ಸಿಂದಗಿ: ಲೋಕಸಭಾ ಚುನಾವಣೆಯಲ್ಲಿ ಯಾವುದೇ ಆಸೆ ಅಮಿಷಗಳಿಗೆ ಒಳಗಾಗದೇ ಒಳ್ಳೆಯ ಅಭ್ಯರ್ಥಿಗೆ ಮತ ಚಲಾಯಿಸುವ ಮೂಲಕ ನಿಮ್ಮ ಹಕ್ಕನ್ನು ಚಲಾಯಿಸಿ. ಇದರಿಂದ ದೇಶದ ಅಭಿವೃದ್ದಿ ಸಾಧ್ಯ ಎಂದು ತಾಪಂ ನರೇಗಾ ಸಂಯೋಜಕ ಭೀಮರಾಯ ಚೌಧರಿ ಹೇಳಿದರು.
ತಾಲೂಕಿನ ಗುಬ್ಬೇವಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋರಗಿ ಗ್ರಾಮದ ಸರಕಾರಿ ಹಳ್ಳದಲ್ಲಿ ಹೊಳೆತ್ತುವ ಕಾಂಗಾರಿ ಸ್ಥಳದಲ್ಲಿ ತಾಪಂ ವತಿಯಿಂದ ಹಮ್ಮಿಕೊಂಡ ಮತದಾನ ಜಾಗೃತಿ ಅಭಿಯಾನದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿದರು.
ಇದೇ ಸಂದರ್ಭದಲ್ಲಿ ಪಂಚಾಯತ್ ಸಿಬ್ಬಂದಿ ಲಕ್ಷ್ಮಿ ಮಾದರ, ನರೇಗಾ ಕಾಯಕಕ್ಕೆ ಆಗಮಿಸಿದ ಶಾಂಭವಿ ಕೊಟರಗಸ್ತಿ ಸೇರಿದಂತೆ ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

