿಗೂ ಮನರೇಗಾ ಯೋಜನೆಯಡಿ ಕೆಲಸ ನಿರ್ವಹಿಸಲು ಬೇಕಾದ ಸಿದ್ಧತೆ ಮಾಡಿಕೊಳ್ಳಲು ಎಲ್ಲಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಮಹಾತ್ಮ ಗಾಂಧಿ ನರೇಗಾ ಸಿಬ್ಬಂದಿಗಳಿಗೆ ಸೂಚನೆಗಳನ್ನು ನೀಡಲಾಗಿದೆ ಎಂದು ಅವರು ತಿಳಿಸಿದರು. ತಾಲೂಕಿನ ಪ್ರತಿ ಗ್ರಾಮದಲ್ಲಿ ಕೂಲಿ ಆಧಾರಿತ ಸಮುದಾಯ ಕಾಮಗಾರಿಗಳನ್ನು ಆರಂಭಿಸಿ, ಕೆಲಸ ಬಯಸುವ ಪ್ರತಿ ವ್ಯಕ್ತಿಗೂ ಉದ್ಯೋಗ ಕಲ್ಪಿಸಲಾಗುತ್ತದೆ. ವಿಶೇಷಚೇತನರು, ಮಹಿಳೆಯರು, ಹಿರಿಯ ನಾಗರಿಕರು, ಲಿಂಗತ್ವ ಅಲ್ಪಸಂಖ್ಯಾತರು, ದುರ್ಬಲ ವರ್ಗಗಳಿಗೆ ಆಧ್ಯತೆ ಮೇಲೆ ಕೆಲಸ ನೀಡಲಾಗುತ್ತಿದೆ. ಜೊತೆಗೆ ಕಾಮಗಾರಿ ಸ್ಥಳದಲ್ಲಿ ಕುಡಿಯುವ ನೀರು, ನೆರಳು, ಪ್ರಥಮ ಚಿಕಿತ್ಸೆ ಪೆಟ್ಟಿಗೆ ಸೇರಿ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.
ಹೊಸ ನರೇಗಾ ಸಹಾಯವಾಣಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ವಿವಿಧ ಯೋಜನೆಗಳ ಮಾಹಿತಿ ಮತ್ತು ಕುಂದು ಕೊರತೆಗಳ ನಿವಾರಣೆಗಾಗಿ ಏಕಿಕೃತ ಸಹಾಯವಾಣಿ “೮೨೭೭೫೦೬೦೦೦” ಯನ್ನು ಆರಂಭಿಸಲಾಗಿದೆ. ಮುಂಚೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಪರಿಹಾರ ಹಾಗೂ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಬೇರೆ ಬೇರೆ ಸಹಾಯವಾಣಿ ಕಾರ್ಯನಿರ್ವಹಿಸುತ್ತಿದ್ದವು. ಇಲಾಖೆಯ ಸಮಗ್ರ ಮಾಹಿತಿಗಾಗಿ ಏಕಿಕೃತ ಸಹಾಯವಾಣಿ “೮೨೭೭೫೦೬೦೦೦” ಯನ್ನು ಆರಂಭಿಸಲಾಗಿದೆ. ಇಲಾಖೆಗೆ ಸಂಬಂಧಿಸಿದ ದೂರು ಹಾಗೂ ಮಾಹಿತಿಗಾಗಿ ಈ ಸಹಾಯವಾಣಿಗೆ ಸಂಪರ್ಕಿಸಲು ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 29, 2026

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 29, 2026
    In ದಿನಪತ್ರಿಕೆ
  • ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ
    In (ರಾಜ್ಯ ) ಜಿಲ್ಲೆ
  • ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ-ನಾರಾಯಣಪುರದಿಂದ ಕಾಲುವೆಗಳಿಗೆ ನೀರು
    In (ರಾಜ್ಯ ) ಜಿಲ್ಲೆ
  • ಜು.೨೯ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನ, ಪುಸ್ತಕ ಅನುದಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.