ಅಫಜಲಪುರ: ಸಮಾಜವಾದಿ ಪಕ್ಷದ ನೂತನ ರಾಜ್ಯ ಉಪಾಧ್ಯಕ್ಷರನ್ನಾಗಿ ಮಹಾಂತೇಶ ಡಿ ಪಾಟೀಲ್ ಸೊನ್ನ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಎನ್. ಮಂಜಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಾಂತೇಶ ಪಾಟೀಲ್ ಅವರ ಸಂಘಟನಾ ಶಕ್ತಿಯನ್ನು ಗುರುತಿಸಿ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ನೇಮಿಸಲಾಗಿದೆ. ಪಾಟೀಲ ಅವರು ಈ ಮೊದಲು ಉಪನ್ಯಾಸಕರಾಗಿ, ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷರಾಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಅಲ್ಲದೆ ಹಿಂದುಳಿದ ವರ್ಗಗಳ ಸಲಹಾ ಮಂಡಳಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಹೀಗಾಗಿ ಇವರ ರಾಜಕೀಯ ಜೀವನದ ಹಿರಿತನದ ಆಧಾರದ ಮೇಲೆ ಸಮಾಜವಾದಿ ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಅವರು ಪಕ್ಷದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ಪಕ್ಷ ಸಂಘಟನೆ ಮಾಡುವಲ್ಲಿ ಸಫಲರಾಗುತ್ತಾರೆನ್ನುವ ಆಶಾಭಾವನೆ ಇದೆ ಎಂದರು.
Subscribe to Updates
Get the latest creative news from FooBar about art, design and business.
Related Posts
Add A Comment

