ವಿಜಯಪುರ: ಲೋಕಸಭೆ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಕಾರ್ಯಗಳನ್ನು ಚಾಚುತಪ್ಪದೇ ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾ ಅಧಿಕಾರಿಯೂ ಆಗಿರುವ ಟಿ.ಭೂಬಾಲ್ ಸೂಚಿಸಿದರು.
ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮಾಸ್ಟರ್ ಟ್ರೇರ‍್ಸ್ ಹಾಗೂ ಎಲ್ಲಾ ಸೆಕ್ಟರ್ ಅಧಿಕಾರಿಗಳ ತರಬೇತಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 2085 ಮತಗಟ್ಟೆಗಳಿವೆ. ಈ ಎಲ್ಲ ಮತಗಟ್ಟೆಯ ಕಾರ್ಯಗಳಿಗೆ ನಿಯೋಜನೆಗೊಂಡಿರುವ ಪಿಆರ್‌ಒಗಳು, ಪೋಲಿಂಗ್ ಅಧಿಕಾರಿಗಳು ಭಾರತೀಯ ಚುನಾವಣಾ ಆಯೋಗ ನೀಡಿರುವ ನಿರ್ದೇಶನದ ಅನುಸಾರ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಯಾವುದೇ ಕಾರಣಕ್ಕೂ ಮತದಾನದ ದಿನ ಇ ವಿ ಎಂ ಪ್ಯಾಟ್ ಮತಯಂತ್ರದಲ್ಲಿ ಯಾವುದೇ ತಾಂತ್ರಿಕ ಲೋಪದೋಷ ಉಂಟಾಗದಂತೆ ಮತ್ತು ಅದು ಚಾಲ್ತಿಯಲ್ಲಿ ಇರುವಂತೆ ನಿಗಾವಹಿಸಬೇಕು. ಮತಗಟ್ಟೆ ಕೇಂದ್ರದಲ್ಲಿ ಯಾವುದೆ ಗೊಂದಲ ಸಮಸ್ಯೆ ಕಂಡು ಬಂದರೆ ಕೂಡಲೇ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು ಎಂದರು.
ತರಬೇತಿಯಲ್ಲಿ ಮತದಾನದ ಹಿಂದಿನ ದಿನ ಹಾಗೂ ಮತದಾನ ದಿನದಂದು ನಿರ್ವಹಿಸಬೇಕಾದ ಕರ್ತ್ಯವ್ಯಗಳು ಮತ್ತು ಮತ ಯಂತ್ರಗಳ ನಿರ್ವಹಣೆ ಕುರಿತು ಪ್ರಾಯೋಗಿಕವಾಗಿ ಸಂಪೂರ್ಣ ರೀತಿಯಲ್ಲಿ ತಿಳಿಸಿಕೊಡಲಾಯಿತು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ, ವಿಜಯಪುರ ಉಪವಿಭಾಗಾಧಿಕಾರಿ ಶ್ವೇತಾ ಬೀಡಕರ್, ಇಂಡಿ ಉಪವಿಭಾಗಾಧಿಕಾರಿ ಅಭಿದ್ ಗದ್ಯಾಳ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿಗಳು ಇದ್ದರು.
Subscribe to Updates
Get the latest creative news from FooBar about art, design and business.
ಚುನಾವಣೆ ಕರ್ತವ್ಯ ಸಮರ್ಪಕವಾಗಿ ನಿರ್ವಹಿಸಿ :ಡಿಸಿ ಟಿ.ಭೂಬಾಲನ್
Related Posts
Add A Comment

