Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 29, 2026

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಈ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಗರ್ವಭಂಗವಾಗಬೇಕು
(ರಾಜ್ಯ ) ಜಿಲ್ಲೆ

ಈ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಗರ್ವಭಂಗವಾಗಬೇಕು

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜೆಡಿಎಸ್-ಬಿಜೆಪಿ ಮುಖಂಡರ ಸಮನ್ವಯ ಸಭೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಕರೆ

ಬೆಂಗಳೂರು: ನಗರದಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣಾ ಮುಖಂಡರ ಸಭೆಯಲ್ಲಿ ಪಾಲ್ಗೊಂಡಿದ್ದ ಜಾತ್ಯತೀತ ಜನತಾದಳ (ಜೆಡಿಎಸ್) ರಾಷ್ಟ್ರೀಯ ಅಧ್ಯಕ್ಷರಾದ ಎಚ್‌ಡಿ ದೆವೇಗೌಡ ಅವರು, ಮಂಡ್ಯ ಜೆಡಿಎಸ್ ಅಭ್ಯರ್ಥಿ ಹಾಗೂ ಮೈಸೂರು ಮತ್ತು ಚಾಮರಾಜನಗರ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುವಂತೆ ಮುಖಂಡರಲ್ಲಿ ಮನವಿ ಮಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ನರೇಂದ್ರ ಮೋದಿ ಅವರು ದುರ್ಬಲ ಪ್ರಧಾನಮಂತ್ರಿ, ನಾನು ಪ್ರಬಲ ಸಿಎಂ ಎಂದು ಕೊಚ್ಚಿಕೊಂಡ ಸಿದ್ದರಾಮಯ್ಯ ಅವರ ಗರ್ವಭಂಗ ಈ ಲೋಕಸಭೆ ಚುನಾವಣೆಯಲ್ಲಿ ಆಗಬೇಕು” ಎಂದು ಗುಡುಗಿದ್ದಾರೆ.
ಜೆಡಿಎಸ್-ಬಿಜೆಪಿ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನರೇಂದ್ರ ಮೋದಿಯಂತಹ ಜಗಮೆಚ್ಚಿದ ನಾಯಕರ ಬಗ್ಗೆ ಲಘುವಾಗಿ ಮಾತನಾಡಿರುವ ಸಿದ್ದರಾಮಯ್ಯ ಅವರಿಗೆ ಈ ಚುನಾವಣೆಯಲ್ಲಿ ಪಾಠ ಕಲಿಸಬೇಕು. ಮೈಸೂರಿನಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲಿಸಿ, ಸಿದ್ದರಾಮಯ್ಯ ಗರ್ವಭಂಗ ಮಾಡಿ’ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕರು, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಜಿಟಿ ದೇವೇಗೌಡರಿಗೆ ನಿರ್ದೇಶನ ನೀಡಿದರು.
“ಮೈಸೂರು ಚಾಮರಾಜನಗರ ಕ್ಷೇತ್ರ ಗೆಲ್ಲುವ ಶಕ್ತಿ ಜಿ.ಟಿ.ದೇವೇಗೌಡರಿಗೆ ಇದೆ. ಸಿದ್ದರಾಮಯ್ಯ ಅವರ ಗರ್ವಭಂಗ ಆಗಲೇಬೇಕು. ಅವರ ಗರ್ವಭಂಗ ಆಗಬೇಕಾದರೆ ನಾವೆಲ್ಲರೂ ಛಲದಿಂದ ಒಟ್ಟಾಗಿ ಹೋಗಬೇಕು” ಎಂದು ವೇದಿಕೆಯಲ್ಲೇ ಹೇಳಿದರು.
‘ಮೈತ್ರಿಯಲ್ಲಿ ಎಲ್ಲಿಯೂ ಒಂದು ಸಣ್ಣ ಸಮಸ್ಯೆಯೂ ಕಾಣಿಸಿಕೊಳ್ಳಬಾರದು. ಒಬ್ಬ ಸಾಮಾನ್ಯ ಕಾರ್ಯಕರ್ತನನ್ನೂ ಬಿಡದೇ ಹೋರಾಟ ಮಾಡೋಣ. ಒಂದು ರಾಜ್ಯದ ಸಿಎಂ ಗಟ್ಟಿಯಾಗಿರಬೇಕಂತೆ, ದೇಶದ ಪ್ರಧಾನಿ ಬಹಳ ವೀಕ್ ಅಂತೆ.. ಅಬ್ಬಾ..! ಪ್ರಧಾನಿ ವಿರುದ್ಧವೇ ಕೋರ್ಟಿಗೆ ಹೋಗಿದ್ದಾರೆ.. ಎಂಥಾ ಜನ ಇವರು” ಎಂದು ಕರ್ನಾಟಕದ ಪಾಲಿನ ತೆರಿಗೆಗೆ ಆಗ್ರಹಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿದರು.
ಮನಮೋಹನ್ ಸಿಂಗ್ ‘ನೊ..’ ಎಂದಿದ್ದರು
‘ರೈತರ ಸಾಲದ ಮೇಲೆ ಬಡ್ಡಿ ಮನ್ನ ಮಾಡಿ ಎಂದು ಕೇಳಿದರೆ, ಮನಮೋಹನ್ ಸಿಂಗ್ ಅವರು ನೋ ಎಂದರು. ಇದೆಲ್ಲಾ ಗೊತ್ತಿದ್ದರೂ ಸಿದ್ದರಾಮಯ್ಯ ಅವರೇ ಕೋರ್ಟಿಗೆ ಅರ್ಜಿ ಹಾಕ್ತೀರಾ? ಸ್ಟ್ರಾಂಗೆಸ್ಟ್ ಮುಖ್ಯಮಂತ್ರಿ, ವೀಕೆಸ್ಟ್ ಪ್ರಧಾನಮಂತ್ರಿ! ಇಂತಹ ಮುಖ್ಯಮಂತ್ರಿ ನಮ್ಮ ರಾಜ್ಯದಲ್ಲಿದ್ದಾರೆ. ಆ ಮಹಾನುಬಾವರಿಗೆ, ನಮೋ ನಮಃ ಎಂದು ಮಾಜಿ ಪ್ರಧಾನಿಗಳು ಲೇವಡಿ ಮಾಡಿದ್ದಾರೆ.
‘ಸಿದ್ದರಾಮಯ್ಯನವರು ಜೆಡಿಎಸ್ ಎಲ್ಲಿದೆ ಅಂತಾರೆ. ಅವರಿಗೆ ಅಧಿಕಾರದ ಮದ. ಆ ಮದ ಇಳಿಸುವ ಸಾಮರ್ಥ್ಯ 91ನೇ ವರ್ಷದ ಈ ದೇವೇಗೌಡನಿಗಿದೆ. ಯಾರ ಭಯಕ್ಕೂ ನಾನು ಅಂಜುವನಲ್ಲ. ಆ ಭಯ ಅನ್ನೋದೇ ನನಗಿಲ್ಲ. ನನ್ನ ತಲೆ ಎನ್‌ಸೈಕ್ಲೋಪೀಡಿಯಾ. ಯಾವಾಗ, ಏನೆಲ್ಲಾ ಘಟನೆ ನಡೆದಿದೆ ಎಲ್ಲವನ್ನೂ ಹೇಳಬಲ್ಲೆ. ಯಡಿಯೂರಪ್ಪ ಅವರೇ ನನಗೆ ಎಲ್ಲಾ ಗೊತ್ತು ಎಂದ ಅವರು; ತುಮಕೂರಿಗೆ ಕಳಿಸಿ, ನನ್ನನ್ನೇ ಸೋಲಿಸಿದರು. ಕಾಂಗ್ರೆಸ್ ನವರು ಏನು ಮಾಡಿದರು ಎನ್ನುವುದು ಗೊತ್ತಿದೆ’ ಎಂದರು.
ಎಐಸಿಸಿಗೆ ಹಣ ಸಂದಾಯವಾಗುತ್ತಿದೆ
ಕಾಂಗ್ರೆಸ್ ರಾಜ್ಯವನ್ನು ಕೊಳ್ಳೆ ಹೊಡೆಯುತ್ತಿದೆ ಎಂದು ಆರೋಪ ಮಾಡಿದ ಗೌಡರು, “28 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಹಣ ಬಲವನ್ನು ನಾವು ಎದುರಿಸಬೇಕಿದೆ. ಹೊರ ರಾಜ್ಯಗಳಿಗೂ ಕಾಂಗ್ರೆಸ್ ನವರು ಹಣ ಸರಬರಾಜು ಮಾಡ್ತಿದ್ದಾರೆ. ತೆಲಾಂಗಣ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ಅಲ್ಲಿಗೆಲ್ಲ ರಾಜ್ಯದ ಹಣ ಹೋಗುತ್ತಿದೆ. ಕರ್ನಾಟಕದಿಂದ ಎಐಸಿಸಿಗೆ ಹಣ ಸಂದಾಯವಾಗುತ್ತಿದೆ’ ಎಂದು ಗಂಭೀರ ಆರೋಪ ಮಾಡಿದರು.
‘ಎರಡು ಪಕ್ಷಗಳ ಸಮನ್ವಯ ಸಮಿತಿ ಸಭೆ ನಡೆಯುತ್ತಿರುವುದು ಸಂತೋಷದಾಯಕ. ಭಾರತ ಮಾತೆ ಹಾಗೂ ಶ್ಯಾಮ್ ಪ್ರಕಾಶ್ ಮುಖರ್ಜಿ, ದೀನ್ ದಯಾಳ್ ಉಪಾಧ್ಯಾಯ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಅರ್ಪಿಸಿ ವೇದಿಕೆಗೆ ಬಂದಿದ್ದೇನೆ. ರಾಜ್ಯ ಉಸ್ತುವಾರಿ ರಾಧಮೋಹನ್ ದಾಸ್ ಎಲ್ಲಾ ಕ್ಷೇತ್ರಗಳ ಮಾಹಿತಿ ಪಡೆದಿದ್ದಾರೆ. ಎಲ್ಲಾ ಮಾಹಿತಿಯನ್ನ ಬಿಜೆಪಿ ವರಿಷ್ಠರಿಗೆ ನೀಡ್ತಿದ್ದಾರೆ. ಎರಡು ಪಕ್ಷದಲ್ಲಿ ಸಮನ್ವಯ ಸಾಧಿಸಬೇಕು. ಯಡಿಯೂರಪ್ಪ ಅವರ ಪಾತ್ರ ಬಹಳ ಮುಖ್ಯವಾಗಿದೆ. ಸಮಯ ತುಂಬಾ ಕಡಿಮೆ ಇದೆ. ಹಿಂದೆ ಆದಂತಹ ವಿಚಾರಗಳನ್ನ ಮರೆತು ನಾವೆಲ್ಲಾ ಒಂದಾಗಬೇಕಿದೆ. ಕಾರ್ಯಕರ್ತರು ಕೆಲಸ ಮಾಡಬೇಕಿದೆ’ ಎಂದು ಮನವಿ ಮಾಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 29, 2026

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 29, 2026
    In ದಿನಪತ್ರಿಕೆ
  • ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ
    In (ರಾಜ್ಯ ) ಜಿಲ್ಲೆ
  • ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ-ನಾರಾಯಣಪುರದಿಂದ ಕಾಲುವೆಗಳಿಗೆ ನೀರು
    In (ರಾಜ್ಯ ) ಜಿಲ್ಲೆ
  • ಜು.೨೯ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನ, ಪುಸ್ತಕ ಅನುದಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.