ವಿಜಯಪುರ: ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ಕಾರ್ಯಗಳಿಗೆ ೧೮ ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿಯೂ ಆಗಿರುವ ಟಿ. ಭೂಬಾಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ೧೯೮೬ ರನ್ವಯ ಯಾವುದೇ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ ೧೪ ವರ್ಷಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಲೋಕಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ವಿವಿಧ ರಾಜಕೀಯ ಪಕ್ಷಗಳು ಬಹು ವಿವಿಧ ಚಟುವಟಿಕೆಗಳಲ್ಲಿ ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಅಂದರೆ ಮಕ್ಕಳನ್ನು ಯಾವುದೇ ಚುಣಾವಣಾ ಪ್ರಚಾರದಲ್ಲಿ ಬಳಸದಂತೆ ಕರಪತ್ರ ಹಾಗೂ ಪೋಸ್ಟರ್ ಹಂಚಲು ಅಥವಾ ಘೋಷಣೆ ಕೊಗುವುದು, ಚುನಾವಣಾ ಸಭೆ, ಹೋಲ್ಡಿಂಗ್ ಕಟ್ಟುವುದು, ಪ್ರಚಾರ ವಾಹನದ ಮೇಲೆ ಮಕ್ಕಳನ್ನು ಕೂರಿಸುವುದು, ಒಟ್ಟಾರೆಯಾಗಿ ಪ್ರಚಾರ ಸಭೆಗಳಲ್ಲಿ ಮಕ್ಕಳನ್ನು ಬಳಸದಂತೆ ನಿರ್ದೇಶಿಸಲಾಗಿದೆ.
ಲೋಕಸಭಾ ಸಾರ್ವತ್ರಿಕ ಚುನಾವಣೆ ೨೦೨೪ಕ್ಕೆ ಯಾವುದೇ ಪಕ್ಷಗಳು ಚುನಾವಣಾ ಮತ್ತು ಪ್ರಚಾರ ಕಾರ್ಯಗಳಲ್ಲಿ ೧೮ ವರ್ಷದೊಳಗಿನ ಮಕ್ಕಳನ್ನು ಬಳಸಿಕಳ್ಳದಂತೆ ಕ್ರಮವಹಿಸಲು ಹಾಗೂ ಉಲ್ಲಂಘನೆ ಕಂಡು ಬಂದಲ್ಲಿ ಕಾಯ್ದೆಯ ಕಲಂ ಅನ್ವಯ ಅಗತ್ಯ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಧಿಸಿದ ಇಲಾಖೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

