ಮುದ್ದೇಬಿಹಾಳ: ತಾಲೂಕು ಪಂಚಾಯತ ಆವರಣದಲ್ಲಿ ಗುರುವಾರ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಜಾಥಾ ಮತ್ತು ಮಾನವ ಸರಪಳಿ ನಿರ್ಮಿಸುವ ಮೂಲಕ ಸ್ವೀಪ್ ಚಟುವಟಿಕೆ ಹಮ್ಮಿಕೊಳ್ಳಲಾಯಿತು.
ಚಟುವಟಿಕೆಯಲ್ಲಿ ತಾಲ್ಲೂಕಿನ ಲೈಂಗಿಕ ಕಾರ್ಯಕರ್ತೆಯರು ಮತ್ತು ಮಂಗಳಮುಖಿಯರು ಪಾಲ್ಗೊಂಡು ಮತದಾನ ಕುರಿತು ಜಾಗೃತಿ ಮೂಡಿಸಿದರು. ಲೈಂಗಿಕ ಕಾರ್ಯಕರ್ತೆಯರು ಮತ್ತು ಮಂಗಳಮುಖಿಯರಿಗೆ ಲೋಕಸಭಾ ಚುನಾವಣೆ ಹಾಗೂ ಮತದಾನ ಕುರಿತು ತಾಲೂಕು ಪಂಚಾಯತಿ ಯೋಜನಾಧಿಕಾರಿ ಖುಬಾಸಿಂಗ್ ಜಾಧವ್ ಅವರು ಮಾಹಿತಿ ನೀಡಿ ಕಡ್ಡಾಯವಾಗಿ ಮತದಾನ ಮಾಡುವಂತೆ ತಿಳಿಸಿದರು.
ತಾಲೂಕು ಪಂಚಾಯತ ವ್ಯವಸ್ಥಾಪಕ ಧೂಳಪ್ಪ ಅಂಜುಟಗಿ, ತಾ.ಪಂ.ಸಹಾಯಕ ಲೆಕ್ಕಾಧಿಕಾರಿ ವೀರೇಶ ಹೂಗಾರ, ಐಇಸಿ ಸಂಯೋಜಕ ಪರಮೇಶ ಹೊಸಮನಿ, ತಾಲೂಕು ವ್ಯವಸ್ಥಾಪಕ ಮಂಜುನಾಥ ಹಿರೇಮಠ ಚುನಾವಣೆ ವಿಷಯ ನಿರ್ವಾಹಕ ಎಸ್.ಎಸ್.ಬಂಗಾರಗುಂಡ ಹಾಗೂ ತಾಲೂಕಿನ ಎಲ್ಲ ಎಂ.ಬಿ.ಕೆ ಅವರು ಪಾಲ್ಗೊಂಡಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

