ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್. ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆಯಲ್ಲಿ ಸ್ವಸ್ಥವೃತ್ತ ವಿಭಾಗದ ವತಿಯಿಂದ ವಿಶ್ವ ಆರೋಗ್ಯ ದಿನಾಚಾರಣೆ ಅಂಗವಾಗಿ ಏಪ್ರಿಲ್ 8 ರಂದು ಸೋಮವಾರ ಮಧುಮೇಹ (ಸಕ್ಕರೆ ಕಾಯಿಲೆ) ಪೀಡಿತ ರೋಗಿಗಳಿಗೆ ಉಚಿತ ರಕ್ತ ತಪಾಸಣೆ ಹಾಗೂ ಆಯುರ್ವೇದ ಔಷಧಿ ವಿತರಣೆ ಶಿಬಿರವನ್ನು ಆಯೋಜಿಸಲಾಗಿದೆ.
ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಕಡ್ಲಿಮಟ್ಟಿ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತರು ಮೊಬೈಲ್ ಸಂಖ್ಯೆ- 8904446624 ಗೆ ಸಂಪರ್ಕಿಸಲು ಕೋರಲಾಗಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
