Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 29, 2026

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇದು ನನ್ನ ಕೊನೆಯ ಚುನಾವಣೆ :ಜಿಗಜಿಣಗಿ
(ರಾಜ್ಯ ) ಜಿಲ್ಲೆ

ಇದು ನನ್ನ ಕೊನೆಯ ಚುನಾವಣೆ :ಜಿಗಜಿಣಗಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಜಿಲ್ಲೆಯ ಅಭಿವೃದ್ಧಿಗಾಗಿ ಕಳೆದ ೧೦ ವರ್ಷದಲ್ಲಿ ಸಾಕಷ್ಟು ಅನುದಾನ ತರುವ ಅಭಿವೃದ್ಧಿಗೆ ನಾಂದಿ ಹಾಡಿದ್ದೇನೆ. ಇದು ನನ್ನ ಕೊನೆಯ ಚುನಾವಣೆಯಾಗಿರುವದರಿಂದಾಗಿ ವಿಜಯಪುರ ಜಿಲ್ಲೆ ಇನ್ನಷ್ಟು ಅಭಿವೃದ್ಧಿಗಾಗಿ ಎಲ್ಲ ಕಾರ್ಯಕರ್ತರು ಶ್ರಮಿಸಿ ಬಹುಮತದೊಂದಿಗೆ ಆಯ್ಕೆ ಮಾಡುವ ಮೂಲಕ ಮೂರನೇ ಬಾರಿಗೆ ನರೇಂದ್ರ ಮೋದಿ ಅವರನ್ನು ದೇಶದ ಪ್ರಧಾನಿಯನ್ನಾಗಿ ಮಾಡಬೇಕೆಂದು ಸಂಸದ, ಲೋಕಸಭೆ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಹೇಳಿದರು.
ಬಸವನಬಾಗೇವಾಡಿ ಮತಕ್ಷೇತ್ರದ ಗೊಳಸಂಗಿ ಗ್ರಾಮದ ಸಂಗಮೇಶ್ವರ ಕಲ್ಯಾಣ ಮಂಟಪದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಗೊಳಸಂಗಿ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ, ಕುಡಿಯುವ ನೀರು ಯೋಜನೆ, ಗ್ರಾಮೀಣ ರಸ್ತೆ, ಎನ್ಟಿಪಿಸಿ, ರೈಲ್ವೆ ಬ್ರಾಡಗೇಜ್ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ಅಭಿವೃದ್ಧಿ ಮಾಡಲಾಗಿದೆ. ನಾನು ಕಳೆದ ೪೫ ವರ್ಷಗಳಿಂದ ರಾಜಕಾರಣದಲ್ಲಿದ್ದುಕೊಂಡು ಕೇಂದ್ರ, ರಾಜ್ಯದಲ್ಲಿ ಸಚಿವನಾಗಿ, ಸಂಸದನಾಗಿ ಜನರ ಆಶೀರ್ವಾದ ಬಲದಿಂದ ಕಾರ್ಯನಿರ್ವಹಿಸಿದ್ದೇನೆ. ವಿಜಯಪುರ ಜಿಲ್ಲೆಯಲ್ಲಿ ಇನ್ನಷ್ಟು ಅಭಿವೃದ್ಧಿ ಮಾಡುವ ಆಸೆ ನನ್ನದಾಗಿದೆ. ಈ ಆಸೆಯನ್ನು ಪೂರೈಸಲು ಮತಬಾಂಧವರು ಆಯ್ಕೆ ಮಾಡಬೇಕೆಂದು ಮನವಿ ಮಾಡಿಕೊಂಡರು.
ಕಳೆದ ೧೦ ವರ್ಷದಲ್ಲಿ ದೇಶವನ್ನು ಎಲ್ಲ ಕ್ಷೇತ್ರದಲ್ಲಿ ಮುಂದುವರಿಯುವಂತೆ ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ. ನಮ್ಮ ದೇಶವು ಆರ್ಥಿಕ ಪರಿಸ್ಥಿತಿಯಲ್ಲಿ ೧೫ ಸ್ಥಾನದಲ್ಲಿರುವುದನ್ನು ೫ ನೇ ಸ್ಥಾನಕ್ಕೆ ಬರುವಂತೆ ಪ್ರಧಾನಿ ಮಾಡಿದ್ದಾರೆ. ಮೂರನೇ ಬಾರಿಗೆ ಅವರು ಪ್ರಧಾನಿಯಾದರೆ ಈ ಸ್ಥಾನ ೩ ನೇ ಸ್ಥಾನಕ್ಕೆ ಬರಲಿದೆ. ದೇಶದ ಪ್ರತಿಯೊಬ್ಬರ ಮನಸ್ಸಿನಲ್ಲಿ ನರೇಂದ್ರ ಮೋದಿ ಇದ್ದಾರೆ. ಮೂರನೇ ಬಾರಿಗೆ ದೇಶದ ಪ್ರಧಾನಿ ನರೇಂದ್ರ ಮೋದಿ ಖಂಡಿತ ಆಗುತ್ತಾರೆ. ಇದನ್ನು ತಪ್ಪಿಸಲು ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ ಎಂದರು.
ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಮಾತನಾಡಿ, ನಾವೆಲ್ಲರೂ ಹೆಮ್ಮೆ ಪಡುವಂತೆ ಪ್ರಧಾನಿ ನರೇಂದ್ರ ಮೋದಿ ನಮಗೆ ಸಿಕ್ಕಿದ್ದಾರೆ. ಇಂತಹ ಪ್ರಧಾನಿ ಮೂರನೇ ಬಾರಿಗೆ ಪ್ರಧಾನಿಯಾದರೆ ದೇಶ ಇನ್ನಷ್ಟು ಅಭಿವೃದ್ಧಿಯಾಗುವದರಲ್ಲಿ ಎರಡು ಮಾತಿಲ್ಲ. ಇವರ ಕೈ ಬಲಪಡಿಸಬೇಕಾದರೆ ನಮ್ಮ ಕಾರ್ಯಕರ್ತರು ಸಂಸದ ರಮೇಶ ಜಿಗಜಿಣಗಿ ಅವರನ್ನು 3 ಲಕ್ಷ 70 ಸಾವಿರ ಮತಗಳ ಅಂತರದಿಂದ ಆಯ್ಕೆಯಾಗುವಂತೆ ಮಾಡಬೇಕು. ನಮ್ಮ ಎಲ್ಲ ಕಾರ್ಯಕರ್ತರು ಸಕ್ರಿಯವಾಗಿ ಕಾರ್ಯನಿರ್ವಹಿಸುವ ಮೂಲಕ ಸರಳ ಸಜ್ಜನಿಕೆ ರಾಜಕಾರಣಿಯಾಗಿರುವ ರಮೇಶ ಜಿಗಜಿಣಗಿ ಅವರನ್ನು ಆಯ್ಕೆ ಮಾಡಬೇಕೆಂದು ಮನವಿ ಮಾಡಿಕೊಂಡರು.
ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಕೂಚಬಾಳ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ ಮಾತನಾಡಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಗುರಲಿಂಗಪ್ಪ ಅಂಗಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾಬು ಮಶ್ಯಾಳಷ ಈರಣ್ಣ ರಾವೂರ, ಬಿಜೆಪಿ ಮಂಡಳ ಅಧ್ಯಕ್ಷ ಸಿದ್ರಾಮ ಕಾಖಂಡಕಿ, ಮಂಡಳ ಪ್ರಧಾನ ಕಾರ್ಯದರ್ಶಿ ಬಸವರಾಜ ಬಿಜಾಪುರ, ಜಿಪಂ ಮಾಜಿ ಸದಸ್ಯರಾದ ಸಂತೋಷ ನಾಯಕ, ಬೀರಪ್ಪ ಸಾಸನೂರ, ಗ್ರಾಪಂ ಅಧ್ಯಕ್ಷ ಕೇಶವ ಪವಾರ, ಗ್ರಾಪಂ ಉಪಾಧ್ಯಕ್ಷೆ ಸುನೀತಾ ಚಿಮ್ಮಲಗಿ, ಮುಖಂಡರಾದ ಎಂ.ಆರ್.ಹೆಬ್ಬಾಳ, ಸಂಗಪ್ಪ ಕೊಲ್ಹಾರ, ಗಂಗಾರಾಮ ಪವಾರ, ಟಿ.ಟಿ.ಹಗೆದಾಳ ಇತರರು ಇದ್ದರು. ವಿನೋಧ ಭಜಂತ್ರಿ ಸ್ವಾಗತಿಸಿದರು. ಅಮರೇಶ ಪಾಟೀಲ ನಿರೂಪಿಸಿದರು.ಛಾಯಾ ಯಾಧವ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 29, 2026

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 29, 2026
    In ದಿನಪತ್ರಿಕೆ
  • ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ
    In (ರಾಜ್ಯ ) ಜಿಲ್ಲೆ
  • ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ-ನಾರಾಯಣಪುರದಿಂದ ಕಾಲುವೆಗಳಿಗೆ ನೀರು
    In (ರಾಜ್ಯ ) ಜಿಲ್ಲೆ
  • ಜು.೨೯ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನ, ಪುಸ್ತಕ ಅನುದಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.