Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸುಮಲತಾ ತಾಳ್ಮೆಯಿಂದಿದ್ದರೆ ಸೂಕ್ತ ಸ್ಥಾನಮಾನ :ಬಿಎಸ್ವೈ
(ರಾಜ್ಯ ) ಜಿಲ್ಲೆ

ಸುಮಲತಾ ತಾಳ್ಮೆಯಿಂದಿದ್ದರೆ ಸೂಕ್ತ ಸ್ಥಾನಮಾನ :ಬಿಎಸ್ವೈ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬೆಳಗಾವಿ: ಮಂಡ್ಯದಿಂದ ಕುಮಾರಸ್ವಾಮಿಗೆ ಟಿಕೆಟ್‌ ಸಿಕ್ಕ ಹಿನ್ನೆಲೆ ಸಹಜವಾಗಿ ಸಂಸದೆ ಸುಮಲತಾಗೆ ಬೇಸರ ಆಗಿರುತ್ತೆ, ಆದರೆ, ಸುಮಲತಾ ಅವರು ಸಮಾಧಾನದಿಂದ ಇದ್ದರೆ ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗುವ ಭರವಸೆಯನ್ನು ಹೈಕಮಾಂಡ್‌ ಕೊಟ್ಟಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಗೆಲ್ಲಿಸುವ ಸಂಬಂಧ ಸಭೆ ಮಾಡಿದ್ದೇವೆ. ಎಲ್ಲರೂ ಸೇರಿ ಶೆಟ್ಟರ್ ಅವರನ್ನು ಹೆಚ್ಚಿನ ಅಂತರದಲ್ಲಿ ಗೆಲ್ಲಿಸಬೇಕು. ರಾಜ್ಯದ 28ಕ್ಷೇತ್ರಗಳನ್ನು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಗೆಲ್ಲುತ್ತದೆ. ಎಲ್ಲಿಯೂ ಅಸಮಾಧಾನ ಆತಂಕ ಏನೂ ಇಲ್ಲ. ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು ಪ್ರಚಾರಕ್ಕಾಗಿ ಎಲ್ಲಾ ಸ್ಥಳಗಳಿಗೆ ತೆರಳಲು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.
ಜಗದೀಶ್ ಶೆಟ್ಟರ್ ಅವರು ತುಂಬಾ ಒಳ್ಳೆಯ ನಾಯಕರಾಗಿದ್ದರಿಂದ ಅವರನ್ನು ನಾವು ಒತ್ತಾಯಿಸಿ ವಾಪಸ್ ಬಿಜೆಪಿಗೆ ಕರೆಸಿಕೊಂಡಿದ್ದೇವೆ. ಇದೀಗ ಅವರು ತುಂಬಾ ಉತ್ಸಕತೆಯಿಂದ ಲೋಕಸಭೆಗೆ ಸ್ಪರ್ಧಿಸುತ್ತಿದ್ದಾರೆ. ಎಲ್ಲರೂ ಒಗ್ಗಟ್ಟಾಗಿಯೇ ಕೆಲಸ ಮಾಡುತ್ತಿದ್ದೇವೆ. ಬೆಳಗಾವಿ ಜಿಲ್ಲೆಯ ಎರಡೂ ಕ್ಷೇತ್ರಗಳನ್ನು ದೊಡ್ಡ ಅಂತರದಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರವನ್ನು ಟೀಕಿಸುತ್ತಿರುವ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಯಡಿಯೂರಪ್ಪ, ಪ್ರಧಾನಿಯನ್ನು ಟೀಕಿಸುವ ಮೊದಲು ಸಿಎಂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದರು.
‘ಪ್ರಧಾನಿ ಮೋದಿ ವಿರುದ್ಧ ಟೀಕೆ ಮಾಡುವ ಮೂಲಕ ಸಿದ್ದರಾಮಯ್ಯ ಅವರು ದೊಡ್ಡ ನಾಯಕರಾಗುತ್ತಾರೆ ಎಂದು ಯೋಚಿಸುತ್ತಿರಬಹುದು. ಕೇಂದ್ರದಿಂದ ಕರ್ನಾಟಕಕ್ಕೆ ಬರ ಪರಿಹಾರ ಹಣ ನೀಡಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ ನಂತರವೂ ಅವರು ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುವುದು ಸರಿಯಲ್ಲ ಎಂದರು.
ಮೋದಿ ಮೋದಿ ಎನ್ನುವ ಯುವಕರ ಕಪಾಳಕ್ಕೆ ಹೊಡೆಯಬೇಕು ಎಂಬ ಹೇಳಿಕೆ ನೀಡಿದ್ದ ಸಚಿವ ಶಿವರಾಜ ತಂಗಡಗಿ ವಿರುದ್ಧ ಬಿಎಸ್‌ ಯಡಿಯೂರಪ್ಪ ಕಿಡಿಕಾರಿದ್ದಾರೆ. ಸಚಿವ ಶಿವರಾಜ್ ತಂಗಡಗಿಗೆ ಈ ಹೇಳಿಕೆ ಶೋಭೆ ತರಲ್ಲ. ಇದು ಕಾಂಗ್ರೆಸ್ ಸಂಸ್ಕೃತಿಯೇ? ಇಡೀ ವಿಶ್ವವೇ ಪ್ರಧಾನಿ ಮೋದಿ ಅವರನ್ನು ಗೌರವದಿಂದ ನೋಡುತ್ತಿದೆ. ತಂಗಡಗಿ ವಿರುದ್ಧ ಪಕ್ಷ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.