ವಿಜಯಪುರ: ಸಾರ್ವತ್ರಿಕ ಲೋಕಸಭಾ ಚುನಾವಣೆ-೨೦೨೪ರ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ವಿಶೇಷವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯಶಸ್ವಿಗೊಳಿಸಲು ಉದ್ದೇಶಿಸಲಾಗಿದೆ. ಜಿಲ್ಲೆಯ ಮತದಾನವು ಶೇ.೧೦೦ ರಷ್ಟು ಆಗಬೇಕು. ಅದಕ್ಕಾಗಿ ಎಲ್ಲರೂ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಸಿ.ಆರ್. ಮುಂಡರಗಿ ಹೇಳಿದರು.
ಅವರು ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಕಾರ್ಮಿಕ ಇಲಾಖೆ ವಿಜಯಪುರ ಇವರ ಸಹಯೋಗದಲ್ಲಿ ವಿಜಯಪುರ ನಗರದ ಹೊಸ ಬಸ್ ನಿಲ್ದಾಣ(ಸ್ಯಾಟ್ ಲೈಟ್)ದ ಹತ್ತಿರ ನೆರೆದಿರುವ ದಿನಗೂಲಿ ಕಾರ್ಮಿಕರು, ಪಾಟೀಲ ಪ್ಲಾನೆಟ್ ಶೋರೂಮ್ ಹಾಗೂ ಬಿಜ್ಜರಗಿ ಟಾಟಾ ಮೋಟರ್ಸ್ ಕಂಪೆನಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರೊಂದಿಗೆ ಮತದಾರರ ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡಿದರು.
ಮತದಾನ ಎಂಬುದು ನಮ್ಮ ಜವಾಬ್ದಾರಿಯಷ್ಟೇ ಅಲ್ಲ, ಹಕ್ಕು. ಸದೃಡ ಸಮಾಜ ನಿರ್ಮಾಣ ಮಾಡಲು ಮತದಾನ ಸಹಕಾರಿಯಾಗುತ್ತದೆ. ಕುಟುಂಬ, ನೆರೆಹೊರೆಯ ಜನರಿಗೆ ಮತದಾನದ ಮಹತ್ವವನ್ನು ಸಾರಿ ಜಾಗೃತಿ ಮೂಡಿಸಬೇಕಾಗಿದೆ. ಮತದಾನ ದಿನದಂದು ಎಲ್ಲ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ. ಇದರ ಸದುಪಯೋಗ ಪಡೆದುಕೊಂಡು ಮತದಾನ ಮಾಡಿ ಪ್ರಜಾಪ್ರಭುತ್ವದ ಹಬ್ಬವನ್ನು ನಾವೆಲ್ಲರೂ ಮತದಾನ ಮಾಡುವುದರ ಮೂಲಕ ಸಂಭ್ರಮಿಸೋಣ ಎಂದರು.
ಬಳಿಕ ಎಲ್ಲರೂ ಮತದಾರರ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.ಬಳಿಕ ಎಲ್ಲ ಅಧಿಕಾರಿಗಳು, ಸಿಬ್ಬಂದಿಯವರು ಹಾಗೂ ಕಾರ್ಮಿಕರು “ಚುನಾವಣಾ ಪರ್ವ ದೇಶದ ಗರ್ವ”, “ಮತದಾನ ನಮ್ಮೆಲ್ಲರ ಹಕ್ಕು”, “ಮತದಾನ ಮಾಡಿದವನೇ ಮಹಾಶೂರ”, “ನೋಂದಾಯಿಸಿ ನೋಂದಾಯಿಸಿ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ನೊಂದಾಯಿಸಿ”, “ಮಾಡಿ ಮಾಡಿ ಮತದಾನ”, “ಮತದಾರರ ಪಟ್ಟಿಯ ಮಾಹಿತಿ ತಿದ್ದುಪಡಿಗಾಗಿ ನಮೂನೆ ೮ ಬಳಸಿ” ಎಂಬ ಘೋಷಣೆಗಳನ್ನು ಕೂಗಿಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿಗಳಾದ ಎ. ಬಿ. ಅಲ್ಲಾಪೂರ, ಕಾರ್ಮಿಕ ಇಲಾಖೆಯ ಕಾರ್ಮಿಕ ಅಧಿಕಾರಿಗಳಾದ ಸಿದ್ದಪ್ಪ ಜಿ ಖೈನೂರ, ಕಾರ್ಮಿಕ ನಿರೀಕ್ಷಕರಾದ ಜಗದೇವಿ ಎಸ್ ಸಜ್ಜನ, ಜಿಲ್ಲಾ ಪಂಚಾಯತಿಯ ಸರೇಶ ಕೊಂಡಗೂಳಿ, ಅಮೋಘಿ ಗೌಳಿ, ವಿಶ್ವನಾಥ ಶಹಾಪೂರ, ಸುವರ್ಣ ಭಜಂತ್ರಿ ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

