ದೇವರಹಿಪ್ಪರಗಿ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮತಕ್ಷೇತ್ರದ ಅಲ್ಪಸಂಖ್ಯಾತರ ಮತಗಳಿಂದಲೇ ಆಯ್ಕೆಯಾಗಿ ಈಗ ಬಿಜೆಪಿ ಪರ ಪ್ರಚಾರಕ್ಕೆ ಇಳಿದಿರುವ ಶಾಸಕ ರಾಜುಗೌಡ ಪಾಟೀಲ ಕೂಡಲೇ ಅಲ್ಪಸಂಖ್ಯಾತ ಸಮುದಾಯದ ಕ್ಷಮೆ ಕೇಳಬೇಕು ಎಂದು ಕರ್ನಾಟಕ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಆನಂದಗೌಡ ದೊಡ್ಡಮನಿ ಆಗ್ರಹಿಸಿದ್ದಾರೆ.
ಪಟ್ಟಣದಲ್ಲಿ ಗುರುವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ವಿರುದ್ಧ ಅಲ್ಪಸಂಖ್ಯಾತರ ಮತಪಡೆದು ಈಗ ನಿನ್ನೇಯಷ್ಟೇ ವಿಜಯಪುರದಲ್ಲಿ ಜರುಗಿದ ಬಿಜೆಪಿ-ಜೆಡಿಎಸ್ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು ನಾನು ಮೂಲತ ಬಿಜೆಪಿ ಪಕ್ಷದವನೇ ಎಂದು ಹೇಳಿಕೆ ನೀಡುವುದರ ಜೊತೆಗೆ ಬಿಜೆಪಿ ಪಕ್ಷದ ಪರ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ, ಇದು ಅಲ್ಪಸಂಖ್ಯಾತ ಸಮುದಾಯಕ್ಕೆ ಅವರು ಮಾಡಿದ ಮೋಸವಲ್ಲವೇ? ಶಾಸಕರಾಗಿ ಆಯ್ಕೆ ಆಗುವಾಗ ಅಲ್ಪಸಂಖ್ಯಾತರು ಹಾಗೂ ಅವರ ಮತಗಳು ಬೇಕಾದವು. ಈಗ ತಮ್ಮ ಪಕ್ಷದವರು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡ ತರುವಾಯ ಬಿಜೆಪಿ ಪರ ವಾಲಿದ್ದಾರೆ. ಅವರಿಗೆ ಅಲ್ಪಸಂಖ್ಯಾತರ ಕುರಿತು ನಿಜವಾಗಿಯೂ ಕಾಳಜಿ ಇದ್ದಲ್ಲಿ ತಮ್ಮ ಪಕ್ಷದ ನಾಯಕರ ನಿರ್ಧಾರವನ್ನು ವಿರೋಧಿಸಬೇಕಾಗಿತ್ತು. ಆದರೆ ಅವರು ಯಾವುದೇ ವಿರೋಧ ವ್ಯಕ್ತಪಡಿಸದೇ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಪ್ರಚಾರಕ್ಕೆ ಇಳಿದಿದ್ದು ಅಲ್ಪಸಂಖ್ಯಾತರ ಭಾವನೆಗಳಿಗೆ ಧಕ್ಕೆಯಾಗಿದೆ. ಆದ್ದರಿಂದ ಕೂಡಲೇ ಅಲ್ಪಸಂಖ್ಯಾತ ಸಮುದಾಯದ ಕ್ಷಮೆ ಕೇಳಬೇಕು ಎಂದಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

