ಮುದ್ದೇಬಿಹಾಳ: ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಮ್ ಅವರ ೧೧೭ ನೇ ಜಯಂತ್ಯುತ್ಸವವನ್ನು, ಪಟ್ಟಣ ಆಲಮಟ್ಟಿ ರಸ್ತೆಯಲ್ಲಿರುವ ಡಾ.ಬಾಬು ಜಗಜೀವರಾಮ್ ಅವರ ವೃತ್ತಕ್ಕೆ ಹೂಮಾಲೆಗಳಿಂದ ಅಲಂಕರಿಸುವ ಮೂಲಕ, ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶೀಲ್ದಾರ ಕಚೇರಿಯಲ್ಲಿ ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಸರಳ ಹಾಗೂ ಸುಂದರವಾಗಿ ಆಚರಿಸಲಾಯಿತು.
ಈ ವೇಳೆ ತಹಶೀಲ್ದಾರ ಬಸವರಾಜ ನಾಗರಾಳ, ತಾಲೂಕು ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ಎಸ್.ಎಸ್.ಕಲ್ಮನಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜೀವ ತಿಪರೆಡ್ಡಿ, ತಾಲೂಕು ಆರೋಗ್ಯ ಅಧಿಕಾರಿ ಡಾ.ಸತೀಶ ತಿವಾರಿ, ಪಶು ಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಶಿವಾನಂದ ಮೇಟಿ, ಮುಖಂಡರಾದ ಡಿ.ಬಿ.ಮುದೂರ, ವಾಯ್.ಎಚ್.ವಿಜಯಕರ, ಸಿ.ಜಿ.ವಿಜಯಕರ, ಶಿವು ಶಿವಪೂರ, ಯಲ್ಲಪ್ಪ ಚಲವಾದಿ, ಅಂಗವಿಕಲರ ಒಕ್ಕೂಟದ ಅಧ್ಯಕ್ಷ ಎಸ್.ಕೆ.ಘಾಟಿ ಸೇರಿದಂತೆ ಮತ್ತೀತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

