Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪೊಲೀಸ್ ಸೇವೆ ಸ್ಮರಣೀಯ :ಟಿ.ಭೂಬಾಲನ್
(ರಾಜ್ಯ ) ಜಿಲ್ಲೆ

ಪೊಲೀಸ್ ಸೇವೆ ಸ್ಮರಣೀಯ :ಟಿ.ಭೂಬಾಲನ್

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ನಡೆದ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆ

ವಿಜಯಪುರ: ಪೊಲೀಸ್ ಪೇದೆಯಿಂದ ಹಿಡಿದು ಐಜಿಪಿವರೆಗಿನ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಸೇವೆಯು ಸದಾ ಸ್ಮರಿಸುವಂತಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದರು.
ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಇಲಾಖೆಯಿಂದ ಹಮ್ಮಿಕೊಂಡಿದ್ದ ವಿಜಯಪುರ ಜಿಲ್ಲಾ ಪೊಲೀಸ್ ಕಲ್ಯಾಣ ಹಾಗೂ ಧ್ವ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದಲ್ಲಿ ಎಷ್ಟೇ ಸಮಸ್ಯೆಗಳು ಉಧ್ಭವಿಸಿದರೂ ಕಾನೂನನ್ನು ಅನುಷ್ಠಾನಗೊಳಿಸಿ ಸಾರ್ವಜನಿಕರು ನೆಮ್ಮದಿಯಿಂದ ಇರಲು ಪೊಲೀಸ್ ಇಲಾಖೆ ಶ್ರಮಿಸುವದರಿಂದ ಪೊಲೀಸ್ ಸೇವೆ ಸ್ಮರಣೀಯವಾಗಿದೆ ಎಂದರು.
ನಿವೃತ್ತರಾಗಿರುವ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ಸೇವೆಯನ್ನು ಸ್ಮರಿಸಿ, ಗೌರವಿಸುವುದವುದಕ್ಕಾಗಿಯೇ ಪೊಲೀಸ್ ಕಲ್ಯಾಣ ಹಾಗೂ ಧ್ವ್ವಜ ದಿನಾಚರಣೆ ಆಚರಿಸಲಾಗುತ್ತದೆ. ನಿವೃತ್ತರಾದವರಿಗೆ ಸಮಸ್ಯೆಗಳೆನಾದರೂ ಇದ್ದಲ್ಲಿ ಜಿಲ್ಲಾಡಳಿತವನ್ನು ಸಂಪರ್ಕಿಸಿದಲ್ಲಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗುವುದು. ವಿವಿಧ ಇಲಾಖೆಗಳಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಪ್ರಸ್ತುತ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಪೊಲೀಸ್ ಸಿಬ್ಬಂದಿ ಉತ್ಸಾಹದಿಂದ ಕರ್ತವ್ಯ ನಿರ್ವಹಿಸುವದರೊಂದಿಗೆ ನ್ಯಾಯ ಸಮ್ಮತ, ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ ಮಾತನಾಡಿ, ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆ ಪಾತ್ರ ಪ್ರಮುಖವಾಗಿದೆ. ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಿದಲ್ಲಿ ಸಹಜವಾಗಿ ಜನಮನ್ನಣೆ ದೊರೆಯುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಅವರು ಪೊಲೀಸ್ ಇಲಾಖೆಯ ವಿವಿಧ ಚಟುವಟಿಕೆಗಳ ವಾರ್ಷಿಕ ವರದಿಯನ್ನು ವಾಚಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಇಂಡಿ ಗ್ರಾಮೀಣ ಠಾಣೆಯ ನಿವೃತ್ತ ಪೊಲೀಸ್ ಉಪ ನಿರೀಕ್ಷಕ ಜಿ.ಎಸ್.ಚಕ್ಕಡಿ ಅವರು ಕವಾಯತು ತಂಡಗಳ ಪರಿವೀಕ್ಷಣೆ ಹಾಗೂ ಗೌರವ ವಂದನೆ ಸ್ವೀಕರಿಸಿದರು.
ಪ್ರೊಬೇಷನರಿ ಡಿವೈಎಸ್‌ಪಿ ಮುರ್ತುಜಾ ಖಾದ್ರಿ ನೇತೃತ್ವದಲ್ಲಿ ಆರು ತುಕಡಿಗಳ ಆಕರ್ಷಕ ಪಥಸಂಚಲನ ನಡೆಯಿತು.
ಡಿಸಿ, ಸಿಇಒ ಹಾಗೂ ಎಸ್‌ಪಿ ಸಮ್ಮುಖದಲ್ಲಿ ಪೊಲೀಸ್ ಧ್ವ್ವಜಗಳನ್ನು ಬಿಡುಗಡೆಗೊಳಿಸಿ ವಿತರಿಸಲಾಯಿತು. ೨೦೨೩ನೇ ಸಾಲಿನಲ್ಲಿ ನಿವೃತ್ತರಾದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು ನಂತರ ಜಿಲ್ಲಾ ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ ಶಿಬಿರ ಜರುಗಿಸಲಾಯಿತು.
ಹೆಚ್ಚುವರಿ ಪೊಲೀಸ್ ಅಧೀಕ್ಷಕ-೧ ಶಂಕರ ಕೆ. ಮಾರಿಹಾಳ ಸ್ವಾಗತಿಸಿದರು, ಪಿಎಸ್‌ಐ ಕೃಷ್ಣವೇಣಿ ಹಾಗೂ ಪೊಲೀಸ್ ಪೇದೆ ದಶರಥ ನಿರೂಪಿಸಿದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ-೨ ರಾಮನಗೌಡ ಹಟ್ಟಿ ವಂದನಾರ್ಪಣೆ ಸಲ್ಲಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.