ವಿಜಯಪುರ: ಲೋಕಸಭೆ ಸಾರ್ವತ್ರಿಕ ಚುನಾವಣೆ-೨೦೨೪ರ ಸಲುವಾಗಿ ಪ್ರಿಸೈಡಿಂಗ್, ಸಹಾಯಕ ಪ್ರಿಸೈಡಿಂಗ್ ಅಧಿಕಾರಿಗಳಿಗೆ ಏಪ್ರಿಲ್ ೭ರಂದು ಬೆಳಗ್ಗೆ ೯.೩೦ ಘಂಟೆಗೆ ತರಬೇತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಮುದ್ದೇಬಿಹಾಳ ಮತಕ್ಷೇತ್ರ ವ್ಯಾಪ್ತಿಯಲ್ಲಿ ಎಮ್.ಜಿ.ವಿ.ಸಿ ಕಾಲೇಜು ನಲ್ಲಿ, ದೇವರ ಹಿಪ್ಪರಗಿ ಮತಕ್ಷೇತ್ರದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಪ್ರಾಥಮಿಕ ಹಾಗೂ ಪ್ರೌಡ ಶಾಲೆಯಲ್ಲಿ, ಬಸವನ ಬಾಗೇವಾಡಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬಸವೇಶ್ವರ ಪಿಯು ಕಾಲೇಜಿನಲ್ಲಿ, ಬಬಲೇಶ್ವರ ಮತಕ್ಷೇತ್ರ ವ್ಯಾಪ್ತಿಯಲ್ಲಿ ವಿವಿ ದರಬಾರ ಪ್ರೌಡ ಶಾಲೆ ಹಾಗೂ ಪಿಯು ಕಾಲೇಜಿ ವಿಜಯಪುರನಲ್ಲಿ, ನಾಗಠಾಣ ಮತಕ್ಷೇತ್ರ ವ್ಯಾಪ್ತಿಯಲ್ಲಿ ಪಿಡಿಜೆ ಪ್ರೌಡ ಶಾಲೆ ವಿಜಯಪುರ, ಇಂಡಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ, ಸಿಂದಗಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಆರ್ ಡಿ. ಪಾಟೀಲ್ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಆದ್ದರಿಂದ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ಪ್ರಿಸೈಡಿಂಗ್, ಸಹಾಯಕ ಪ್ರಿಸೈಡಿಂಗ್ ಅಧಿಕಾರಿಗಳು ತರಬೇತಿಗೆ ಕಡ್ಡಾಯವಾಗಿ ಹಾಜರು ಇರಬೇಕು ಎಂದು ಚುನಾವಣೆ ಅಧಿಕಾರಿಯೂ ಆದ ಜಿಲ್ಲಾಧಿಕಾರಿ ಟಿ. ಭೂಬಾಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
