ವಿಜಯಪುರ: ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ವತಿಯಿಂದ ಲೋಕಸಭಾ ಚುನಾವಣೆ ಕುರಿತು ಸಭೆಯನ್ನು ಶುಕ್ರವಾರ ಕರೆಯಲಾಗಿತ್ತು.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಅಧ್ಯಕ್ಷ ಸಾಹೇಬಗೌಡ ಬಿರಾದಾರ ವಹಿಸಿ ಮಾತನಾಡುತ್ತಾ, ಪ್ರಸ್ತುತ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ವಿಜಯಪುರ ಜಿಲ್ಲೆಯ ಎಲ್ಲ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ರಾಜ್ಯ ಸರಕಾರ ಕೊಟ್ಟ ೫ ಗ್ಯಾರಂಟಿ ಯೋಜನೆಗಳ ಕುರಿತು ಹಾಗೂ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪಂಚ ನ್ಯಾಯಗಳನ್ನು ಜಾರಿಗೆ ತರುವ ಬಗ್ಗೆ ಗ್ರಾಮೀಣ ಪ್ರದೇಶದ ಎಲ್ಲ ಮಹಿಳೆಯರಿಗೆ, ಯುವಕರಲ್ಲಿ, ರೈತರಲ್ಲಿ ಜಾಗೃತಿಯನ್ನು ಮೂಡಿಸಿ ಕೇಂದ್ರ ಬಿಜೆಪಿ ಸರಕಾರದ ವೈಪಲ್ಯಗಳನ್ನು ಮನವರಿಕೆ ಮಾಡಿಕೊಟ್ಟು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಪ್ರೊ.ಎಚ್.ಆರ್. (ರಾಜು) ಆಲಗೂರ ರವರ ಗೆಲುವಿಗೆ ಹಿಂದುಳಿದ ವರ್ಗಗಳ ವತಿಯಿಂದ ಶ್ರಮಿಸಬೇಕೆಂದು ಕರೆ ನೀಡಿದರು.
ಸದರಿ ಸಭೆಯಲ್ಲಿ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಮಹಾಲಿಂಗ ಉಪ್ಪಾರ, ಸತೀಶ ಅಡವಿ, ಕಾರ್ಯದರ್ಶಿ ಶ್ರೀಶೈಲ ವಾಲಿಕಾರ, ಜಿಲ್ಲಾ ಸಮಿತಿ ಉಪಾಧ್ಯಕ್ಷರಾದ ಅಶೋಕ ಜೈನಾಪೂರ, ಪ್ರಧಾನ ಕಾರ್ಯದರ್ಶಿಗಳಾದ ದೇವೇಂದ್ರ ವಾಲಿಕಾರ, ಭೀಮರಾಯ ಸೀತಿಮನಿ, ಶಾಂತಪ್ಪ ಹೊಸಮನಿ, ಬೀರಪ್ಪ ಜುಮನಾಳ, ನಿಂಗಪ್ಪ ರೆಬಿನಾಳ, ಸುರೇಶ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

